ಪ್ರಮಾಣವಚನ ಸ್ವೀಕಾರ ಮಾಡುತ್ತಿರುವ ಅನುರಾಗ್ ಠಾಕೂರ್ ಹಾಗೂ ಅಶ್ವಿನಿ ವೈಷ್ಣವ್ 
ದೇಶ

ಕೇಂದ್ರದ ಮಾಹಿತಿ ಮತ್ತು ಪ್ರಸಾರ ಸಚಿವರಾಗಿ ಅನುರಾಗ್ ಠಾಕೂರ್, ರೈಲ್ವೇ ಸಚಿವರಾಗಿ ಅಶ್ವಿನಿ ವೈಷ್ಣವ್ ಅಧಿಕಾರ ಸ್ವೀಕಾರ

ಕೇಂದ್ರದ ಮಾಹಿತಿ ಮತ್ತು ಪ್ರಸಾರ ಸಚಿವರಾಗಿ ಅನುರಾಗ್ ಠಾಕೂರ್, ರೈಲ್ವೇ ಸಚಿವರಾಗಿ ಅಶ್ವಿನಿ ವೈಷ್ಣವ್ ಅವರು ಗುರುವಾರ ಅಧಿಕಾರ ಸ್ವೀಕಾರ ಮಾಡಿದ್ದಾರೆ.

ನವದೆಹಲಿ: ಕೇಂದ್ರದ ಮಾಹಿತಿ ಮತ್ತು ಪ್ರಸಾರ ಸಚಿವರಾಗಿ ಅನುರಾಗ್ ಠಾಕೂರ್, ರೈಲ್ವೇ ಸಚಿವರಾಗಿ ಅಶ್ವಿನಿ ವೈಷ್ಣವ್ ಅವರು ಗುರುವಾರ ಅಧಿಕಾರ ಸ್ವೀಕಾರ ಮಾಡಿದ್ದಾರೆ.

ಅಧಿಕಾರ ಸ್ವೀಕಾರ ಮಾಡಿದ ಬಳಿಕ ಮಾತನಾಡಿರುವ ಅನುರಾಗ್ ಠಾಕೂರ್ ಅವರು, ಸಚಿವಾಲಯದ ಮೂಲಕ ಕಳೆದ ಏಳು ವರ್ಷಗಳಲ್ಲಿ ಜನರನ್ನು ತಲುಪುವಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಹತ್ತರ ಕೆಲಸ ಮಾಡಿದ್ದಾರೆ. ಈ ಪರಂಪರೆಯನ್ನು ಮುನ್ನಡೆಸುಕೊಂಡು ಹೋಗಲು ನಾನು ಬಯಸುತ್ತಿದ್ದೇನೆಂದು ಹೇಳಿದ್ದಾರೆ.

ಸಚಿವಾಲಯದ ಮೂಲಕ ಜನರನ್ನು ತಲುಪಲು ಇಚ್ಛಿಸುತ್ತಿದ್ದೇನೆ. ಪ್ರಧಾನಿ ಮೋದಿಯವರು ನನಗೆ ನೀಡಿರುವ ಜವಾಬ್ದಾರಿಯನ್ನು ಉತ್ತಮವಾಗಿ ನಿರ್ವಹಿಸಲು ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡುತ್ತೇನೆಂದು ಹೇಳಿದ್ದಾರೆ.

ರೈಲ್ವೇ ಸಚಿವರಾಗಿ ಅಧಿಕಾರ ಸ್ವೀಕಾರ ಮಾಡಿರುವ ವೈಷ್ಣವ್ ಅವರು ಮಾತನಾಡಿ, ಕಳೆದ 67 ವರ್ಷಗಳಲ್ಲಿ ರೈಲ್ವೇ ಸಚಿವಾಲಯದಲ್ಲಿ ಅತ್ಯುತ್ತಮ ಕಾರ್ಯಗಳು ನಡೆದಿವೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ದೃಷ್ಟಿಕೋನವನ್ನು ಮುನ್ನಡೆಸಿಕೊಂಡು ಹೋಗಲು ನಾನು ಈ ಸ್ಥಾನದಲ್ಲಿದ್ದೇನೆಂದು ಹೇಳಿದ್ದಾರೆ.

ಅಧಿಕಾರ ಸ್ವೀಕಾರ ಮಾಡಿದ ಬಳಿಕ ಟ್ವಿಟರ್ ನಲ್ಲಿಯೂ ಟ್ವೀಟ್ಮಾಡಿರುವ ವೈಷ್ಣವ್ ಅವರು, ಪ್ರಧಾನಿ ಮೋದಿಯವರಿಗೆ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

ಇಂದು ಕೇಂದ್ರ ರೈಲ್ವೇ ಸಚಿವನಾಗಿ ಅಧಿಕಾರ ಸ್ವೀಕಾರ ಮಾಡಿದ್ದೇನೆ. ಮತ್ತೊಮ್ಮೆ ನನ್ನ ಹೃದಯಾಳದಿಂದ ಪ್ರಧಾನಿ ಮೋದಿಯವರಿಗೆ ಕೃತಜ್ಞತೆಯನ್ನು ಅರ್ಪಿಸುತ್ತೇನೆಂದು ಹೇಳಿದ್ದಾರೆ.

ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯದಿಂದ ಎಂಬಿಎ ಪದವಿ, ಖರಗ್‌ಪುರ –ಐಐಟಿಯಿಂದ ಎಂ.ಟೆಕ್ ಪದವಿ ಪಡೆದಿರುವ ವೈಷ್ಣವ್ ಅವರು, ಜಾಗತಿಕ ಮಟ್ಟದ ಜನರಲ್ ಎಲೆಕ್ಟ್ರಿಕಲ್ಸ್ ಮತ್ತು ಸೀಮನ್ಸ್‌ ನಂತಹ ಪ್ರಮುಖ ಕಂಪನಿಗಳನ್ನು ಮುನ್ನಡೆಸುವಲ್ಲಿ ಪ್ರಧಾನ ಪಾತ್ರವಹಿಸಿದ್ದರು.

1994ರ ಬ್ಯಾಚ್‌ನ ಐಎಎಸ್‌ ಅಧಿಕಾರಿಯಾಗಿದ್ದ ಅಶ್ವಿನಿ ವೈಷ್ಣವ್‌, ಹದಿನೈದು ವರ್ಷಗಳ ತಮ್ಮ ಅಧಿಕಾರಾವಧಿಯಲ್ಲಿ ಪ್ರಮುಖವಾದ ಜವಾಬ್ದಾರಿಗಳನ್ನು ನಿರ್ವಹಿಸುವ ಜತೆಗೆ, ಮೂಲಸೌಕರ್ಯ ಅಭಿವೃದ್ಧಿ ಕ್ಷೇತ್ರದಲ್ಲಿ ಸಾರ್ವಜನಿಕ–ಖಾಸಗಿ ಸಹಭಾಗಿತ್ವ(ಪಿಪಿಪಿ) ಯೋಜನೆಗೆ ಒಂದು ಉತ್ತಮ ಚೌಕಟ್ಟನ್ನು ರೂಪಿಸಿದ್ದರು. ಈ ಅನುಭವ, ತಾವು ನಿರ್ವಹಿಸುವ ರೈಲ್ವೆ ಕ್ಷೇತ್ರದ ಅಭಿವೃದ್ಧಿಗೆ ಸಹಾಯವಾಗಲಿದೆ.

ರೈಲ್ವೆ ಸಚಿವರಾಗಿರುವ ವೈಷ್ಣವ್ ಅವರಿಗೆ ದೂರಸಂಪರ್ಕ ಮತ್ತು ಎಲೆಕ್ಟ್ರಾನಿಕ್ಸ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಜವಾಬ್ದಾರಿಯನ್ನೂ ವಹಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT