ಝೈಡಸ್ ಕ್ಯಾಡಿಲಾ 
ದೇಶ

12-18 ವರ್ಷ ವಯಸ್ಸಿನವರಿಗೆ ಸೆಪ್ಟೆಂಬರ್‌ನಿಂದ ಝೈಡಸ್ ಕೋವಿಡ್ ಲಸಿಕೆ: ತಜ್ಞರ ಹೇಳಿಕೆ

ಝೈಡಸ್ ಕ್ಯಾಡಿಲಾ ಕೋವಿಡ್ ಲಸಿಕೆಯು ಸೆಪ್ಟೆಂಬರ್ ವೇಳೆಗೆ 12 ರಿಂದ 18 ವರ್ಷ ವಯಸ್ಸಿನವರಿಗೆ ಲಭ್ಯವಾಗಲಿದೆ ಎಂದು ಲಸಿಕೆ ನಿರ್ವಹಣೆಗೆ ಸಂಬಂಧಿಸಿದ ರಾಷ್ಟ್ರೀಯ ತಜ್ಞರ ಸಮಿತಿ ಮುಖ್ಯಸ್ಥ ಡಾ. ಎನ್‌.ಕೆ. ಆರೋರಾ ತಿಳಿಸಿದ್ದಾರೆ.

ನವದೆಹಲಿ: ಝೈಡಸ್ ಕ್ಯಾಡಿಲಾ ಕೋವಿಡ್ ಲಸಿಕೆಯು ಸೆಪ್ಟೆಂಬರ್ ವೇಳೆಗೆ 12 ರಿಂದ 18 ವರ್ಷ ವಯಸ್ಸಿನವರಿಗೆ ಲಭ್ಯವಾಗಲಿದೆ ಎಂದು ಲಸಿಕೆ ನಿರ್ವಹಣೆಗೆ ಸಂಬಂಧಿಸಿದ ರಾಷ್ಟ್ರೀಯ ತಜ್ಞರ ಸಮಿತಿ ಮುಖ್ಯಸ್ಥ ಡಾ. ಎನ್‌.ಕೆ. ಆರೋರಾ ತಿಳಿಸಿದ್ದಾರೆ.

ಈಗಾಗಲೇ ದೇಶದಲ್ಲಿ ಕೋವಿಡ್-19 3ನೇ ಅಲೆಯ ಭೀತಿ ಎದುರಾಗಿದ್ದು ಮೂರನೇ ಅಲೆ ವೇಳೆ ಮಕ್ಕಳಿಗೆ ಹೆಚ್ಚಾಗಿ ಸೋಂಕು ತಗಲುವ ಅಪಾಯವಿದೆ ಎಂದು ಕೆಲ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಹೀಗಾಗಿ ಮಕ್ಕಳಿಗೂ ಕೋವಿಡ್ ಲಸಿಕೆ ನೀಡುವ ಕುರಿತು ಕೇಂದ್ರ ಸರ್ಕಾರ ಗಂಭೀರ ಆಲೋಚನೆಯಲ್ಲಿರುವಂತೆಯೇ ಇತ್ತ ಝೈಡಸ್ ಕ್ಯಾಡಿಲಾ ಕೋವಿಡ್ ಲಸಿಕೆಯು ಸೆಪ್ಟೆಂಬರ್ ವೇಳೆಗೆ 12ರಿಂದ 18 ವರ್ಷ ವಯಸ್ಸಿನವರಿಗೆ ಲಭ್ಯವಾಗಲಿದೆ ಎಂದು ಲಸಿಕೆ ನಿರ್ವಹಣೆಗೆ ಸಂಬಂಧಿಸಿದ ರಾಷ್ಟ್ರೀಯ ತಜ್ಞರ ಸಮಿತಿ ಮುಖ್ಯಸ್ಥ ಡಾ. ಎನ್‌.ಕೆ. ಆರೋರಾ ಹೇಳಿದ್ದಾರೆ.

ಝೈಡಸ್ ಕ್ಯಾಡಿಲಾ ಲಸಿಕೆಯ ತುರ್ತು ಬಳಕೆಗೆ ಕೆಲವೇ ವಾರಗಳಲ್ಲಿ ಅನುಮೋದನೆ ದೊರೆಯಲಿದೆ ಎಂದು ಅವರು ಸಂದರ್ಶನವೊಂದರಲ್ಲಿ ಹೇಳಿದ್ದಾರೆ. 'ಸೆಪ್ಟೆಂಬರ್‌ ಅಂತ್ಯದ ವೇಳೆಗೆ 12 ರಿಂದ 18 ವರ್ಷ ವಯಸ್ಸಿನವರಿಗೆ ಕೋವ್ಯಾಕ್ಸಿನ್ ಲಸಿಕೆ ಕೂಡ ಲಭ್ಯವಾಗುವ ನಿರೀಕ್ಷೆ ಇದೆ. ಈ ವಯಸ್ಸಿನವರಿಗಾಗಿ  ಕೋವ್ಯಾಕ್ಸಿನ್ ಲಸಿಕೆಯ ಮೂರನೇ ಹಂತದ ಪ್ರಯೋಗ ನಡೆಯುತ್ತಿದೆ. ಮೂರನೇ ತ್ರೈಮಾಸಿಕ ಅವಧಿಯಲ್ಲಿ ಅಥವಾ ಜನವರಿ-ಫೆಬ್ರುವರಿ ಆರಂಭದ ವೇಳೆಗೆ 2 ವರ್ಷ ಮೇಲ್ಪಟ್ಟವರ ಬಳಕೆಗೂ ಕೋವ್ಯಾಕ್ಸಿನ್ ಲಭ್ಯವಾಗುವ ನಿರೀಕ್ಷೆ ಇದೆ ಎಂದು ಅವರು ಹೇಳಿದರು.

ಶಾಲೆ ತೆರೆಯುವ ವಿಷಯ ಮತ್ತು ಇತರ ವಿಷಯಗಳು ಬಹಳ ಮುಖ್ಯ ಮತ್ತು ಅವುಗಳನ್ನು ಸಕ್ರಿಯವಾಗಿ ಚರ್ಚಿಸಲಾಗುತ್ತಿದೆ. ಲಸಿಕೆ ವಿಭಾಗದ ಮುಖ್ಯಸ್ಥರ ರಾಷ್ಟ್ರೀಯ ತಜ್ಞರ ಗುಂಪು ದೇಶದ ಮಕ್ಕಳಿಗೆ ಲಸಿಕೆ ಹಾಕುವತ್ತ ಗಮನ ಹರಿಸಿದೆ. ಏಕೆಂದರೆ ಕೋವಿಡ್-19 ನ ಮೂರನೇ ತರಂಗವು ಮಕ್ಕಳ ಮೇಲೆ ಹೆಚ್ಚು ಪರಿಣಾಮ ಬೀರಬಹುದು ಎಂದು ಅನೇಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. 

ಮೂರನೇ ಅಲೆಯ ಸಿದ್ಧತೆಗಳು
ಇನ್ನು ನೂತನ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಅಧಿಕಾರ ಸ್ವೀಕರಿಸಿದ ಬಳಿಕ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ್ದು, ದೇಶದ 736 ಜಿಲ್ಲೆಗಳಲ್ಲಿ ಮಕ್ಕಳ ಕೇಂದ್ರಗಳನ್ನು ಸ್ಥಾಪಿಸಲು ಆರೋಗ್ಯ ಮೂಲಸೌಕರ್ಯ ಪ್ಯಾಕೇಜ್ ಜಾರಿಗೆ ತರಲು ಸರ್ಕಾರ ಯೋಜಿಸುತ್ತಿದೆ. ಹಲವಾರು ರಾಜ್ಯ ಸರ್ಕಾರಗಳು ಸಹ ಮಕ್ಕಳಿಗಾಗಿ ಸುಲಭವಾಗಿ ವ್ಯವಸ್ಥೆ ಮಾಡುತ್ತಿವೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT