ದೇಶ

"ಓವೈಸಿ ದೊಡ್ಡ ನಾಯಕ ಅವರ ಸವಾಲು ಸ್ವೀಕರಿಸುತ್ತೇವೆ ": ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ 

Srinivas Rao BV

ನವದೆಹಲಿ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ, ರಾಜಕೀಯ ಹೇಳಿಕೆಗಳು ಚುರುಕುಪಡೆಯುತ್ತಿವೆ. 

2022  ವಿಧಾನಸಭಾ ಚುನಾವಣೆಯಲ್ಲಿ ಅಸಾದುದ್ದೀನ್ ಓವೈಸಿ ಅವರ ಎಂಐಎಂ ಪಕ್ಷವೂ 100 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದ್ದು, ಈ ಬಗ್ಗೆ ಯೋಗಿ ಆದಿತ್ಯನಾಥ್ ಪ್ರತಿಕ್ರಿಯೆ ನೀಡಿದ್ದಾರೆ. ಓವೈಸಿ ದೇಶದ ದೊಡ್ಡ ರಾಜಕೀಯ ನಾಯಕ, 2022 ರಲ್ಲಿ ಅವರು ಬಿಜೆಪಿಗೆ ಸವಾಲೊಡ್ಡುವುದಾದರೆ ಅದನ್ನು ಬಿಜೆಪಿಯ ಕಾರ್ಯಕರ್ತ ಸ್ವೀಕರಿಸುತ್ತಾರೆ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ವಿಧಾನಸಭಾ ಚುನಾವಣೆಯ ದಿಕ್ಸೂಚಿ ಎಂದೇ ಬಿಂಬಿಸಲಾಗಿದ್ದ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ 75 ಸ್ಥಾನಗಳ ಪೈಕಿ 67 ರಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದೆ. ಈ ಬಗ್ಗೆಯೂ ಸಿಎಂ ಯೋಗಿ ಆದಿತ್ಯನಾಥ್ ಪ್ರತಿಕ್ರಿಯೆ ನೀಡಿದ್ದು,  2022 ರಲ್ಲಿ ಬಿಜೆಪಿ 300ಕ್ಕೂ ಹೆಚ್ಚಿನ ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

75 ಕ್ಷೇತ್ರಗಳ ಪೈಕಿ 67 ಪಂಚಾಯತ್ ಸ್ಥಾನಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. 2014 ರ ಲೋಕಸಭೆ ಸಾರ್ವತ್ರಿಕ ಚುನಾವಣೆಯಲ್ಲಿ, 2017 ರ ವಿಧಾನಸಭೆ ಸಾರ್ವತ್ರಿಕ ಚುನಾವಣೆ, 2019 ರ ಲೋಕಸಭಾ ಚುನಾವಣೆಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಈಗ 2022 ರ ವಿಧಾನಸಭಾ ಚುನಾವಣೆಗಳಲ್ಲಿಯೂ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
 
ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿರುವುದರಿಂದ ಬಿಜೆಪಿ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸುತ್ತೇನೆ ಬಿಜೆಪಿಯ ಪಂಚಾಯತ್ ಮುಖ್ಯಸ್ಥರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಕೋವಿಡ್-19 ಹೊರತಾಗಿಯೂ ಯಶಸ್ವಿಯಾಗಿ ಚುನಾವಣೆ ನಡೆಸಲಾಗಿದೆ" ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

SCROLL FOR NEXT