ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ 
ದೇಶ

ಅಯೋಧ್ಯೆಯಲ್ಲಿ ಇದೇ 23 ರಂದು ಬಿಎಸ್ಪಿಯಿಂದ ಬ್ರಾಹ್ಮಣರ ಸಮ್ಮೇಳನ ಆಯೋಜನೆ

ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಹುಜನ ಸಮಾಜ ಪಕ್ಷ (ಬಿಎಸ್ ಪಿ) ಇದೇ 23 ರಂದು ಅಯೋಧ್ಯೆಯಲ್ಲಿ ಬ್ರಾಹ್ಮಣ್ಯರ ಸಮ್ಮೇಳನವನ್ನು ಆಯೋಜಿಸುತ್ತಿದೆ.

ಲಖನೌ: ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಹುಜನ ಸಮಾಜ ಪಕ್ಷ (ಬಿಎಸ್ ಪಿ) ಇದೇ 23 ರಂದು ಅಯೋಧ್ಯೆಯಲ್ಲಿ ಬ್ರಾಹ್ಮಣ್ಯರ ಸಮ್ಮೇಳನವನ್ನು ಆಯೋಜಿಸುತ್ತಿದೆ.

ಸುದ್ದಿಗಾರರಿಗೆ ಇಂದು ಈ ವಿಷಯ ತಿಳಿಸಿದ ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬ್ರಾಹ್ಮಣರು ಬಿಜೆಪಿಗೆ ಮತ ಚಲಾಯಿಸುವುದಿಲ್ಲ ಎಂಬ ಹೆಚ್ಚಿನ ವಿಶ್ವಾಸವಿದೆ ಎಂದರು. 

ಬ್ರಾಹ್ಮಣ ಸಮುದಾಯದೊಂದಿಗೆ ಸಂಪರ್ಕ ಸಾಧಿಸಲು ಜುಲೈ 23 ರಂದು ಅಯೋಧ್ಯೆಯಿಂದ ಬಿಎಸ್ ಪಿ ಪ್ರಧಾನ ಕಾರ್ಯದರ್ಶಿ ಎಸ್ ಸಿ ಮಿಶ್ರಾ ನೇತೃತ್ವದಲ್ಲಿ ಪ್ರಚಾರ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು, ಬಿಎಸ್ ಪಿ ಆಡಳಿತದಲ್ಲಿ ಮಾತ್ರ ಅವರ ಹಿತಾಸಕ್ತಿ ಸುಭದ್ರ ಎಂಬ  ಭರವಸೆ ಮೂಡಿಸಲಾಗುವುದು ಎಂದು ಅವರು ತಿಳಿಸಿದರು.

ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ದೇಶ ಹಾಗೂ ಜನರಿಗೆ ಪ್ರಯೋಜನಕಾರಿಯಾದ ವಿಷಯಗಳ ಬಗ್ಗೆ ಧ್ವನಿ ಎತ್ತುವಂತೆ ಬಿಎಸ್ ಪಿ ಪಕ್ಷದ ಸಂಸದರಿಗೆ ನಿರ್ದೇಶನ ನೀಡಲಾಗಿದೆ. ದೇಶದ ಜನರು ಕೇಂದ್ರ ಸರ್ಕಾರದಿಂದ ಹೊಣೆಗಾರಿಕೆಯನ್ನು ಬಯಸುವ ಅನೇಕ ವಿಷಯಗಳಿವೆ ಎಂದು ಮಾಯವತಿ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜರ್ಮನಿಯ ವಸತಿ ಕಟ್ಟಡದಲ್ಲಿ ಶಂಕಿತ ಬೆಂಕಿ ಅವಘಡ: 3 ಭಾರತೀಯರು ಸಾವು!

ಕಾಂಗ್ರೆಸ್‌ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ ವಿಜಯೇಂದ್ರ; Video

ಯೂಟ್ಯೂಬರ್ ಧ್ರುವ್ ರಾಠಿಗೆ ಸಂಕಷ್ಟ: 8 ವರ್ಷಗಳ ಹಿಂದಿನ ಪ್ರಕರಣಕ್ಕೆ ಮರುಜೀವ; ದೆಹಲಿ ಕೋರ್ಟ್ ಸಮನ್ಸ್!

"ತಿರಂಗಾ ಹಾರಿಸುವುದು ಅಪರಾಧವಲ್ಲ ಎಂಬುದನ್ನು ತೋರಿಸುತ್ತೇವೆ": ಅಕ್ಟೋಬರ್ 16ಕ್ಕೆ ತ್ರಿವರ್ಣ ಧ್ವಜದೊಂದಿಗೆ ಬನ್ನಿ- ಅಭಿಜಿತ್ ದೀಪ್ಕೆ ಕರೆ

ಸುಪ್ರೀಂಕೋರ್ಟ್​ಗೆ ನನ್ನ ಬಗ್ಗೆ ತಪ್ಪು ಮಾಹಿತಿ: ಸರ್ಕಾರದ ವಿರುದ್ಧ ಡಿಜಿಪಿ ಅಲೋಕ್ ಕುಮಾರ್ ಅಸಮಾಧಾನ!