ಕೇಂದ್ರದ ತಪ್ಪು ನಿರ್ಧಾರಗಳಿಂದ ಕೋವಿಡ್ 2ನೇ ಅಲೆಯಲ್ಲಿ 50 ಲಕ್ಷ ಭಾರತೀಯರ ಸಾವು: ರಾಹುಲ್ ಗಾಂಧಿ
ಕೋವಿಡ್ ಸಾಂಕ್ರಾಮಿಕ ನಿರ್ವಹಣೆಯ ವಿಷಯಾವಾಗಿ ಕೇಂದ್ರ ಸರ್ಕಾರದ ವಿರುದ್ಧ ಮತ್ತೊಮ್ಮೆ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ತಪ್ಪು ನಿರ್ಧಾರಗಳಿಂದ 50 ಲಕ್ಷ ಭಾರತೀಯರು ಜೀವ ಕಳೆದುಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.
ಕೋವಿಡ್ ಸಾಂಕ್ರಾಮಿಕ ನಿರ್ವಹಣೆಯ ವಿಷಯಾವಾಗಿ ಕೇಂದ್ರ ಸರ್ಕಾರದ ವಿರುದ್ಧ ಮತ್ತೊಮ್ಮೆ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ತಪ್ಪು ನಿರ್ಧಾರಗಳಿಂದ 50 ಲಕ್ಷ ಭಾರತೀಯರು ಜೀವ ಕಳೆದುಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.
ಕೇಂದ್ರ ಸರ್ಕಾರದ ತಪ್ಪು ನಿರ್ಧಾರಗಳಿಂದ ಕೋವಿಡ್-19 ಎರಡನೇ ಅಲೆಯಲ್ಲಿ 50 ಲಕ್ಷ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಭಾರತ ಸರ್ಕಾರ ಬಿಡುಗಡೆ ಮಾಡಿರುವ ಅಧಿಕೃತ ಅಂಕಿ-ಅಂಶಗಳ ಪ್ರಕಾರ ಈ ವರೆಗೂ 4.18 ಲಕ್ಷ ಮಂದಿ ಸಾವನ್ನಪ್ಪಿದ್ದಾರೆ.
ಜಾಗತಿಕ ಅಭಿವೃದ್ಧಿಯ ಕೇಂದ್ರದ ಅಧ್ಯಯನ ವರದಿಯನ್ನು ಹಂಚಿಕೊಂಡಿರುವ ರಾಹುಲ್ ಗಾಂಧಿ, ರೈತರ ಹೋರಾಟವನ್ನೂ ಉಲ್ಲೇಖಿಸಿದ್ದು, "ರೈತರ ಪ್ರತಿಭಟನೆಯಲ್ಲಿ ಜೀವ ಕಳೆದುಕೊಂಡವರಿಗೆ ಕೇಂದ್ರ ಸರ್ಕಾರ ಪರಿಹಾರ ನೀಡುವುದಕ್ಕೂ ನಿರಾಕರಿಸಿದೆ. ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡಿರುವವರ ಕಣ್ಣೀರಲ್ಲಿ ಎಲ್ಲವೂ ದಾಖಲಾಗಿದೆ" ಎಂದು ಹೇಳಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.