ಸಂಗ್ರಹ ಚಿತ್ರ 
ದೇಶ

ಜೆಇಇ ಮೇನ್ಸ್ 2021: ಎರಡು ಆವೃತ್ತಿಯಲ್ಲಿ ಪರೀಕ್ಷೆ; ಜುಲೈ 20 ರಿಂದ 25 ಮತ್ತು ಜುಲೈ 27 ರಿಂದ ಆಗಸ್ಟ್ 2ರವರೆಗೆ!

ಜೆಇಇ ಮೇನ್ಸ್ 2021 ಪರೀಕ್ಷೆಗಳು ಎರಡು ಆವೃತ್ತಿಗಳಲ್ಲಿ ನಡೆಯಲಿದೆ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ತಿಳಿಸಿದ್ದಾರೆ. 

ನವದೆಹಲಿ: ಜೆಇಇ ಮೇನ್ಸ್ 2021 ಪರೀಕ್ಷೆಗಳು ಎರಡು ಆವೃತ್ತಿಗಳಲ್ಲಿ ನಡೆಯಲಿದೆ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ತಿಳಿಸಿದ್ದಾರೆ. 

ಜೆಇಇ ಮೇನ್ಸ್ ಜುಲೈ 20 ರಿಂದ ಜುಲೈ 25ರವರೆಗೆ ನಡೆಯಲಿದ್ದು ಎರಡನೇ ಆವೃತ್ತಿ ಜುಲೈ 27ರಿಂದ ಆಗಸ್ಟ್ 2ರವರೆಗೆ ನಡೆಯಲಿದೆ. 

ಕೊರೋನಾ ಕಾರಣದಿಂದ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಸಾಧ್ಯವಾಗದ ಅಭ್ಯರ್ಥಿಗಳಿಗೆ ಮತ್ತೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಮೊದಲ ಆವೃತ್ತಿಯಲ್ಲಿ ಪರೀಕ್ಷೆಗೆ ಕೂರುವ ವಿದ್ಯಾರ್ಥಿಗಳು ಜುಲೈ 6ರಿಂದ ಜುಲೈ 8ರ ರಾತ್ರಿಯವರೆಗೆ ಎನ್ ಟಿಎ ನಲ್ಲಿ ಅರ್ಜಿಗಳನ್ನು ಪಡೆಯಬಹುದು. 

ಎರಡನೇ ಆವೃತ್ತಿಯಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಜುಲೈ 9ರಿಂದ ಜುಲೈ 12ರವರೆಗೆ ಅರ್ಜಿಗಳನ್ನು ಸಲ್ಲಿಸಲು ಅವಕಾಶವಿರುತ್ತದೆ ಎಂದು ಸಚಿವರು ತಿಳಿಸಿದ್ದಾರೆ. 

ಅಲ್ಲದೆ, ಅಭ್ಯರ್ಥಿಗಳು ತಮ್ಮ ಪರೀಕ್ಷಾ ಕೇಂದ್ರಗಳನ್ನು ಬದಲಾಯಿಸಲು ಸಹ ಅವಕಾಶವಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

SCROLL FOR NEXT