ಕಾರ್ಯಾಚರಣೆ ದೃಶ್ಯ 
ದೇಶ

ಮಧ್ಯ ಪ್ರದೇಶ: ಮಣ್ಣು ಕುಸಿದು ಬಾವಿಗೆ ಬಿದ್ದ 40ಕ್ಕೂ ಹೆಚ್ಚು ಮಂದಿ; 19 ಜನರ ರಕ್ಷಣೆ, ಸಾವಿನ ಸಂಖ್ಯೆ 4ಕ್ಕೆ ಏರಿಕೆ

ಬಾವಿಗೆ ಬಿದ್ದ 8 ವರ್ಷದ ಬಾಲಕಿಯನ್ನು ರಕ್ಷಿಸಲು ಹೋಗಿ ಧಾರಾಕಾರ ಮಳೆಗೆ ಮಣ್ಣು ಕುಸಿದು ಬಿದ್ದು ಸುಮಾರು 40 ಮಂದಿ ಬಾವಿಗೆ ಬಿದ್ದಿದ್ದು, ಇದುವರೆಗೆ ಮೃತಪಟ್ಟವರ ಸಂಖ್ಯೆ 4ಕ್ಕೆ ಏರಿದೆ, 19 ಮಂದಿಯನ್ನು ಕಾರ್ಯಾಚರಣೆಯಲ್ಲಿ ರಕ್ಷಿಸಲಾಗಿದೆ.

ವಿದಿಶ (ಮಧ್ಯ ಪ್ರದೇಶ): ಬಾವಿಗೆ ಬಿದ್ದ 8 ವರ್ಷದ ಬಾಲಕಿಯನ್ನು ರಕ್ಷಿಸಲು ಹೋಗಿ ಧಾರಾಕಾರ ಮಳೆಗೆ ಮಣ್ಣು ಕುಸಿದು ಬಿದ್ದು ಸುಮಾರು 40 ಮಂದಿ ಬಾವಿಗೆ ಬಿದ್ದಿದ್ದು, ಇದುವರೆಗೆ ಮೃತಪಟ್ಟವರ ಸಂಖ್ಯೆ 4ಕ್ಕೆ ಏರಿದೆ, 19 ಮಂದಿಯನ್ನು ಕಾರ್ಯಾಚರಣೆಯಲ್ಲಿ ರಕ್ಷಿಸಲಾಗಿದೆ.

ಮಧ್ಯ ಪ್ರದೇಶದ ವಿದಿಶಾ ಜಿಲ್ಲೆಯ ಗಂಜ್ ಬಸೊಡ ಪ್ರದೇಶದಲ್ಲಿ ನಿನ್ನೆ ಸಾಯಂಕಾಲ ಈ ದುರ್ಘಟನೆ ನಡೆದಿದ್ದು ಧಾರಾಕಾರ ಮಳೆಗೆ ಕಾರ್ಯಾಚರಣೆಗೆ ಅಡ್ಡಿಯನ್ನುಂಟುಮಾಡುತ್ತಿದೆ ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ತಿಳಿಸಿದ್ದಾರೆ.ಮೃತಪಟ್ಟವರ ಕುಟುಂಬಕ್ಕೆ ಸಂತಾಪ ಸೂಚಿಸಿರುವ ಮುಖ್ಯಮಂತ್ರಿಗಳು ರಕ್ಷಣಾ ಕಾರ್ಯ ಮುಂದುವರಿದಿದೆ. ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ನಿರಂತರವಾಗಿ ಗಮನಿಸುತ್ತಿದ್ದೇನೆ ಎಂದು ಹೇಳಿದ್ದಾರೆ.

ಬಾವಿಯ ಪಕ್ಕ ಆಟವಾಡುತ್ತಿದ್ದ ಬಾಲಕಿ ಆಕಸ್ಮಿಕವಾಗಿ ಬಾವಿಗೆ ಬಿದ್ದಿದ್ದಳು, ಕೂಡಲೇ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿಗೆ ವಿಷಯ ತಲುಪಿಸಿದರು. ನಿನ್ನೆ ಸಾಯಂಕಾಲ ರಕ್ಷಣಾ ಕಾರ್ಯ ನಡೆಯುತ್ತಿದ್ದ ವೇಳೆ ಅದನ್ನು ವೀಕ್ಷಿಸಲು ಸೇರಿದ್ದ ಜನರು ದಿಢೀರನೆ ಮಣ್ಣು ಕುಸಿದು ಬಿದ್ದು ಬಾವಿಗೆ ಬಿದ್ದಿದ್ದಾರೆ. ಜನರು ಬಾಲಕಿಯನ್ನು ರಕ್ಷಿಸಲು ನೋಡುತ್ತಿದ್ದ ವೇಳೆ ಬಾವಿಯ ಗೋಡೆ ಕುಸಿದು ಬಿದ್ದಿದ್ದಾರೆ ಎಂದು ಭೋಪಾಲ್ ವಿಭಾಗೀಯ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಸಾಯಿ ಮನೋಹರ್ ತಿಳಿಸಿದ್ದಾರೆ.

19 ಮಂದಿಯನ್ನು ಕಾರ್ಯಾಚರಣೆಯಲ್ಲಿ ರಕ್ಷಿಸಲಾಗಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ ಜಂಟಿಯಾಗಿ ಈ ಕಾರ್ಯಾಚರಣೆ ನಡೆಸುತ್ತಿದೆ. ಇಲ್ಲಿ ಮಣ್ಣು ಕುಸಿತ ಪದೇ ಪದೇ ಸಂಭವಿಸುತ್ತಿದೆ. ಎಷ್ಟು ಮಂದಿ ಅಸುನೀಗಿದ್ದಾರೆ ಎಂದು ಕಾರ್ಯಾಚರಣೆ ಮುಗಿಯುವವರೆಗೆ ಹೇಳುವುದು ಕಷ್ಟ ಎಂದು ವಿದಿಶಾ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಮಧ್ಯ ಪ್ರದೇಶ ವೈದ್ಯಕೀಯ ಶಿಕ್ಷಣ ಸಚಿವ ವಿಶ್ವಾಸ್ ಕೈಲಾಶ್ ಸಾರಂಗ್ ತಿಳಿಸಿದ್ದಾರೆ, ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ.

ಬಾಲಕಿ ಇನ್ನೂ ಬಾವಿಯೊಳಗಿದ್ದು ಬಾವಿಯ ಗೋಡೆ ಕುಸಿದಾಗ ಆಕೆಗೂ ಗಾಯವಾಗಿತ್ತೇ ಎಂದು ಸ್ಪಷ್ಟವಾಗಿಲ್ಲ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಮುಖ್ಯಮಂತ್ರಿ ಪರಿಹಾರ: ದುರ್ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರ ಕುಟುಂಬಗಳಿಗೆ ತಲಾ 50 ಸಾವಿರ ರೂಪಾಯಿ ಪರಿಹಾರವನ್ನು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಘೋಷಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉತ್ತರ ಭಾರತದಾದ್ಯಂತ ಶೂನ್ಯ ಗೋಚರತೆ; ದೆಹಲಿಗೆ ರೆಡ್ ಅಲರ್ಟ್ ಘೋಷಿಸಿದ IMD

ಗುಂಡೇಟಿಗೆ ವಿದ್ಯಾರ್ಥಿ ನಾಯಕ ಉಸ್ಮಾನ್ ಹಾದಿ ಬಲಿ: ಬಾಂಗ್ಲಾದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ, ಅವಾಮಿ ಲೀಗ್ ಪಕ್ಷದ ಕಚೇರಿಗೆ ಬೆಂಕಿ ಹಚ್ಚಿ ಆಕ್ರೋಶ

Video: ಬುರ್ಜ್ ಖಲೀಫಾಗೆ ಬಡಿದ ಸಿಡಿಲು; ಅದ್ಭುತ ವಿಡಿಯೋ ಹಂಚಿಕೊಂಡ ದುಬೈ ಕ್ರೌನ್ ಪ್ರಿನ್ಸ್; ಸಿಕ್ಕಾಪಟ್ಟೆ ವೈರಲ್!

MUDA ಹಗರಣ: ಕೇಸ್‌ ಡೈರಿ ಸಲ್ಲಿಸುವಂತೆ ಲೋಕಾಯುಕ್ತ ಅಧಿಕಾರಿಗಳಿಗೆ ಕೋರ್ಟ್ ಸೂಚನೆ..!

ಕರ್ನಾಟಕ ಕಾನೂನು ವಿವಿಯಲ್ಲಿ ಸಿಬ್ಬಂದಿ ಕೊರತೆ ಪರಿಹರಿಸಲು ನಾಲ್ವರು ಸದಸ್ಯರ ಸಮಿತಿ ರಚನೆ

SCROLL FOR NEXT