ಅಜಂಖಾನ್ 
ದೇಶ

ಸಮಾಜವಾದಿ ಪಕ್ಷದ ಹಿರಿಯ ಮುಖಂಡ ಅಜಂ ಖಾನ್ ಆರೋಗ್ಯ ಕ್ಷೀಣ

ಸಿತಾಪುರ ಜೈಲಿನಲ್ಲಿರುವ ಸಮಾಜವಾದಿ ಪಕ್ಷದ ಹಿರಿಯ ಮುಖಂಡ ಅಜಂ ಖಾನ್ ಅವರ ಆರೋಗ್ಯ ಕ್ಷೀಣಿಸಿದೆ. ಇಂದು ಬೆಳಗ್ಗೆ ಅವರ ಆರೋಗ್ಯದಲ್ಲಿ ಏರುಪೇರಾದ ನಂತರ ಲಖನೌನ ಆಸ್ಪತ್ರೆಯೊಂದಕ್ಕೆ ಕಳುಹಿಸಲಾಯಿತು ಎಂದು ಕಾರಾಗೃಹದ ಅಧಿಕಾರಿಗಳು ತಿಳಿಸಿದ್ದಾರೆ.

ಲಖನೌ: ಸಿತಾಪುರ ಜೈಲಿನಲ್ಲಿರುವ ಸಮಾಜವಾದಿ ಪಕ್ಷದ ಹಿರಿಯ ಮುಖಂಡ ಅಜಂ ಖಾನ್ ಅವರ ಆರೋಗ್ಯ ಕ್ಷೀಣಿಸಿದೆ. ಇಂದು ಬೆಳಗ್ಗೆ ಅವರ ಆರೋಗ್ಯದಲ್ಲಿ ಏರುಪೇರಾದ ನಂತರ ಲಖನೌನ ಆಸ್ಪತ್ರೆಯೊಂದಕ್ಕೆ ಕಳುಹಿಸಲಾಯಿತು ಎಂದು ಕಾರಾಗೃಹದ ಅಧಿಕಾರಿಗಳು ತಿಳಿಸಿದ್ದಾರೆ.

ಕೋವಿಡ್-19 ಸೋಂಕಿಗೆ ತುತ್ತಾಗಿರುವ ಅಜಂ ಖಾನ್ ಅವರಿಗೆ ಬೆಳಗ್ಗೆ ಉಸಿರಾಟದಲ್ಲಿ ತೊಂದರೆ ಉಂಟಾಗಿತ್ತು. ಕೂಡಲೇ, ಜಿಲ್ಲಾಸ್ಪತ್ರೆಯ ವೈದ್ಯರ ತಂಡವೊಂದು ತಪಾಸಣೆ ನಡೆಸಿತು ಎಂದು ಸಿತಾಪುರ ಜಿಲ್ಲಾ ಕಾರಾಗೃಹದ ಅಧಿಕಾರಿ ಆರ್ ಎಸ್ ಯಾದವ್ ಹೇಳಿದ್ದಾರೆ.

ಪ್ರಾಥಮಿಕ ತಪಾಸಣೆ ವೇಳೆಯಲ್ಲಿ ಅವರ ಅಮ್ಲಜನಕದ ಪ್ರಮಾಣ ಕಡಿಮೆ ಇರುವುದು ಕಂಡುಬಂದಿತು ತದನಂತರ ಉತ್ತಮ ಚಿಕಿತ್ಸೆಗಾಗಿ ಲಖನೌ ಆಸ್ಪತ್ರೆಗೆ ಸಲಹೆ ಮಾಡಲಾಯಿತು ಎಂದು ಅವರು ತಿಳಿಸಿದ್ದಾರೆ.

ಕೂಡಲೇ ಅವರನ್ನು  ಕೋವಿಡ್ ಚಿಕಿತ್ಸೆ ಪಡೆದು ಇತ್ತೀಚಿಗೆ ಬಿಡುಗಡೆಯಾಗಿದ್ದ ಲಖನೌನ ಮೆದಾಂತ ಆಸ್ಪತ್ರೆಗೆ ಶಿಫಾರಸು ಮಾಡಲಾಯಿತು. ಮಧ್ಯಾಹ್ನ 2 ಗಂಟೆ ಸುಮಾರಿನಲ್ಲಿ ಪೊಲೀಸ್ ಎಸ್ಕಾರ್ಟ್ ನೊಂದಿಗೆ ಆಂಬ್ಯುಲೆನ್ಸ್ ವೊಂದರನ್ನು ಅವರನ್ನು ಕಳುಹಿಸಲಾಯಿತು ಎಂದು ಅವರು ಮಾಹಿತಿ ನೀಡಿದ್ದಾರೆ.

ಹಿರಿಯ ಸಮಾಜವಾದಿ ಪಕ್ಷದ ಮುಖಂಡರಾಗಿರುವ ಅಜಂ ಖಾನ್ ವಂಚನೆ ಮತ್ತಿತರ ಅನೇಕ ಅಪರಾಧ ಪ್ರಕರಣಗಳಲ್ಲಿ ಜೈಲು ಸೇರಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಕಾವೇರಿ ನಿವಾಸದಲ್ಲಿ ಬ್ರೇಕ್‌ಫಾಸ್ಟ್ ಮೀಟಿಂಗ್ ಆರಂಭ, ಡಿಕೆಶಿ ಎದುರೇ ‘5 ವರ್ಷ ಸಿದ್ದರಾಮಯ್ಯ ಸಿಎಂ’ ಘೋಷಣೆ ಕೂಗಿದ ಅಭಿಮಾನಿಗಳು..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT