ದೇಶ

ಪಂಜಾಬ್ ಬಿಕ್ಕಟ್ಟು: ನಾಳೆ ಸೋನಿಯಾ, ಅಮರೀಂದರ್ ಸಿಂಗ್ ಭೇಟಿ

Nagaraja AB

ಚಂಡೀಘಡ: ಪಂಜಾಬ್ ಕಾಂಗ್ರೆಸ್ ನಲ್ಲಿ ತಲೆದೋರಿರುವ ಬಿಕ್ಕಟ್ಟಿಗೆ ಪರಿಹಾರ ಕಂಡುಹಿಡಿಯುವ ಪ್ರಯತ್ನದ ಭಾಗವಾಗಿ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ನಾಳೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮುಂದಿನ ವರ್ಷ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಬಣವಾದದಿಂದ ಹೊರಬರಲು ಒಂದು ಮಾರ್ಗವನ್ನು ಕಂಡುಕೊಳ್ಳಲು ಕೇಂದ್ರದ ವರಿಷ್ಠರು ಪ್ರಯತ್ನಿಸುತ್ತಿದ್ದಾರೆ. ಮತ್ತು ಅಮರೀಂದರ್ ಸಿಂಗ್ ಮತ್ತು ನವಜೋತ್ ಸಿಂಗ್ ಸಿಧು ಸೇರಿದಂತೆ ಭಿನ್ನಮತದ ಶಾಸಕರೊಂದಿಗೆ ಮಾತುಕತೆ ನಡೆಸಲು ಸಮಿತಿಯೊಂದನ್ನು ರಚಿಸಿದೆ. 

ಕೇಂದ್ರದ ನಾಯಕರು ಮುಖ್ಯಮಂತ್ರಿ ಹುದ್ದೆಯನ್ನು ಗಮನದಲ್ಲಿಟ್ಟುಕೊಂಡು ಜಾತಿ, ಸಮುದಾಯ ಎಲ್ಲಾವನ್ನು ನೋಡಿಕೊಂಡು ಪಂಜಾಬ್ ಕಾಂಗ್ರೆಸ್ ನಲ್ಲಿ ಬದಲಾವಣೆ ತರಲು ಎದುರು ನೋಡುತ್ತಿದ್ದಾರೆ. ನವಜೋತ್ ಸಿಧು ಕಳೆದ ವಾರ ನವದೆಹಲಿಯಲ್ಲಿ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಭೇಟಿ ಮಾಡಿದ್ದರು. ಪಂಜಾಬಿನ ಇತರ ಹಿರಿಯ ಮುಖಂಡರು ಕೂಡಾ ರಾಹುಲ್ ಗಾಂಧಿಯೊಂದಿಗೆ ಸಭೆ ನಡೆಸಿದ್ದಾರೆ.

ಸಿಧು ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರೊಂದಿಗೆ ಮಾತುಕತೆ ನಡೆಸಿದ ಬಳಿಕ ಪಂಜಾಬ್ ಕಾಂಗ್ರೆಸ್ ನಲ್ಲಿನ ಸಮಸ್ಯೆ ಬಗೆಹರಿಯುವ ವಿಶ್ವಾಸ ಇರುವುದಾಗಿ ಪಂಜಾಬ್ ಎಐಸಿಸಿ ಉಸ್ತುವಾರಿ ಹರೀಶ್ ರಾವತ್ ತಿಳಿಸಿದ್ದಾರೆ.

SCROLL FOR NEXT