ಸಂಗ್ರಹ ಚಿತ್ರ 
ದೇಶ

ಕೋವಿಡ್-19: ಭಾರತದಲ್ಲಿಂದು 41,157 ಹೊಸ ಕೇಸ್ ಪತ್ತೆ; 518 ಮಂದಿ ಸಾವು

ಭಾರತದಲ್ಲಿ ದಿನಕಳೆದಂತೆ ಮಹಾಮಾರಿ ಕೊರೋನಾ ವೈರಸ್ ಅಬ್ಬರ ಇಳಿಕೆಯಾಗುತ್ತಿದ್ದು, ದೇಶದಲ್ಲಿ ಭಾನುವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 41,157 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 518 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ನವದೆಹಲಿ; ಭಾರತದಲ್ಲಿ ದಿನಕಳೆದಂತೆ ಮಹಾಮಾರಿ ಕೊರೋನಾ ವೈರಸ್ ಅಬ್ಬರ ಇಳಿಕೆಯಾಗುತ್ತಿದ್ದು, ದೇಶದಲ್ಲಿ ಭಾನುವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 41,157 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 518 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ಭಾನುವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,11,06,065 ಕ್ಕೆ ತಲುಪಿದ್ದು, ಸಾವಿನ 4,13,609ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ದೇಶದಲ್ಲಿ ಗುಣಮುಖರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಸಕ್ರಿಯ ಸೋಂಕಿತರ ಸಂಖ್ಯೆ 4,22,660ಕ್ಕೆ ಕುಸಿದಿದೆ. 

ಈ ನಡುವೆ ಕಳೆದ 24 ಗಂಟೆಗಳಲ್ಲಿ 42,004 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,02,69,796ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 19,36,709 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 44,39,58,663 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ 1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. 

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 40,49,31,715 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೋದಿ ವಿರೋಧಿ ಪ್ರತಿಭಟನೆಗಳಿಗೆ ಅಮೆರಿಕನ್ನರ ಆರ್ಥಿಕ ನೆರವು?'; Mary Millben ಸ್ಫೋಟಕ ಆರೋಪ!

‘ಮೋದಿಗೆ ಅಮೆರಿಕ ಬೇಕಿಲ್ಲ, ಆದರೆ ಅಮೆರಿಕಕ್ಕೆ ಮೋದಿ ಬೇಕು'.. 'ನಿಮ್ಮನ್ನು ಬಳಸಿಕೊಂಡು ಕೈ ಬಿಡುತ್ತಾರೆ': ಅಭಿಜಿತ್ ದೀಪ್ಕೆಗೆ ಹಾಲಿವುಡ್ ಗಾಯಕಿ ಎಚ್ಚರಿಕೆ

CJP ಪ್ರತಿಭಟನೆಯಲ್ಲಿ ಭಾಗಿ: ನಟ Imran Khanಗೆ ಮುಂಬೈ ಪೊಲೀಸರಿಂದ 'Leave India' ನೋಟಿಸ್, ಅ.28ರೊಳಗೆ ಭಾರತ ತೊರೆಯುವಂತೆ ಗಡುವು..!

ಜಿಯೋ - ಸ್ಟಾರ್‌ಲಿಂಕ್‌, ಸ್ಟಾರ್ ವಾರ್ ಹಿಂದಿನ ಆರ್ಥಿಕತೆ! (ಹಣಕ್ಲಾಸು)

ಹಿಂದೂ ಧರ್ಮದಿಂದ ಇಸ್ಲಾಂಗೆ ಮತಾಂತರಗೊಂಡರೆ ಮೀಸಲಾತಿ ಸೌಲಭ್ಯ ಸಿಗಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು!