ದೇಶ

ಪಿಎಂಎಲ್ಎ ಪ್ರಕರಣ: ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ 4 ಕೋಟಿ ರೂ. ಮೌಲ್ಯದ ಆಸ್ತಿ ವಶಕ್ಕೆ ಪಡೆದ ಇಡಿ

Raghavendra Adiga

ನವದೆಹಲಿ/ಮುಂಬೈ: ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಮತ್ತು ಇತರರ ವಿರುದ್ಧದ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಸುಮಾರು 4 ಕೋಟಿ ರೂಪಾಯಿಗಳ ಆಸ್ತಿಯನ್ನು ವಶಕ್ಕೆ ಪಡೆದಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ತಾತ್ಕಾಲಿಕವಾಗಿ ವಶಕ್ಕೆ ತೆಗೆದುಕೊಂಡ ಬಗ್ಗೆ ಆದೇಶ ಹೊರಡಿಸಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

72 ವರ್ಷದ ದೇಶಮುಖ್ ಇದುವರೆಗೆ ಕನಿಷ್ಠ ಮೂರು ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್ ಗಳಿಗೆ ತಪ್ಪಿಸಿಕೊಂಡಿದ್ದಾರೆ. ಅವರ ಮಗ ಹೃಷಿಕೇಶ್ ಮತ್ತು ಪತ್ನಿಯನ್ನೂ ಸಹ ಫೆಡರಲ್ ತನಿಖಾ ಸಂಸ್ಥೆ ಕರೆಸಿದೆ. ಆದರೆ ಅವರೂ ಸಹ ಉತ್ತರಿಸಲು ನಿರಾಕರಿಸಿದ್ದಾರೆ.

ಈ ವರ್ಷದ ಏಪ್ರಿಲ್‌ನಲ್ಲಿ ದೇಶಮುಖ್ ರಾಜೀನಾಮೆ ನೀಡಲು ಕಾರಣವಾದ ಮಹಾರಾಷ್ಟ್ರ ಪೊಲೀಸ್ ಇಲಾಖೆಯಲ್ಲಿ 100 ಕೋಟಿ ರೂ. ಗಳ ಲಂಚ, ಸುಲಿಗೆ ದಂಧೆಗೆ ಸಂಬಂಧಿಸಿದಂತೆ ಪಿಎಂಎಲ್‌ಎ ಅಡಿಯಲ್ಲಿ ದಾಖಲಾದ ಕ್ರಿಮಿನಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಸಮನ್ಸ್ ಜಾರಿ ಮಾಡಲಾಗಿದೆ.

ಎನ್‌ಸಿಪಿ ಮುಖಂಡ ದೇಶಮುಖ್ ಯಾವುದೇ ಲಂಚ ಅಥವಾ ಭ್ರಷ್ಟಾಚಾರವನ್ನು ನಿರಾಕರಿಸಿದ್ದಾರೆ, ಅವರ ವಕೀಲರು ಅವರ ವಿರುದ್ಧ ಇಡಿ ಕ್ರಮವನ್ನು ನ್ಯಾಯಸಮ್ಮತವಲ್ಲ ಎಂದು ವಾದಿಸಿದ್ದಾರೆ. ಮಾಜಿ ಸಚಿವರು ಇತ್ತೀಚೆಗೆ ಇಡಿಯ ಯಾವುದೇ ಬಲವಂತದ ಕ್ರಮದಿಂದ ರಕ್ಷಣೆ ಕೋರಿ ಅರ್ಜಿಯೊಂದನ್ನು ಸುಪ್ರೀಂ ಕೋರ್ಟ್‌ ನಲ್ಲಿ ಸಲ್ಲಿಸಿದ್ದಾರೆ.

SCROLL FOR NEXT