ಕ್ರೇಗ್ ಕೆಲ್ಲಿ, ಯೋಗಿ ಆದಿತ್ಯನಾಥ್ 
ದೇಶ

ಕೊರೋನಾ ನಿಭಾಯಿಸಲು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಸಹಾಯ ಕೋರಿದ ಆಸ್ಟ್ರೇಲಿಯಾ ಸಂಸದ!

ರಾಜ್ಯದ ಕೋವಿಡ್ -19 ನಿರ್ವಹಣೆಯಿಂದ ಹೆಸರಾದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಆಸ್ಟ್ರೇಲಿಯಾದ ಸಂಸದ ಕ್ರೇಗ್ ಕೆಲ್ಲಿ ಶ್ಲಾಘಿಸಿದ್ದಾರೆ. ಅಲ್ಲದೆ ಸಾಂಕ್ರಾಮಿಕ ರೋಗವನ್ನು ಎದುರಿಸಲು ತಮಗೆ ನೆರವಾಗುವಂತೆ ಸಿಎಂ ಯೋಗಿಯನ್ನು ಕೇಳಿದ್ದಾರೆ.

ಲಖನೌ: ರಾಜ್ಯದ ಕೋವಿಡ್ -19 ನಿರ್ವಹಣೆಯಿಂದ ಹೆಸರಾದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಆಸ್ಟ್ರೇಲಿಯಾದ ಸಂಸದ ಕ್ರೇಗ್ ಕೆಲ್ಲಿ ಶ್ಲಾಘಿಸಿದ್ದಾರೆ. ಅಲ್ಲದೆ ಸಾಂಕ್ರಾಮಿಕ ರೋಗವನ್ನು ಎದುರಿಸಲು ತಮಗೆ ನೆರವಾಗುವಂತೆ ಸಿಎಂ ಯೋಗಿಯನ್ನು ಕೇಳಿದ್ದಾರೆ.

ಕೆಲ್ಲಿಅವರು "ನಮ್ಮಲ್ಲಿ ಮೊದಲಿದ್ದವರು ಮಾಡಿರುವ ಅವ್ಯವಸ್ಥೆಯನ್ನು ಹೋಗಲಾಡಿಸಿ ಕೊರೋನಾ ಸೋಂಕು ತಡೆಗಟ್ಟಲು ಉತ್ತರ ಪ್ರದೇಶದ ಜನರು ಅವರ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ನಮಗೆ ಸಾಲ ನೀಡಬಹುದೆ?"  ಎಂದು ಟ್ವೀಟ್ ಮಾಡಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ, "ಕೊರೋನಾ ಅಲೆಯನ್ನು ಹತ್ತಿಕ್ಕುವಲ್ಲಿ ಅವರ ಪರಿಣಾಮಕಾರಿ ನಿರ್ವಹಣೆಗಾಗಿ ಉತ್ತರ ಪ್ರದೇಶ ರಾಜ್ಯ ಮತ್ತು ಅದರ ಮುಖ್ಯಮಂತ್ರಿ ಯೋಗಿ  ಆದಿತ್ಯನಾಥ್ ಅವರು ನಿಜಕ್ಕೂ ಉತ್ತಮ ಕೆಲಸ ಮಾಡುತ್ತಿದ್ದಾರೆ. ಆ ರಾಜ್ಯದ ಆರೋಗ್ಯ ಕಾರ್ಯಕರ್ತರು, ರೋಗಿಗಳು ಮತ್ತು ಸೋಂಕಿಗೆ ಒಳಗಾದ ಜನರನ್ನು ರಕ್ಷಿಸಿ ಸೋಂಕು ತಡೆಗಟ್ಟುವ ಕ್ರಮ ಅದ್ಭುತ!!" ಎಂದಿದ್ದಾರೆ.

ಹಿರಿಯ ನಾಗರಿಕರಿಗೆ ಆರೋಗ್ಯ ಸೇವೆ ಮತ್ತು ಕಾನೂನು ನೆರವು ಇತರ ಸೇವೆಗಳ ವಿಸ್ತರಣೆಗೆ ಸಹಾಯವಾಣಿ ಸೌಲಭ್ಯವನ್ನು ನೀಡುವ ಉತ್ತರ ಪ್ರದೇಶ ಸರ್ಕಾರದ ಉಪಕ್ರಮವನ್ನು ಕಳೆದ ತಿಂಗಳು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT