ದೇಶ

ಹಿಮಾಚಲ ಪ್ರದೇಶದ ಮಾಜಿ ಸಿಎಂ ವೀರಭದ್ರ ಸಿಂಗ್ ಹೃದಯಾಘಾತದಿಂದ ನಿಧನ

Shilpa D

ಶಿಮ್ಲಾ: ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಹಿಮಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಹಿರಿಯ ಮುಖಂಡ ವೀರಭದ್ರ ಸಿಂಗ್ ಗುರುವಾರ ಮುಂಜಾನೆ ನಿಧನರಾಗಿದ್ದಾರೆ.

ವೀರಭದ್ರ ಸಿಂಗ್ ಅವರು ಇಂದಿರಾ ಗಾಂಧಿ ವೈದ್ಯಕೀಯ ಆಸ್ಪತ್ರೆಯಲ್ಲಿ ಗುರುವಾರ ಮುಂಜಾನೆ 4ರ ಹೊತ್ತಿಗೆ ನಿಧನರಾದರು ಎಂದು ಐಜಿಎಂಸಿ ಹಿರಿಯ ವೈದ್ಯಕೀಯ ಅಧೀಕ್ಷಕ ಡಾ. ಜಾನಕ್ ರಾಜ್ ಖಚಿತಪಡಿಸಿದ್ದಾರೆ.

87ರ ವರ್ಷದ ಸಿಂಗ್ ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿದ ಹಿನ್ನೆಲೆಯಲ್ಲಿ ಎಪ್ರಿಲ್ 13ರಂದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಒದಗಿಸಲಾಗಿತ್ತು. ಬಳಿಕ ಚೇತರಿಸಿಕೊಂಡು ಆಸ್ಪತ್ರೆಯಿಂದ ಮನೆಗೆ ಮರಳಿದ್ದರು. ಸೋಮವಾರ ಅವರಿಗೆ ಹೃದಯಾಘಾತವಾಗಿತ್ತು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಲಾಗಿತ್ತು. ಬುಧವಾರ ಅವರಿಗೆ ಉಸಿರಾಟ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಕೊಡಲಾಗುತ್ತಿತ್ತು, ಹಿಮಾಚಲ ಪ್ರದೇಶದಲ್ಲಿ ಆರು ಬಾರಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದ ವೀರಭದ್ರ ಸಿಂಗ್ 9 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು.

SCROLL FOR NEXT