ದಿಗ್ವಿಜಯ್ ಸಿಂಗ್ 
ದೇಶ

ನೀವು ನಿಮ್ಮ ಮಾತುಗಳಿಗೆ ಬದ್ಧವಾಗಿದ್ದರೆ ಮುಸ್ಲಿಮರಿಗೆ ಕಿರುಕುಳ ನೀಡಿದ ಬಿಜೆಪಿ ನಾಯಕರನ್ನು ಕಿತ್ತುಹಾಕಿ: ದಿಗ್ವಿಜಯ್ ಸಿಂಗ್

ನಿಮ್ಮ ಮಾತುಗಳಿಗೆ ಬದ್ಧವಾಗಿದ್ದರೇ ಮುಸ್ಲಿಮರಿಗೆ ಕಿರುಕುಳ ನೀಡಿದ ಬಿಜೆಪಿ ನಾಯಕರನ್ನು ಹುದ್ದೆಯಿಂದ ಕಿತ್ತು ಹಾಕಿ ಎಂದು ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ. 

ನವದೆಹಲಿ: ನಿಮ್ಮ ಮಾತುಗಳಿಗೆ ಬದ್ಧವಾಗಿದ್ದರೇ ಮುಸ್ಲಿಮರಿಗೆ ಕಿರುಕುಳ ನೀಡಿದ ಬಿಜೆಪಿ ನಾಯಕರನ್ನು ಹುದ್ದೆಯಿಂದ ಕಿತ್ತು ಹಾಕಿ ಎಂದು ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ. 

ಎಲ್ಲಾ ಭಾರತೀಯರ ಡಿಎನ್ ಎ ಒಂದೇ ಎಂಬ ಆರ್ ಎಸ್ ಎಸ್ ಮುಖಂಡ ಮೋಹನ್ ಭಾಗವತ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಅವರು, ಹೇಳಿದ ಮಾತಿನ ಹಾಗೆಯೇ ಭಾಗವತ್ ಬದ್ದರಾಗಿರಬೇಕು, ಅಮಾಯಕ ಮುಸ್ಲಿಮರಿಗೆ ಕಿರುಕುಳ ನೀಡಿದ ಬಿಜೆಪಿ ನಾಯಕರನ್ನು ಹುದ್ದೆಯಿಂದ ಕಿತ್ತು ಹಾಕಬೇಕು ಎಂದು ಸವಾಲು ಹಾಕಿದ್ದಾರೆ.

ಆದರೆ ಹಾಗಾಗಲು ಸಾಧ್ಯವಿಲ್ಲ, ಅವರು ಆಡುವ ಮಾತೇ ಬೇರೆ, ನಡೆದು ಕೊಳ್ಳುವ ರೀತಿಯೇ ಬೇರೆ ಎಂದು ಆರೋಪಿಸಿದ್ದಾರೆ. ಭಾನುವಾರ ನಡೆದ ಆರ್ ಎಸ್ ಎಸ್ ಮಂಚ್ ನಲ್ಲಿ ಮಾತನಾಡಿದ್ದ  ಮೋಹನ್ ಭಾಗವತ್ ಗೋವು ಪವಿತ್ರವಾದ ಪ್ರಾಣಿ. ಆದರೆ  ಬೇರೆಯವರನ್ನು ಹತ್ಯೆ ಮಾಡಲು ಪ್ರಯತ್ನಿಸುತ್ತಿರುವವರು ಹಿಂದುತ್ವದ ವಿರುದ್ಧ ಹೋಗುತ್ತಿದ್ದಾರೆ. ಅಂತಹವರ ವಿರುದ್ಧ ಪಕ್ಷಪಾತವಾಗಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದಿದ್ದರು.

ಭಾರತದಲ್ಲಿ ಇಸ್ಲಾಂ ಅಪಾಯದಲ್ಲಿದೆ ಎಂಬ ಖೆಡ್ಡಕ್ಕೆ ಯಾರೂ ಬೀಳಬಾರದು. ಹಿಂದೂ-ಮುಸ್ಲಿಂ ಏಕತೆಯ ಹೆಸರಲ್ಲಿ ಮೊದಲು ಹಿಂದೂಗಳು ಮತ್ತು ಮುಸ್ಲಿಮರು ಒಂದೇ ಆಗಿದ್ದರು ಎಂಬ ದಾರಿತಪ್ಪಿಸುವ ಹೇಳಿಕೆಗಳಿಗೆ ಕಿವಿಕೊಡಬಾರದು. ಧರ್ಮವನ್ನು ಹೊರತು ಪಡಿಸಿ ಭಾರತೀಯರೆಲ್ಲರ ಡಿಎನ್‌ಎಗಳು ಒಂದೇ. ಆಚರಣೆಯ ಆಧಾರದಲ್ಲಿ ಬೇರ್ಪಡಿಸಲು ಸಾಧ್ಯವಿಲ್ಲ ಎಂದು ಭಾಗವತ್‌ ಪ್ರತಿಪಾಧಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

ಶಾಕಿಂಗ್ Video: CJP ಪ್ರತಿಭಟನೆ ತಡೆಯಲು ಬ್ಯಾರಿಕೇಡ್‌ ಮಾತ್ರವಲ್ಲ, ರಸ್ತೆಯಲ್ಲಿ ಸ್ಪೈಕ್ ಸ್ಟ್ರಿಪ್‌ ಅಳವಡಿಕೆ!

ಜ್ಞಾನೇಶ್ ಕುಮಾರ್, ಪ್ರಧಾನಿ ಮೋದಿ ಇಬ್ಬರೂ ಮನೆಗೆ ಹೋಗುತ್ತಾರೆ, ನಂತರ ಪ್ರಜಾಪ್ರಭುತ್ವದ ದುರಸ್ತಿ: ರಾಹುಲ್ ಗಾಂಧಿ

‘ಪ್ರೇಮದ ಊರಲಿ’ ಭರ್ಜರಿ ಕಲೆಕ್ಷನ್: ಬಾಕ್ಸ್ ಆಫೀಸ್‌ನಲ್ಲಿ ಬರೋಬ್ಬರಿ 39 ಕೋಟಿ ರೂ. ಗಳಿಕೆ!

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?