ನೀಟ್ ಪರೀಕ್ಷೆ 
ದೇಶ

ನೀಟ್ ಪರೀಕ್ಷೆ ಆಗಸ್ಟ್ 1ರಿಂದ ಸೆಪ್ಟೆಂಬರ್ 12ಕ್ಕೆ ಮುಂದೂಡಿಕೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ವೈದ್ಯಕೀಯ ಕಾಲೇಜುಗಳ ಪ್ರವೇಶಕ್ಕೆ ಇರುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್‌)ಯನ್ನು ಸೆಪ್ಟೆಂಬರ್ 12ಕ್ಕೆ ಮುಂದೂಡಲಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಸೋಮವಾರ ತಿಳಿಸಿದ್ದಾರೆ.

ನವದೆಹಲಿ: ವೈದ್ಯಕೀಯ ಕಾಲೇಜುಗಳ ಪ್ರವೇಶಕ್ಕೆ ಇರುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್‌)ಯನ್ನು ಸೆಪ್ಟೆಂಬರ್ 12ಕ್ಕೆ ಮುಂದೂಡಲಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಸೋಮವಾರ ತಿಳಿಸಿದ್ದಾರೆ.

ಈ ಹಿಂದೆ ಆಗಸ್ಟ್ 1ರಂದು ನಿಗದಿಯಾಗಿದ್ದ ಪರೀಕ್ಷೆಯನ್ನು ಸೆಪ್ಟೆಂಬರ್ 12ಕ್ಕೆ ಮುಂದೂಡಲಾಗಿದೆ ಎಂದು ಸಚಿವ ಧರ್ಮೇಂದ್ರ ಪ್ರಧಾನ್ ಟ್ವೀಟ್ ಮೂಲಕ ತಿಳಿಸಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಸಚಿವರು 'ಕೋವಿಡ್ ನಿಯಮಗಳ ಪಾಲನೆಯೊಂದಿಗೆ ದೇಶದಾದ್ಯಂತ 'ನೀಟ್-ಯುಜಿ 2021'  ಪರೀಕ್ಷೆಯು ಸೆಪ್ಟೆಂಬರ್ 12ರಂದು ನಡೆಯಲಿದೆ. ಅರ್ಜಿ ಪ್ರಕ್ರಿಯೆ ನಾಳೆ (ಮಂಗಳವಾರ) ಸಂಜೆ 5 ಗಂಟೆಯಿಂದ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್‌ಟಿಎ) ವೆಬ್‌ಸೈಟ್ ಮೂಲಕ ಪ್ರಾರಂಭವಾಗಲಿದೆ' ಎಂದು ಮಾಹಿತಿ ನೀಡಿದ್ದಾರೆ.

'ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವುದನ್ನು ಖಚಿತಪಡಿಸುವ ನಿಟ್ಟಿನಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ಎಲ್ಲ ವಿದ್ಯಾರ್ಥಿಗಳಿಗೆ ಮಾಸ್ಕ್ ಒದಗಿಸಲಾಗುವುದು. ಪ್ರವೇಶ ಹಾಗೂ ನಿರ್ಗಮನದ ಸಮಯ, ಸಂಪರ್ಕ ರಹಿತ ನೋಂದಣಿ ಹಾಗೂ ಆಸನ ವ್ಯವಸ್ಥೆ, ಸ್ಯಾನಿಟೈಸೇಷನ್ ಸೇರಿದಂತೆ ಇತರೆ  ನಿಬಂಧನೆಗಳನ್ನು ಖಚಿತಪಡಿಸಲಾಗುವುದು. ದೈಹಿಕ ಅಂತರವನ್ನು ಖಚಿತಪಡಿಸಿಕೊಳ್ಳುವ ನಿಟ್ಟಿನಲ್ಲಿ 155ರ ಬದಲು 198 ನಗರಗಳಲ್ಲಿ ಪರೀಕ್ಷೆ ಆಯೋಜಿಸಲಾಗುವುದು. ಹಾಗೆಯೇ ಪರೀಕ್ಷಾ ಕೇಂದ್ರಗಳನ್ನು 3,862ಕ್ಕೆ ಏರಿಸಲಾಗಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ