ಸಿಬಿಎಸ್ ಇ 10, 12ನೇ ತರಗತಿ ಪಠ್ಯಕ್ರಮ ಎರಡು ಅವಧಿಗೆ ವಿಂಗಡಣೆ, ಪ್ರತಿ ಅವಧಿ ಅಂತ್ಯದಲ್ಲಿ ಪರೀಕ್ಷೆ
ಕೋವಿಡ್ ಸಾಂಕ್ರಾಮಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ 2021-22ನೇ ಶೈಕ್ಷಣಿಕ ವರ್ಷದಲ್ಲಿ 10 ಮತ್ತು 12ನೇ ತರಗತಿಯ ಪಠ್ಯಕ್ರಮವನ್ನು ಬದಲಾಯಿಸಿ ಎರಡು ಅವಧಿಗಳಿಗೆ ವಿಂಗಡಿಸಲಾಗಿದೆ.
ನವದೆಹಲಿ: ಕೋವಿಡ್ ಸಾಂಕ್ರಾಮಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ 2021-22ನೇ ಶೈಕ್ಷಣಿಕ ವರ್ಷದಲ್ಲಿ 10 ಮತ್ತು 12ನೇ ತರಗತಿಯ ಪಠ್ಯಕ್ರಮವನ್ನು ಬದಲಾಯಿಸಿ ಎರಡು ಅವಧಿಗಳಿಗೆ ವಿಂಗಡಿಸಲಾಗಿದ್ದು, ಪ್ರತಿ ಅವಧಿಯ ಕೊನೆಯಲ್ಲಿ ಪರೀಕ್ಷೆಗಳನ್ನು ನಡೆಸಲು ಕೇಂದ್ರೀಯ ಪೌಢ ಶಿಕ್ಷ ಮಂಡಳಿ(ಸಿಬಿಎಸ್ಇ) ನಿರ್ಧರಿಸಿದೆ.
ಈ ಕುರಿತಂತೆ ಸಿಬಿಎಸ್ ಇ ಸೋಮವಾರ ಪ್ರಕಟಣೆ ಹೊರಡಿಸಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದ ಪಠ್ಯಕ್ರಮವನ್ನು ಎರಡು ಅವಧಿಗಳಿಗೆ ವಿಂಗಡಿಸಲಾಗಿದೆ. ವಿಂಗಡಿಸಲಾದ ಪಠ್ಯಕ್ರಮದ ಆಧಾರದಡಿ ಪ್ರತಿ ಅವಧಿಯ ಕೊನೆಯಲ್ಲಿ ಪರೀಕ್ಷೆಯನ್ನು ಮಂಡಳಿ ನಡೆಸಲಿದೆ ಎಂದು ಹೇಳಿದೆ.
ಶೈಕ್ಷಣಿಕ ವರ್ಷದ ಕೊನೆಯಲ್ಲಿ ಮಂಡಳಿ ಪರೀಕ್ಷೆಗಳನ್ನು ತೆಗೆದುಕೊಳ್ಳುವ ಸಂಭವನೀಯತೆ ಹೆಚ್ಚಿಸುವ ಉದ್ದೇಶದಿಂದ ಈ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಹಿಂದಿನ ಶೈಕ್ಷಣಿಕ ವರ್ಷದಂತೆ ಪಠ್ಯಕ್ರಮದಲ್ಲಿ ಮಾರ್ಪಾಡು ಮಾಡಲಾಗಿದ್ದು, ಈ ತಿಂಗಳ ಅಂತ್ಯದ ವೇಳೆಗೆ ಹೊಸ ಪಠ್ಯಕ್ರಮದ ಬಗ್ಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಮಂಡಳಿ ತಿಳಿಸಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.