ದೇಶ

ಇಸ್ರೋ ಬೇಹುಗಾರಿಕೆ ಪ್ರಕರಣದಲ್ಲಿ ನಂಬಿ ನಾರಾಯಣನ್ ಬಂಧಿಸುವಂತೆ ಐಬಿಯಿಂದ ಒತ್ತಡವಿತ್ತು: ಮಾಜಿ ಡಿಜಿಪಿ

Vishwanath S

ತಿರುವನಂತಪುರ: ಇಸ್ರೋ ಬೇಹುಗಾರಿಕೆ ಪ್ರಕರಣದಲ್ಲಿ ಇಸ್ರೋ ವಿಜ್ಞಾನಿ ನಂಬಿ ನಾರಾಯಣನ್ ಅವರನ್ನು ಬಂಧಿಸುವಂತೆ ಕೇರಳ ಪೊಲೀಸ್ ಅಧಿಕಾರಿಗಳ ಮೇಲೆ ಇಂಟೆಲಿಜೆನ್ಸ್ ಬ್ಯುರೋ(ಐಬಿ)ದ ಒತ್ತಡವಿತ್ತು ಎಂದು ಕೇರಳದ ಮಾಜಿ ಡಿಜಿಪಿ ಸಿಬಿ ಮ್ಯಾಥ್ಯೂಸ್ ಹೇಳಿದ್ದಾರೆ. 

ಸಿಬಿ ಮ್ಯಾಥ್ಯೂಸ್ ಅವರು ತಮ್ಮ ವಿರುದ್ಧ ಸಿಬಿಐ ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಕೋರಿ ಸೆಷನ್ಸ್ ಕೋರ್ಟ್ ಗೆ ಸಲ್ಲಿಸಿರುವ ಅರ್ಜಿಯಲ್ಲಿ ಈ ಮಾಹಿತಿಯನ್ನು ಉಲ್ಲೇಖಿಸಿದ್ದಾರೆ. 

ಇನ್ನು ಸಿಬಿಐ ಮ್ಯಾಥ್ಯೂಸ್ ಹಾಗೂ ಇತರ 17 ಜನರ ವಿರುದ್ಧ ಕ್ರಿಮಿನಲ್ ಪಿತೂರಿ, ಅಪಹರಣ, ಸಾಕ್ಷ್ಯಗಳ ತಿರುಚುವಿಕೆ ಸೇರಿದಂತೆ ವಿವಿಧ ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದೆ. 

ಇಸ್ರೋ ಬೇಹುಗಾರಿಕೆ ಪ್ರಕರಣ ಕುರಿತಂತೆ ಕೇಂದ್ರೀಯ ಸಂಸ್ಥೆಗಳಿಂದ ಸಮಗ್ರವಾದ ತನಿಖೆ ಅಗತ್ಯವಿತ್ತು. ಹೀಗಾಗಿ ನಾನೇ ಈ ಪ್ರಕರಣ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಶಿಫಾರಸು ಮಾಡಿದ್ದೆ ಎಂದು ಮ್ಯಾಥ್ಯೂಸ್ ಅರ್ಜಿಯಲ್ಲಿ ತಿಳಿಸಿದ್ದಾರೆ. 

ಸಿಬಿ ಮ್ಯಾಥ್ಯೂಸ್ ಅವರ ಅರ್ಜಿಯ ವಿಚಾರಣೆ ಬುಧವಾರ ನಡೆಯುವ ಸಾಧ್ಯತೆ ಇದೆ. 

SCROLL FOR NEXT