ಉದ್ಯಮಿ ರಾಜ್ ಕುಂದ್ರಾ 
ದೇಶ

ಅಶ್ಲೀಲ ಚಿತ್ರಗಳ ಪ್ರಕರಣ: ರಾಜ್ ಕುಂದ್ರಾಗೆ ಜುಲೈ 23 ರವರೆಗೆ ಪೊಲೀಸ್ ಕಸ್ಟಡಿ

ಅಶ್ಲೀಲ ಚಲನಚಿತ್ರಗಳ ರಚನೆ ಮತ್ತು ಕೆಲ ಆ್ಯಪ್ ಗಳ ಮೂಲಕ ಅವುಗಳ ಪ್ರಸರಣ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಉದ್ಯಮಿ ರಾಜ್ ಕುಂದ್ರಾ ಅವರನ್ನು ಮುಂಬೈ ಸ್ಥಳೀಯ ನ್ಯಾಯಾಲಯವೊಂದು ಮಂಗಳವಾರ ಜುಲೈ 23ರವರೆಗೂ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

ಮುಂಬೈ: ಅಶ್ಲೀಲ ಚಲನಚಿತ್ರಗಳ ರಚನೆ ಮತ್ತು ಕೆಲ ಆ್ಯಪ್ ಗಳ ಮೂಲಕ ಅವುಗಳ ಪ್ರಸರಣ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಉದ್ಯಮಿ ರಾಜ್ ಕುಂದ್ರಾ ಅವರನ್ನು ಮುಂಬೈ ಸ್ಥಳೀಯ ನ್ಯಾಯಾಲಯವೊಂದು ಮಂಗಳವಾರ ಜುಲೈ 23ರವರೆಗೂ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿಯಾಗಿರುವ ಕುಂದ್ರಾ ವಿರುದ್ಧ ವಿವಿಧ ಐಪಿಸಿ ಸೆಕ್ಷನ್ ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಪ್ರಕರಣ ದಾಖಲಾದ ನಂತರ ಸೋಮವಾರ ರಾತ್ರಿ ಮುಂಬೈನ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದರು. 

45 ವರ್ಷದ ಉದ್ಯಮಿ ಅಶ್ಲೀಲ ಚಲನಚಿತ್ರಗಳನ್ನು ತಯಾರಿಸಿ ಮಾರಾಟ ಮಾಡುವ ಮೂಲಕ ಆರ್ಥಿಕವಾಗಿ ಲಾಭ ಗಳಿಸುತ್ತಿದ್ದು, ಅವರ ಹೆಚ್ಚಿನ ವಿಚಾರಣೆಗಾಗಿ ಗರಿಷ್ಠ ಅವಧಿಗೆ ತಮ್ಮ ಕಸ್ಟಡಿಗೆ ನೀಡಬೇಕೆಂದು ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಪೊಲೀಸರು ತಿಳಿಸಿದರು.

ಕುಂದ್ರಾ ಅವರ ಮೊಬೈಲ್ ಫೋನ್ ವಶಕ್ಕೆ ಪಡೆದಿದ್ದು ಅದರ ವಿಷಯಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಬೇಕಾಗಿದೆ ಮತ್ತು ಅವರ ವ್ಯವಹಾರ ಮತ್ತು ವಹಿವಾಟುಗಳನ್ನು ಸಹ ಪರಿಶೀಲಿಸಬೇಕಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕುಂದ್ರಾ ಅವರಲ್ಲದೆ, ಮತ್ತೊಬ್ಬ ಆರೋಪಿ ರಿಯಾನ್ ಥೋರ್ಪ್ ಅವರನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಅವರಿಗೂ ಜುಲೈ 23 ರವರೆಗೆ ಪೊಲೀಸ್ ಕಸ್ಟಡಿಯಲ್ಲಿ ಇರಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel