ದೇಶ

ಕಾಂಗ್ರೆಸ್ ನಲ್ಲಿ ಆಂತರಿಕ ಕಲಹ ಹಿನ್ನೆಲೆ ಅಮರಿಂದರ್ ಸಿಂಗ್- ಸೋನಿಯಾ ಗಾಂಧಿ ಭೇಟಿ

Srinivas Rao BV

ನವದೆಹಲಿ: ಕಾಂಗ್ರೆಸ್ ನಲ್ಲಿ ಆಂತರಿಕ ಕಲಹದ ಹಿನ್ನೆಲೆ ಪಂಜಾಬ್ ಸಿಎಂ ಅಮರಿಂದರ್ ಸಿಂಗ್ ಕಾಂಗ್ರೆಸ್ ನ ನಾಯಕಿ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ್ದಾರೆ. 

ಪಂಜಾಬ್ ನಲ್ಲಿ ವಿಧಾನಸಭಾ ಚುನಾವಣೆ ಸನಿಹದಲ್ಲಿದ್ದು, ರಾಜ್ಯ ಘಟಕದಲ್ಲಿ ಹೆಚ್ಚಾಗುತ್ತಿರುವ ಬಣ ರಾಜಕೀಯವನ್ನು ತಹಬದಿಗೆ ತರಲು ಹೈಕಮಾಂಡ್ ನಾಯಕರು ಯತ್ನಿಸುತ್ತಿದ್ದಾರೆ. 

ಪಂಜಾಬ್ ಸಚಿವ ನವಜೋತ್ ಸಿಂಗ್ ಸಿಧು ಸಿಎಂ ಅಮರಿಂದರ್ ಸಿಂಗ್ ಅವರ ವಿರುದ್ಧ ನಿರಂತರ ವಾಗ್ದಾಳಿ ನಡೆಸುತ್ತಿದ್ದು ಉಭಯ ನಾಯಕರ ನಡುವಿನ ಭಿನ್ನಾಭಿಪ್ರಾಯ ತಾರಕಕ್ಕೇರಿದೆ.

ಪಂಜಾಬ್ ಕಾಂಗ್ರೆಸ್ ನಲ್ಲಿ ಬಣ ರಾಜಕೀಯವನ್ನು ಕೊನೆಗಾಣಿಸಲು ಎಲ್ಲಾ ವರ್ಗ, ಜಾತಿಗಳಿಗೂ ಪಕ್ಷ, ಸಂಪುಟದಲ್ಲಿ ಸ್ಥಾನ ನೀಡುವ ಸೂತ್ರವನ್ನು ಅಮರಿಂದರ್ ಸಿಂಗ್ ಹಾಗೂ ಸೋನಿಯಾ ಗಾಂಧಿ ಚರ್ಚಿಸಿದ್ದಾರೆ. ಪಂಜಾಬ್ ಚುನಾವಣೆಗೆ ಇನ್ನು ಕೆಲವೇ ತಿಂಗಳ ಸಮಯವಿದೆ. 

ಕಳೆದ ತಿಂಗಳು ಎರಡು ಬಾರಿ ದೆಹಲಿಗೆ ಭೇಟಿ ನೀಡಿದ್ದ ಸಿಂಗ್, ರಾಜ್ಯಸಭೆಯ ವಿರೋಧಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ನೇತೃತ್ವದ ತ್ರಿಸದಸ್ಯ ಸಮಿತಿಯನ್ನು ಭೇಟಿ ಮಾಡಿ ಚರ್ಚಿಸಿದ್ದರು. ರಾಹುಲ್ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿಯನ್ನು ಸಿಧು ಭೇಟಿ ಮಾಡಿದ್ದ ಬೆನ್ನಲ್ಲೇ ಸಿಂಗ್ ಸೋನಿಯಾ ಗಾಂಧಿ ಹೇಳಿದ್ದಾರೆ. 

SCROLL FOR NEXT