ಸಾಂದರ್ಭಿಕ ಚಿತ್ರ 
ದೇಶ

ಕೋವಿಡ್-19: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 41,383 ಹೊಸ ಕೇಸು ಪತ್ತೆ, 507 ಸಾವು

ಭಾರತದಲ್ಲಿ ಕೊರೋನಾ 2ನೇ ಅಲೆಯ ನಂತರ ಮೊನ್ನೆಗಿಂತ ನಿನ್ನೆ ಕೊಂಚ ಇಳಿಕೆಯಾಗಿದೆ. ಇಂದು ಬೆಳಗ್ಗೆ 8 ಗಂಟೆಗೆ ಹೊತ್ತಿಗೆ ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 41,383 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, 507 ಜನ ಬಲಿಯಾಗಿದ್ದಾರೆ.

ನವದೆಹಲಿ: ಭಾರತದಲ್ಲಿ ಕೊರೋನಾ 2ನೇ ಅಲೆಯ ನಂತರ ಮೊನ್ನೆಗಿಂತ ನಿನ್ನೆ ಕೊಂಚ ಇಳಿಕೆಯಾಗಿದೆ. ಇಂದು ಬೆಳಗ್ಗೆ 8 ಗಂಟೆಗೆ ಹೊತ್ತಿಗೆ ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 41,383 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, 507 ಜನ ಬಲಿಯಾಗಿದ್ದಾರೆ.

ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3 ಕೋಟಿಯ 12 ಲಕ್ಷದ 57 ಸಾವಿರದ 720ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4 ಲಕ್ಷದ 18 ಸಾವಿರದ 987ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಗುಣಮುಖರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಸಕ್ರಿಯ ಸೋಂಕಿತರ ಸಂಖ್ಯೆ ಇಂದು 4 ಲಕ್ಷದ 09 ಸಾವಿರದ 394ರಷ್ಟಾಗಿದೆ. ಕಳೆದ 24 ಗಂಟೆಗಳಲ್ಲಿ 38 ಸಾವಿರದ 652 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3 ಕೋಟಿಯ 04 ಲಕ್ಷದ 29 ಸಾವಿರದ 339ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 17 ಲಕ್ಷದ 18 ಸಾವಿರದ 439 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 45 ಕೋಟಿಯ 09 ಲಕ್ಷದ 11 ಸಾವಿರದ 712 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ದೇಶಾದ್ಯಂತ ಕೋವಿಡ್-19 ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 41 ಕೋಟಿಯ 78 ಲಕ್ಷ ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಥಳಿತದಿಂದ ವಿದ್ಯಾರ್ಥಿನಿಗೆ ಕಿವುಡು': ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯದ ಬಗ್ಗೆ ಕೇಂದ್ರ, ದೆಹಲಿ ಪೊಲೀಸ್ ವಿರುದ್ಧ ರಾಹುಲ್ ಗಾಂಧಿ ಆರೋಪ

ಗಂಡನ ಕೊಂದು ನೀಲಿ ಡ್ರಮ್ ನಲ್ಲಿ ಮುಚ್ಚಿಟ್ಟ ಕೇಸ್: ಪತ್ನಿ ಮುಸ್ಕಾನ್, ಪ್ರಿಯಕರ ಸಾಹಿಲ್ ಗೆ ಮರಣದಂಡನೆ ಶಿಕ್ಷೆ!

‘ಯುವಕರನ್ನು ಜೈಲಿಗೆ ಕಳುಹಿಸುವುದು ಹೇಡಿತನ’; ಸಿಜೆಪಿ ಪ್ರತಿಭಟನೆಗೆ ರಾಹುಲ್‌ ಗಾಂಧಿ ಬೆಂಬಲ

ವಿಮಾನ ಹೈಜಾಕ್ ಬೆದರಿಕೆ ಎಚ್ಚರಿಕೆ: ಫ್ರಾಂಕ್‌ಫರ್ಟ್‌- ದೆಹಲಿ Air India ಜೈಪುರದಲ್ಲಿ ಎಮೆರ್ಜೆನ್ಸಿ ಲ್ಯಾಂಡಿಂಗ್

ಹಲವು ರಾಜ್ಯಗಳಲ್ಲಿ ಭಾರೀ ಮಳೆ ಮುನ್ಸೂಚನೆ: ಕರ್ನಾಟಕಕ್ಕೂ ಗುಡುಗು, ಮಿಂಚಿನ ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ!