ಸಂಗ್ರಹ ಚಿತ್ರ 
ದೇಶ

ಭಾರತದಲ್ಲಿ ಕೊರೋನಾ ಮತ್ತಷ್ಟು ಇಳಿಕೆ: ದೇಶದಲ್ಲಿಂದು 39,796 ಹೊಸ ಕೇಸ್ ಪತ್ತೆ, 723 ಮಂದಿ ಸಾವು

ಭಾರತದಲ್ಲಿ ಕೊರೋನಾ ವೈರಸ್ ಪ್ರಕರಣಗಳಲ್ಲಿ ಮತ್ತಷ್ಟು ಇಳಿಕೆಯಾಗಿದ್ದು, ಸೋಮವಾರ ಕೊನೆಗೊಂಡ 24 ಗಂಟೆಗಳ ಅವಧಿಯಲ್ಲಿ 39,796 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 3,05,85,229ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ನವದೆಹಲಿ: ಭಾರತದಲ್ಲಿ ಕೊರೋನಾ ವೈರಸ್ ಪ್ರಕರಣಗಳಲ್ಲಿ ಮತ್ತಷ್ಟು ಇಳಿಕೆಯಾಗಿದ್ದು, ಸೋಮವಾರ ಕೊನೆಗೊಂಡ 24 ಗಂಟೆಗಳ ಅವಧಿಯಲ್ಲಿ 39,796 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 3,05,85,229ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ಇನ್ನು ಇದೇ ಅವಧಿಯಲ್ಲಿ 723 ಮಂದಿ ಸಾವನ್ನಪ್ಪಿದ್ದು, ಇದರೊಂದಿಗೆ ಮೃತರ ಸಂಖ್ಯೆ 4,02,728ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ. 

ಮತ್ತೊಂದೆಡೆ ಸಕ್ರಿಯ ಸೋಂಕಿತರ ಸಂಖ್ಯೆ 4,82,071ಕ್ಕೆ ಕುಸಿದಿದ್ದು, ಹಲವು ಬಳಿಕ ದೇಶದಲ್ಲಿ ದಾಖಲಾಗಿರುವ ಅತೀ ಕನಿಷ್ಠ ಸಕ್ರಿಯ ಸೋಂಕಿತರ ಸಂಖ್ಯೆ ಇದಾಗಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 42,352  ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 2,97,00,430ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 15,22,504 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 41,97,77,457 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. 

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ  35,28,92,046 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ