ಸಿಧು-ಅಮರಿಂದರ್ ಸಿಂಗ್ 
ದೇಶ

ಅಮರಿಂದರ್ ಸಿಂಗ್ ಭೇಟಿಗೆ ಸಿಧು ಸಮಯ ಕೇಳಿಲ್ಲ: ಪಂಜಾಬ್ ಸಿಎಂ ಸಲಹೆಗಾರ

ಪಂಜಾಬ್ ಕಾಂಗ್ರೆಸ್ ನ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ನವಜೋತ್ ಸಿಂಗ್ ಸಿಧು ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರ ಭೇಟಿಗೆ ಸಮಯ ಕೇಳಿಲ್ಲ ಎಂದು ಅಮರಿಂದರ್ ಸಿಂಗ್ ಅವರ ಸಲಹೆಗಾರರು ಮಾಹಿತಿ ನೀಡಿದ್ದಾರೆ. 

ಚಂಡೀಗಢ: ಪಂಜಾಬ್ ಕಾಂಗ್ರೆಸ್ ನ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ನವಜೋತ್ ಸಿಂಗ್ ಸಿಧು ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರ ಭೇಟಿಗೆ ಸಮಯ ಕೇಳಿಲ್ಲ ಎಂದು ಅಮರಿಂದರ್ ಸಿಂಗ್ ಅವರ ಸಲಹೆಗಾರರು ಮಾಹಿತಿ ನೀಡಿದ್ದಾರೆ. 

ಸಿಧು ಅಮರಿಂದರ್ ಸಿಂಗ್ ನಡುವೆ ಭಿನ್ನಾಭಿಪ್ರಾಯದ ಹೊರತಾಗಿಯೂ ಕಾಂಗ್ರೆಸ್ ಹೈಕಮಾಂಡ್ ಸಿಧು ಅವರನ್ನು ಕಾಂಗ್ರೆಸ್ ನ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿತ್ತು. 

ನೂತನ ರಾಜ್ಯಾಧ್ಯಕ್ಷ ನವಜೋತ್ ಸಿಂಗ್ ಸಿಧು ಅವರು ಅಮರಿಂದರ್ ಸಿಂಗ್ ಅವರನ್ನು ಭೇಟಿ ಮಾಡಲು ಸಮಯ ಕೇಳಿದ್ದರ ಬಗ್ಗೆ ವರದಿಗಳು ಪ್ರಕಟವಾಗಿದ್ದವು. 

ಅಮರಿಂದರ್ ಸಿಂಗ್ ಅವರು "ನನ್ನ ವಿರುದ್ಧ ಸಿಧು ಮಾಡಿದ್ದ ಅವಹೇಳನಕಾರಿ ಟ್ವೀಟ್ ಗಳಿಗೆ ಕ್ಷಮೆ  ಕೋರುವವರೆಗೂ ಭೇಟಿ ಸಾಧ್ಯವಿಲ್ಲ" ಎಂದು ಹೇಳಿದ್ದರು. ಮುಖ್ಯಮಂತ್ರಿಗಳ ಈ ನಿಲುವಿನಲ್ಲಿ ಯಾವುದೇ ಬದಲಾವಣೆಗಳೂ ಇಲ್ಲ ಎಂದು ಸಿಎಂ ಸಲಹೆಗಾರ ರವೀನ್ ತುಕ್ರಾಲ್ ಹೇಳಿದ್ದಾರೆ. 

ತಮ್ಮ ನಿಲುವನ್ನು ಎಐಸಿಸಿಪ್ರಧಾನ ಕಾರ್ಯದರ್ಶಿ ಹರೀಶ್ ರಾವತ್ ಅವರಿಗೂ ಅಮರಿಂದರ್ ಸಿಂಗ್ ವಿವರಿಸಿದ್ದು, ಕ್ಷಮೆ ಕೋರುವವರೆಗೂ ಸಿಧು ಅವರನ್ನು ಭೇಟಿ ಮಾಡುವುದಿಲ್ಲ ಎಂಬ ಸಂದೇಶ ರವಾನೆ ಮಾಡಿದ್ದಾರೆ. ಇನ್ನು ಸಿಧು ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ ಬಗ್ಗೆ ಸಿಎಂ ಅಮರಿಂದರ್ ಸಿಂಗ್ ಈವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT