ಏಕನಾಥ್ ಖಾಡ್ಸೆ 
ದೇಶ

ಅಕ್ರಮ ಹಣ ವರ್ಗಾವಣೆ ಪ್ರಕರಣ: ಎನ್ ಸಿಪಿ ಮುಖಂಡ ಎಕನಾಥ್ ಖಾಡ್ಸೆ ಅಳಿಯನ ಬಂಧನ

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಹಾರಾಷ್ಟ್ರ ಎನ್ ಸಿಪಿ ಮುಖಂಡ ಏಕನಾಥ್ ಖಾಡ್ಸೆ ಅವರ ಅಳಿಯನನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ.

ಮುಂಬಯಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಹಾರಾಷ್ಟ್ರ ಎನ್ ಸಿಪಿ ಮುಖಂಡ ಏಕನಾಥ್ ಖಾಡ್ಸೆ ಅವರ ಅಳಿಯನನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ.

ಗಿರೀಶ್ ಚೌಧರಿಯನ್ನು ಮಂಗಳವಾರ ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ, 2016 ರಲ್ಲಿ ಪುಣೆಯಲ್ಲಿ ಜಮೀನು ಖರೀದಿಸುವ ವೇಳೆ ನಡೆದಿದ್ದ ಅಕ್ರಮಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದೆ ಎಂದು ಬುಧವಾರ ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನೂ ವಿಚಾರಣೆ ವೇಳೆ ಗಿರೀಸ್ ಚೌಧರಿ ಸರಿಯಾಗಿ ಸಹಕಾರ ನೀಡುತ್ತಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.  ಮನಿ ಲಾಂಡರಿಂಗ್ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ದಾಖಲಾದ ಪ್ರಕರಣಗಳನ್ನು ವಿಚಾರಣೆಗೆ ಒಳಪಡಿಸುವ ವಿಶೇಷ ನ್ಯಾಯಾಲಯಕ್ಕೆ ಆತನನ್ನು ಹಾಜರುಪಡಿಸುವ ಸಾಧ್ಯತೆಯಿದೆ.

ಬಿಜೆಪಿಯಲ್ಲಿ ಎಕನಾಥ್ ಖಾಡ್ಸೆ ಕಳೆದ ವರ್ಷ ಶರದ್ ಪವಾರ್ ನೇತೃತ್ವದ ಎನ್ ಸಿಪಿ ಸೇರಿದ್ದರು. ಈ ವರ್ಷದ ಆರಂಭದಲ್ಲಿ ಏಕನಾಥ್ ಗೋಡ್ಸೆ ಅವರನ್ನು ಸಹ ಜಾರಿ ನಿರ್ದೇಶನಾಲಯ ಅಧಿಕಾರಿಗಳು ವಿಚಾರಣೆ ನಡೆಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT