ಜೆಇಇ ಮೇನ್ 4ನೇ ಆವೃತ್ತಿ ಪರೀಕ್ಷೆ ಮುಂದೂಡಿಕೆ: ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್
ಜೆಇಇ ಮೇನ್ ನಾಲ್ಕನೇ ಆವೃತ್ತಿ ಪರೀಕ್ಷೆಯನ್ನು ಮುಂದೂಡಿರುವುದಾಗಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಿಳಿಸಿದ್ದಾರೆ.
ನವದೆಹಲಿ: ಜೆಇಇ ಮೇನ್ ನಾಲ್ಕನೇ ಆವೃತ್ತಿ ಪರೀಕ್ಷೆಯನ್ನು ಮುಂದೂಡಿರುವುದಾಗಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಿಳಿಸಿದ್ದಾರೆ.
ಎಂಜಿನಿಯರ್ ಪ್ರವೇಶಕ್ಕಾಗಿ ನಡೆಸುವ ಜೆಇಇ ಮೇನ್ ನಾಲ್ಕನೇ ಎಡಿಷನ್ ಪರೀಕ್ಷೆಯನ್ನು ಆಗಸ್ಟ್ 26ರಿಂದ ಸೆಪ್ಟೆಂಬರ್ 2ರವರೆಗೆ ನಡೆಯಲಿದೆ. ಇದರೊಂದಿಗೆ ಪರೀಕ್ಷೆಗೆ ಸಿದ್ಧತೆ ನಡೆಸಲು ವಿದ್ಯಾರ್ಥಿಗಳಿಗೆ ಒಂದು ತಿಂಗಳ ಹೆಚ್ಚುವರಿ ಸಮಯ ಸಿಗಲಿದೆ.
ಜುಲೈ 27ರಿಂದ ಆಗಸ್ಟ್ 2ರವರೆಗೆ ಪರೀಕ್ಷೆ ನಡೆಸಲು ಈ ಹಿಂದೆ ಘೋಷಿಸಲಾಗಿತ್ತು. ಆದರೆ ಕೊರೋನಾ ಕಾರಣಗಳಿಗಾಗಿ ಮತ್ತೆ ಪರೀಕ್ಷೆಯನ್ನು ಮುಂದೂಡಲಾಗಿದೆ.
ನಾಲ್ಕನೆ ಆವೃತ್ತಿಯ ಜೆಇಇ ಮೇನ್ ಪರೀಕ್ಷೆ ಬರೆಯಲು ಇದಾಗಲೇ 7.32 ಲಕ್ಷ ವಿದ್ಯಾರ್ಥಿಗಳು ಹೆಸರನ್ನು ನೊಂದಾಯಿಸಿಕೊಂಡಿದ್ದಾರೆ ಎಂದು ಧರ್ಮೇಂದ್ರ ಪ್ರಧಾನ್ ಟ್ವೀಟ್ ಮಾಡಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.