ಪಿಎಂ ನರೇಂದ್ರ ಮೋದಿ 
ದೇಶ

ಪದ್ಮ ಪ್ರಶಸ್ತಿಗೆ ಸೂಕ್ತ ವ್ಯಕ್ತಿಗಳನ್ನು ನಾಮನಿರ್ದೇಶನ ಮಾಡಿ: ಪ್ರಧಾನಿ ಮೋದಿ 

ಪದ್ಮ ಪ್ರಶಸ್ತಿಗೆ ಸೂಕ್ತ ವ್ಯಕ್ತಿಗಳನ್ನು ನಾಮ ನಿರ್ದೇಶನ ಅಥವಾ ಹೆಸರನ್ನು ಸೂಚಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ಸಾರ್ವಜನಿಕರಲ್ಲಿ ಕೋರಿದ್ದಾರೆ.

ನವದೆಹಲಿ: ಪದ್ಮ ಪ್ರಶಸ್ತಿಗೆ ಸೂಕ್ತ ವ್ಯಕ್ತಿಗಳನ್ನು ನಾಮ ನಿರ್ದೇಶನ ಅಥವಾ ಹೆಸರನ್ನು ಸೂಚಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ಸಾರ್ವಜನಿಕರಲ್ಲಿ ಕೋರಿದ್ದಾರೆ.

ದೇಶದಲ್ಲಿ ಹಲವು ಕ್ಷೇತ್ರಗಳಲ್ಲಿ ಹಲವು ಪ್ರತಿಭಾವಂತರಿದ್ದಾರೆ. ಅಂತವರು ತಳಮಟ್ಟದಲ್ಲಿ ಅದ್ವಿತೀಯ ಸಾಧನೆಗಳನ್ನು, ಕೆಲಸಗಳನ್ನು ಮಾಡುತ್ತಿದ್ದಾರೆ. ಇಂತಹ ಪ್ರತಿಭಾವಂತರಲ್ಲಿ ಕೆಲವರು ಎಲೆಮರೆ ಕಾಯಿಯಂತಿರುತ್ತಾರೆ, ಬೆಳಕಿಗೆ ಬಂದಿರುವುದಿಲ್ಲ. ಅಂತಹ ಸ್ಪೂರ್ತಿ ತುಂಬುವ, ಬೇರೆಯವರಿಗೆ ಮಾರ್ಗದರ್ಶನವಾಗಬಲ್ಲ ಸ್ಪೂರ್ತಿದಾಯಕ ಜನರ ಬಗ್ಗೆ ನಿಮಗೆ ತಿಳಿದಿದ್ದರೆ ನೀವು ಅಂತವರನ್ನು ನಾಮನಿರ್ದೇಶನ ಮಾಡಿ ಎಂದಿದ್ದಾರೆ.

#PeoplesPadma ಎಂಬ ಹ್ಯಾಶ್ ಟ್ಯಾಗ್ ಬಳಸಿ ಪ್ರತಿಭಾವಂತರ ಹೆಸರುಗಳನ್ನು ನಾಮನಿರ್ದೇಶನ ಮಾಡಿ, ನಾಮನಿರ್ದೇಶನ ಸೆಪ್ಟೆಂಬರ್ 15ರವರೆಗೆ ತೆರೆದಿರುತ್ತದೆ. ಎಂದು ಸರ್ಕಾರದ ಪದ್ಮಪ್ರಶಸ್ತಿಯ ವೆಬ್ ಸೈಟ್ ನ್ನು ಪ್ರಧಾನಿ ಮೋದಿಯವರು ಟ್ವೀಟ್ ಮೂಲಕ ಹಂಚಿಕೊಂಡಿದ್ದಾರೆ.

ಪದ್ಮ ಪ್ರಶಸ್ತಿಗಳೆಂದರೆ ಪದ್ಮವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ ಪ್ರಶಸ್ತಿಗಳನ್ನೊಳಗೊಂಡಿದ್ದು, ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಾಗಿವೆ. ಕಳೆದ ಕೆಲವು ವರ್ಷಗಳಲ್ಲಿ, ಮೋದಿ ಸರ್ಕಾರವು ಸಮಾಜಕ್ಕೆ ನೀಡಿದ ಜೀವಮಾನದ ಕೊಡುಗೆಗಳು ಮತ್ತು ವಿವಿಧ ಕ್ಷೇತ್ರಗಳಲ್ಲಿನ ಸಾಧನೆಗಳಿಗಾಗಿ ಪದ್ಮ ಪ್ರಶಸ್ತಿಗಳನ್ನು ಸಮಾಜದ ವಿವಿಧ ವರ್ಗದ ಜನರಿಗೆ ನೀಡಿ ಗೌರವಿಸುತ್ತ ಬಂದಿದೆ.

1954 ರಲ್ಲಿ ಸ್ಥಾಪನೆಯಾದ ಈ ಪ್ರಶಸ್ತಿಗಳನ್ನು ಪ್ರತಿವರ್ಷ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಘೋಷಿಸಲಾಗುತ್ತದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT