ಮುಕ್ತಾರ್ ಅಬ್ಬಾಸ್ ನಖ್ವಿ 
ದೇಶ

ರಾಜ್ಯಸಭೆಯ ಉಪ ನಾಯಕ ಸ್ಥಾನಕ್ಕೆ ಮುಖ್ತಾರ್ ಅಬ್ಬಾಸ್ ನಖ್ವಿ ಹೆಸರು!

ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಅವರನ್ನು ರಾಜ್ಯಸಭೆಯಲ್ಲಿ ಸದನದ ಉಪ ನಾಯಕ ಸ್ಥಾನಕ್ಕೆ ಹೆಸರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ನವದೆಹಲಿ: ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಅವರನ್ನು ರಾಜ್ಯಸಭೆಯಲ್ಲಿ ಸದನದ ಉಪನಾಯಕ ಸ್ಥಾನಕ್ಕೆ ಹೆಸರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ರಾಜ್ಯಸಭೆಯಲ್ಲಿ ಸದನ ನಾಯಕರಾಗಿ ನೇಮಕಗೊಂಡಿರುವ ಪಿಯೂಷ್ ಗೋಯಲ್ ಅವರ ನಂತರದ ಸ್ಥಾನದಲ್ಲಿ ನಖ್ವಿ ಅವರನ್ನು ಆಯ್ಕೆ ಮಾಡಲಾಗಿದೆ.

ಪ್ರಸ್ತುತ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವರಾಗಿರುವ ನಖ್ವಿ ಅವರು ಸಂಸದೀಯ ವ್ಯವಹಾರಗಳ ಬಗ್ಗೆ ವ್ಯಾಪಕ ಜ್ಞಾನ ಹೊಂದಿದ್ದು, ಮೋದಿ ಸರ್ಕಾರದ ಮೊದಲ ಅವಧಿಯಲ್ಲಿ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು.

ರಾಜಕೀಯ ವಲಯದಲ್ಲಿ ಬಹುತೇಕ ಎಲ್ಲ ನಾಯಕರೊಂದಿಗೆ ಸೌಹಾರ್ದಯುತ ಸಂಬಂಧ ಹೊಂದಿರುವ ನಖ್ವಿ ಅವರನ್ನು ರಾಜ್ಯಸಭೆಯಲ್ಲಿ ಸದನದ ಉಪನಾಯಕ ಸ್ಥಾನಕ್ಕೆ ಆಯ್ಕೆ ಮಾಡಿರುವುದು ಮಹತ್ವ ಪಡೆದುಕೊಂಡಿದೆ. ಕೋವಿಡ್ ನಿರ್ವಹಣೆ ಇಂಧನ ಬೆಲೆ ಏರಿಕೆ, ಕೋವಿಡ್ ನಿರ್ವಹಣೆ, ರೈತರ ಪ್ರತಿಭಟನೆ  ವಿಚಾರವಾಗಿ ಅಧಿವೇಶನದಲ್ಲಿ ವಿಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ಮುಗಿಬೀಳಲು ಸಿದ್ಧರಾಗಿರುವ ಈ ಹೊತ್ತಿನಲ್ಲಿ ನಖ್ವಿ ಅವರ ಆಯ್ಕೆ ಮೋದಿ ಸರ್ಕಾರ ಎಷ್ಟರಪಟ್ಟಿಗೆ ನೆರವಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ