ದೇಶ

ಜಮ್ಮು-ಕಾಶ್ಮೀರದಲ್ಲಿ ನಕಲಿ ಉಗ್ರರ ದಾಳಿ: ಇಬ್ಬರು ಬಿಜೆಪಿ ಕಾರ್ಯಕರ್ತರು, ಸೆಕ್ಯೂರಿಟಿ ಗಾರ್ಡ್ ಬಂಧನ

Nagaraja AB

ಶ್ರೀನಗರ: ಕಳೆದ ವಾರ ಜಮ್ಮು-ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ನಡೆದಿದ್ದ ನಕಲಿ ಉಗ್ರರ ದಾಳಿ ಆರೋಪಕ್ಕೆ ಸಂಬಂಧಿಸಿದಂತೆ ಇಬ್ಬರು ಬಿಜೆಪಿ ಕಾರ್ಯಕರ್ತರು ಹಾಗೂ ಅವರ ಇಬ್ಬರು ವೈಯಕ್ತಿಕ ಭದ್ರತಾ ಸಿಬ್ಬಂದಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಮಂಗಳವಾರ ಹೇಳಿದ್ದಾರೆ.

ಬಿಜೆಪಿ ಕಾರ್ಯಕರ್ತ ಇಷ್ಫಾಕ್ ಮಿರ್ ಮತ್ತು ಬಶರತ್ ಅಹ್ಮದ್ ಮತ್ತು ಇಬ್ಬರು ಸೆಕ್ಯೂರಿಟಿ ಗಾರ್ಡ್ ಗಳನ್ನು ಸೋಮವಾರ ಬಂಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಹೆಚ್ಚಿದ ಭದ್ರತೆ ಪಡೆಯಲು ಬಿಜೆಪಿ ಕಾರ್ಯಕರ್ತರು ಕಾವಲುಗಾರರ ಅನುಸಾರವಾಗಿ ಕುಪ್ವಾರಾದ ಗುಲ್ಗಾಂನಲ್ಲಿ ಶುಕ್ರವಾರ ರಾತ್ರಿ ದಾಳಿಯನ್ನು ನಕಲಿ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭದ್ರತಾ ಸಿಬ್ಬಂದಿಯನ್ನು ಹೆಚ್ಚಿಸಲು ಕುಪ್ವಾರ ಜಿಲ್ಲೆಯ ಗುಲ್ಗಾಂನಲ್ಲಿ ಶುಕ್ರವಾರ ರಾತ್ರಿ ಬಿಜೆಪಿ ಕಾರ್ಯಕರ್ತರು, ತಮ್ಮ ಸೆಕ್ಯೂರಿಟಿ ಗಾರ್ಡ್ ಗಳೊಂದಿಗೆ ನಕಲಿ ದಾಳಿ ನಡೆಸಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಬಿಜೆಪಿ ಜಿಲ್ಲಾಧ್ಯಕ್ಷ ಮೊಹಮ್ಮದ್ ಶಫಿ ಮಿರ್ ಅವರ ಪುತ್ರ ಮಿರ್, ತೀವ್ರವಾಗಿ ಗಾಯಗೊಂಡಿದ್ದರು. ಪ್ರಾಥಮಿಕ ವಿಚಾರಣೆ ನಂತರ, ಸೆಕ್ಯೂರಿಟಿ ಗಾರ್ಡ್ ಹಾರಿಸಿದ ಆಕಸ್ಮಿಕ ಗುಂಡಿನಿಂದ ಮಿರ್ ಗಾಯಗೊಂಡಿರುವುದು ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆದಾಗ್ಯೂ, ಅನುಮಾನಗಳು ಎದ್ದಿದಾಗ ಹೆಚ್ಚಿನ ಭದ್ರತೆ ಪಡೆಯಲು ನಕಲಿ ದಾಳಿ ನಡೆಸಿದ್ದಾಗಿ ಆರೋಪಿಗಳು ತಪೊಪ್ಪಿಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ. ಎಲ್ಲರನ್ನು ಕುಪ್ವಾರದ ಸ್ಥಳೀಯ ನ್ಯಾಯಾಲಯವೊಂದರ ಮುಂದೆ ಹಾಜರುಪಡಿಸಲಾಗಿತ್ತು. ನ್ಯಾಯಾಲಯ ಅವರಿಗೆ ಏಳು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

SCROLL FOR NEXT