ದೇಶ

ಅಭಿವೃದ್ಧಿಗಾಗಿ ಜನಸಂಖ್ಯಾ ನಿಯಂತ್ರಣದ ಅಗತ್ಯವಿದೆ- ಯೋಗಿ ಆದಿತ್ಯನಾಥ್

Nagaraja AB

ಲಖನೌ: ಜನಸಂಖ್ಯೆ ಹೆಚ್ಚಳ ಅಭಿವೃದ್ಧಿಗೆ ಅಡ್ಡಿಯಾಗಿದೆ ಎಂದು ಹೇಳಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಅದರ ನಿಯಂತ್ರಣಕ್ಕೆ ಹೆಚ್ಚಿನ ಪ್ರಯತ್ನದ ಅಗತ್ಯವಿದೆ ಎಂದಿದ್ದಾರೆ.

ಲಖನೌನ ತಮ್ಮ ಅಧಿಕೃತ ನಿವಾಸದಲ್ಲಿ ಇಂದು ವಿಶ್ವ ಜನಸಂಖ್ಯಾ ದಿನದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿಶ್ವದಾದ್ಯಂತ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಜನಸಂಖ್ಯಾ ಹೆಚ್ಚಳ ಅಭಿವೃದ್ಧಿಗೆ ಅಡ್ಡಿಯಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಕಳೆದ ನಾಲ್ಕು ದಶಕಗಳಿಂದಲೂ ಇದರ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ನಿಟ್ಟಿನಲ್ಲಿ ಪ್ರಯತ್ನಿಸಿದ ದೇಶಗಳು ಮತ್ತು ರಾಜ್ಯಗಳು ಸಕಾರಾತ್ಮಕ ಫಲಿತಾಂಶಗಳನ್ನು ಕಂಡಿವೆ. ಆದಾಗ್ಯೂ, ಈ ಸಂಬಂಧ ಹೆಚ್ಚಿನ ಪ್ರಯತ್ನದ ಅಗತ್ಯವಿದೆ. ಸಮಾಜದ ಎಲ್ಲಾ ವರ್ಗಗಳನ್ನು ಗಮನದಲ್ಲಿಟ್ಟುಕೊಂಡು ಉತ್ತರ ಪ್ರದೇಶ ಸರ್ಕಾರ ಜನಸಂಖ್ಯಾ ನೀತಿಯನ್ನು ಅನುಷ್ಠಾನಗೊಳಿಸುತ್ತಿದೆ ಎಂದರು.

ಜನಸಂಖ್ಯಾ ನಿಯಂತ್ರಣ ಮಸೂದೆಯ ಕರಡು ಒಂದನ್ನು ರಾಜ್ಯ ಕಾನೂನು ಆಯೋಗದ ವೆಬ್ ಸೈಟ್ ನಲ್ಲಿ ಹಾಕಲಾಗಿದೆ. ಹೆಚ್ಚು ಸಮನಾದ ವಿತರಣೆಯೊಂದಿಗೆ ಸುಸ್ಥಿರ ಅಭಿವೃದ್ಧಿಯ ಉತ್ತೇಜನಕ್ಕಾಗಿ ರಾಜ್ಯದ ಜನಸಂಖ್ಯೆಯನ್ನು ನಿಯಂತ್ರಿಸುವುದು ಮತ್ತು ಸ್ಥಿರಗೊಳಿಸುವುದು ಅಗತ್ಯ ಎಂದು ಕರಡು ಹೇಳುತ್ತದೆ.

SCROLL FOR NEXT