ಪ್ರಧಾನಿ ಮೋದಿ ನೇತೃತ್ವದ ನೂತನ ಸಚಿವ ಸಂಪುಟ 
ದೇಶ

ಕೇಂದ್ರ ಸಂಪುಟ ಪುನರ್ ರಚನೆ: ರಾಷ್ಟ್ರಪತಿ ಭವನದಲ್ಲಿ 43 ನೂತನ ಸಚಿವರಿಂದ ಪದಗ್ರಹಣ

ಪ್ರಧಾನಿ ನರೇಂದ್ರ ಮೋದಿ ತಮ್ಮ ಎರಡನೇ ಅಧಿಕಾರ ಅವಧಿಯಲ್ಲಿ ಮೊದಲ ಬಾರಿಗೆ ಸಚಿವ ಸಂಪುಟದಲ್ಲಿ ಮಹತ್ತರ ಬದಲಾವಣೆ ಮಾಡಿದ್ದು, 43 ನೂತನ ಸಚಿವರು ಪದಗ್ರಹಣ ಮಾಡಿದ್ದಾರೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ತಮ್ಮ ಎರಡನೇ ಅಧಿಕಾರ ಅವಧಿಯಲ್ಲಿ ಮೊದಲ ಬಾರಿಗೆ ಸಚಿವ ಸಂಪುಟದಲ್ಲಿ ಮಹತ್ತರ ಬದಲಾವಣೆ ಮಾಡಿದ್ದು, 43 ನೂತನ ಸಚಿವರು ಪದಗ್ರಹಣ ಮಾಡಿದ್ದಾರೆ. 
 
ರಾಷ್ಟ್ರಪತಿ ಭವನದಲ್ಲಿ ಜು.7 ರಂದು ಸಂಜೆ ನಡೆದ ಕಾರ್ಯಕ್ರಮದಲ್ಲಿ ರಾಜ್ಯದ ಎ ನಾರಾಯಣಸ್ವಾಮಿ, ಶೋಭಾ ಕರಂದ್ಲಾಜೆ, ರಾಜೀವ್ ಚಂದ್ರಶೇಖರ್, ಭಗವಂತ್ ಖೂಬಾ ಪ್ರಮಾಣ ವಚನ ಸ್ವೀಕರಿಸಿದ್ದಾರೆ. 

ಕಳೆದ ವರ್ಷ ಕಾಂಗ್ರೆಸ್ ನಿಂದ ಬಿಜೆಪಿ ಸೇರ್ಪಡೆಗೊಂಡು ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದಕ್ಕೆ ಕಾರಣರಾಗಿದ್ದ ಸಂಸದ ಜ್ಯೋತಿರಾದಿತ್ಯ ಸಿಂಧಿಯಾಗೂ ಸಚಿವ ಸ್ಥಾನ ದೊರೆತಿದ್ದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. 

ಡಿ.ವಿ.ಸದಾನಂದ ಗೌಡ, ಡಾ. ಹರ್ಷವರ್ಧನ್, ರಾವು ಸಾಹೇಬ್ ದಾನ್ವೆ ಪಾಟೀಲ್,  ಬಾಬುಲ್ ಸುಪ್ರಿಯೋ, ಪ್ರತಾಪ್ ಸಾರಂಗಿ, ರಮೇಶ್ ಪೋಖ್ರಿಯಾಲ್, ದೇಬಾಶ್ರೀ ಚೌಧುರಿ, ಸಂತೋಷ್ ಗಂಗ್ವಾರ್, ಥಾವರ್ ಚಂದ್ ಗೆಹ್ಲೋಟ್, ಸಂಜಯ್ ಶಮರಾವ್ ಧೋತ್ರೆ ಮತ್ತು ರತ್ತನ್  ಲಾಲ್ ಕಟಾರಿಯಾ ಸೇರಿದಂತೆ 11 ಮಂದಿಯನ್ನು  ಸಂಪುಟದಿಂದ ಕೈಬಿಡಲಾಗಿದೆ. 

ಈ ಬಾರಿ ಹೆಚ್ಚಿನ ಸಂಖ್ಯೆಯ ಎಸ್ ಸಿ, ಎಸ್ ಟಿ ಪ್ರತಿನಿಧಿಸುವ ಸಂಸದರು ಸೇರಿದಂತೆ 43 ಹೊಸ ಸದಸ್ಯರು ಇಂದು ಪ್ರಧಾನಿ ನರೇಂದ್ರ ಮೋದಿ ಅವರ ಹೊಸ ಸಂಪುಟ ಸೇರಿದ್ದಾರೆ 

ಸಂಪುಟ ಪುನರ್ ರಚನೆ ನಂತರ ಪರಿಶಿಷ್ಟ ಸಮುದಾಯದಿಂದ 12 ಸದಸ್ಯರು ಮತ್ತು ಪರಿಶಿಷ್ಟ ಪಂಗಡದಿಂದ 8 ಸದಸ್ಯರು ಸಂಪುಟ ಸೇರಲಿದ್ದಾರೆ. ಕ್ಯಾಬಿನೆಟ್ ವಿಸ್ತರಣೆಯ ನಂತರ, ಮೋದಿ ಸರ್ಕಾರ 27 ಒಬಿಸಿ ನಾಯಕರನ್ನು ಹೊಂದುವ ನಿರೀಕ್ಷೆಯಿದೆ. ಅದರಲ್ಲಿ ಐವರು ಕ್ಯಾಬಿನೆಟ್ ನಲ್ಲಿರುತ್ತಾರೆ. ಸಚಿವರ ಕಾರ್ಯಕ್ಷಮತೆಯನ್ನು ಆಧರಿಸಿ ಮುಂಬಡ್ತಿ, ಖೊಕ್ ನೀಡಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಲಸೆ ವೀಸಾ ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಲಸೆ ನೀತಿ ಮತ್ತಷ್ಟು ಕಠಿಣ, ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌..!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!