ಸ್ವಾತಿ ಮಲಿವಾಳ್ 
ದೇಶ

ಮತ್ತೆ 3 ವರ್ಷಗಳ ಅವಧಿಗೆ ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆಯಾಗಿ ಸ್ವಾತಿ ಮಲಿವಾಳ್ ಮುಂದುವರಿಕೆ

ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆಯಾಗಿ ಸ್ವಾತಿ ಮಲಿವಾಳ್ ಅವರನ್ನು ಮುಂದುವರೆಸಲು ದೆಹಲಿ ಸರ್ಕಾರ ನಿರ್ಧರಿಸಿದೆ

ನವದೆಹಲಿ: ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆಯಾಗಿ ಸ್ವಾತಿ ಮಲಿವಾಳ್ ಅವರನ್ನು ಮುಂದುವರೆಸಲು ದೆಹಲಿ ಸರ್ಕಾರ ನಿರ್ಧರಿಸಿದೆ.

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಮುಂದಿನ ಮೂರು ವರ್ಷಗಳ ಅವಧಿಗೆ ಸ್ವಾತಿ ಮಲಿವಾಳ್ ಅವರನ್ನೇ ಮುಂದುವರೆಸುವ ದಾಖಲೆಗೆ ಸಹಿ ಹಾಕಿ ಆದೇಶ ಹೊರಡಿಸಿದ್ದಾರೆ.

ಹಾಲಿ ಅವರ ಸೇವಾ ವೈಖರಿಗೆ ಮೆಚ್ಚುಗೆ ಸೂಚಿಸಿ ಅವರ ಕಾರ್ಯಾವಧಿಯನ್ನು ದೆಹಲಿ ಸರ್ಕಾರ ಮತ್ತೆ ಮೂರು ವರ್ಷಗಳ ವಿಸ್ತರಣೆ ಮಾಡಿದೆ ಎಂದು ತಿಳಿದುಬಂದಿದೆ. ಮಹಿಳಾ ಆಯೋಗದಲ್ಲಿ ಸ್ವಾತಿ ಮಲಿವಾಳ್ ಅವರಿಗೆ ಇದು ಸತತ 2ನೇ ಅವಧಿಯಾಗಿದೆ. ಈ ಹಿಂದೆ 2018ರಲ್ಲೂ ಅವರ ಅವಧಿಯನ್ನು ಮುಂದುವರೆಸಲಾಗಿತ್ತು.

ಈ ಕುರಿತಂತೆ ಟ್ವೀಟ್ ಕೂಡ ಮಾಡಿರುವ ಸಿಎಂ ಕೇಜ್ರಿವಾಲ್, 'ದೆಹಲಿ ಮಹಿಳಾ ಆಯೋಗವು ಅತ್ಯುತ್ತಮ ಕೆಲಸ ಮಾಡುತ್ತಿದೆ. ಮಲಿವಾಳ್ ಅವರ ಅವಧಿ ಕೊನೆಗೊಳ್ಳುತ್ತಿದೆ. ಹೀಗಾಗಿ ಅವರ ನೇತೃತ್ವದ ಆಯೋಗಕ್ಕೆ ನಾನು ಇನ್ನೊಂದು ಒಂದು ಅವಧಿಯನ್ನು ಅನುಮೋದಿಸಿದ್ದೇನೆ. ಸ್ವಾತಿಜಿ ಮತ್ತು ಅವರ ತಂಡಕ್ಕೆ  ಶುಭಾಶಯಗಳು. ಒಳ್ಳೆಯ ಕೆಲಸ ಮಾಡುತ್ತಲೇ ಇರಿ ಎಂದು ಟ್ವೀಟ್ ಮಾಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ಬಾಕಿ ಸಾಲ ವಸೂಲಿಗೆ 'ಗೃಹಲಕ್ಷ್ಮಿ' ಯೋಜನೆಯ ಹಣ ಕಡಿತಗೊಳಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ!

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಿರಾಳ; ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ನಿರ್ಧಾರ ರದ್ದು!

'ನ್ಯಾಯಾಂಗ ತನಿಖೆಗೆ ಒಪ್ಪಿಸಿ, ₹1 ಕೋಟಿ ಪರಿಹಾರ ನೀಡಿ': ಹನೂರು ಶೂಟೌಟ್ ಪ್ರಕರಣದ ಮಹಿಮಾ ದಾಸ್ ಸೇರಿ ಸಂತ್ರಸ್ತರ ಆಗ್ರಹ