ದೇಶ

ಇಂದಿನಿಂದ ಸಂಸತ್ ಅಧಿವೇಶನ: ಬೆಲೆ ಏರಿಕೆ, ಕೋವಿಡ್ ವಿಷಯ ಬಳಸಿ ಮೋದಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ವಿಪಕ್ಷಗಳ ಸಜ್ಜು

Manjula VN

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನ ಸೋಮವಾರದಿಂದ ಆರಂಭವಾಗಲಿದ್ದು, ಮೊದಲ ದಿವೇ ಕಾವೇರುವ ಸಾಧ್ಯತೆಗಳಿವೆ. ತೈಲ ಬೆಲೆ  ಏರಿಕೆ, ಅಗತ್ಯ ವಸ್ತುಗಳ ಬೆಲೆ ಏರಿಕೆ ಹಾಗೂ ಕೋವಿಡ್ ನಿರ್ವಹಣೆ ವಿಚಾರಗಳ ಹಿಡಿದು ಮೋದಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ವಿರೋಧ ಪಕ್ಷಗಳು ಸಜ್ಜಾಗಿವೆ. 

ಇದೇ ವೇಳೆ ಸರ್ಕಾರವು 17 ವಿಧೇಯಗಳನ್ನು ಮಂಡಿಸಲು ಸಿದ್ಧತೆ ನಡೆಸಿದ್ದು, ಇದರಲ್ಲಿ 3 ಸುಗ್ರೀವಾಜ್ಞೆ ಕೂಡ ಸೇರಿವೆ ಎಂದು ತಿಳಿದುಬಂದಿದೆ. 

ಶಸ್ತ್ರಾಸ್ತ್ರ ಉತ್ಪಾದಿಸುವ ಕಾರ್ಖಾನೆಗಳ ನೌಕರರು ಮುಷ್ಕರ ನಡೆಸುವಂತಿಲ್ಲ ಎಂದು ನಿರ್ಬಂಧ ವಿಧಿಸುವ ಸುಗ್ರೀವಾಜ್ಞೆಯ ಇವುಗಳಲ್ಲಿ ಮಹತ್ವವಾದುದು. ದೆಹಲಿ ವಾಯುಗುಣಮಟ್ಟ ಕಾಯುವ ಸುಗ್ರೀವಾಜ್ಞೆ ಕೂಡ ಇದರಲ್ಲಿ ಸೇರಿದೆ. ಆದರೆ, ಆಗಸ್ಟ್ 13ರಂದು ಮುಗಿಯಲಿರುವ ಈ ಅಧಿವೇಶನದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರ ರೂ.100 ಗಡಿ ದಾಟಿರುವುದು ಪ್ರಮುಖ ವಿಷಯವಾಗುವ ಸಾಧ್ಯತೆಗಳಿವೆ. ಇದನ್ನು ಪ್ರಮುಖವಾಗಿ ಪ್ರಸ್ತಾಪಿಸಿ ಸರ್ಕಾರದಿಂದ ಉತ್ತರ ಬಯಸು ಕಾಂಗ್ರೆಸ್ ಆದಿಯಾಗಿ ವಿವಿಧ ಪಕ್ಷಗಳು ತೀರ್ಮಾನಿಸಿದೆ. 

ಇನ್ನು ಕೋವಿಡ್ 2ನೇ ಅಲೆ ವೇಳೆ ಅಪಾರ ಸಾವು ನೋವು ಸಂಭವಿಸಿದ್ದು, ಇದಕ್ಕೆ ಸರ್ಕಾರದ ಆರೋಗ್ಯ ವ್ಯವಸ್ಥೆ ವೈಫಲ್ಯವೇ ಕಾರಣ ಎಂಬುದು ಪ್ರತಿಪಕ್ಷಗಳ ಮುಖ್ಯ ಆರೋಪವಾಗಿದೆ. 

ಇದೂ ಕೂಡ ಪ್ರಮುಖ ಚರ್ಚಾ ವಿಷಯವಾಗುವ ಸಾಧ್ಯತೆಗಳಿವೆ. ಇನ್ನು ಪಶ್ಚಿಮ ಬಂಗಾಳದಲ್ಲಿನ ಟಿಎಂಸಿ-ಬಿಜೆಪಿ ರಾಜಕೀಯ ಸಂಘರ್ಷ ಕೂಡ ಕೋಲಾಹಲ ಎಬ್ಬಿಸುವ ಸಾಧ್ಯತೆಗಳಿವೆ.

SCROLL FOR NEXT