ನವದೆಹಲಿ: ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಶನಿವಾರ ನವದೆಹಲಿಯಲ್ಲಿ ಭೇಟಿ ಮಾಡಿದ್ದಾರೆ.
ಪ್ರಧಾನಮಂತ್ರಿಗಳ ನಿವಾಸಕ್ಕೆ ಶರದ್ ಪವಾರ್ ಅವರು ಇಂದು ಭೇಟಿ ನೀಡಿದ್ದು, ಇಬ್ಬರ ನಡುವೆ ಸುಮಾರು 50 ನಿಮಿಷಗಳ ಕಾಲ ಮಾತುಕತೆ ನಡೆದಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಉಭಯ ನಾಯಕರ ಭೇಟಿ ಕುರಿತು ಪ್ರಧಾನ ಮಂತ್ರಿಗಳ ಕಚೇರಿ ಸಾಮಾಜಿಕ ಜಾಲತಾಣ ಟ್ವಿಟ್ ಮಾಡಿದ್ದು, "ರಾಜ್ಯಸಭಾ ಸಂಸದ ಶರದ್ ಪವಾರ್ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾದರು ಎಂದು ಹೇಳಿದೆ.
ಜುಲೈ 19ರಿಂದ ಸಂಸತ್ ಚಳಗಾಲ ಅಧಿವೇಶನ ಆರಂಭವಾಗಲಿದ್ದು, ಅಧಿವೇಶನ ಆರಂಭಕ್ಕೆ ಎರಡು ದಿನ ಬಾಕಿಯಿರುವಾಗಲೇ ಶರದ್ ಪವಾರ್ ಅವರು ಪ್ರಧಾನಮಂತ್ರಿಗಳನ್ನು ಭೇಟಿ ಮಾಡಿದ್ದಾರೆ.