ನೀಟ್ ಪರೀಕ್ಷೆ (ಸಾಂಕೇತಿಕ ಚಿತ್ರ) 
ದೇಶ

ಎನ್ಇಇಟಿ, ಇತರ ಸಾಮಾನ್ಯ ಪ್ರವೇಶ ಪರೀಕ್ಷೆಗಳನ್ನು ರದ್ದುಗೊಳಿಸುವ ಪ್ರಸ್ತಾವವಿಲ್ಲ: ಲೋಕಸಭೆಗೆ ಸರ್ಕಾರದ ಮಾಹಿತಿ 

ಎನ್ಇಇಟಿ ಮುಂತಾದ ಸಾಮಾನ್ಯ ಪ್ರವೇಶ ಪರೀಕ್ಷೆಗಳನ್ನು ರದ್ದುಗೊಳಿಸುವ ಪ್ರಸ್ತಾವ ಸರ್ಕಾರದ ಮುಂದೆ ಇಲ್ಲ ಎಂದು ಆರೋಗ್ಯ ಇಲಾಖೆಯ ರಾಜ್ಯ ಸಚಿವರಾದ ಭಾರತಿ ಪ್ರವೀಣ್ ಪವಾರ್ ಲೋಕಸಭೆಗೆ ಮಾಹಿತಿ ನೀಡಿದ್ದಾರೆ. 

ನವದೆಹಲಿ: ಎನ್ಇಇಟಿ ಮುಂತಾದ ಸಾಮಾನ್ಯ ಪ್ರವೇಶ ಪರೀಕ್ಷೆಗಳನ್ನು ರದ್ದುಗೊಳಿಸುವ ಪ್ರಸ್ತಾವ ಸರ್ಕಾರದ ಮುಂದೆ ಇಲ್ಲ ಎಂದು ಆರೋಗ್ಯ ಇಲಾಖೆಯ ರಾಜ್ಯ ಸಚಿವರಾದ ಭಾರತಿ ಪ್ರವೀಣ್ ಪವಾರ್ ಲೋಕಸಭೆಗೆ ಮಾಹಿತಿ ನೀಡಿದ್ದಾರೆ. 

2021 ನೇ ಸಾಲಿನ ಸ್ನಾತಕೋತ್ತರ ಪದವಿಗೆ ಎನ್ಇಇಟಿ ಹಾಗೂ ಪದವಿಪೂರ್ವ ಎನ್ಇಇಟಿ ಪರೀಕ್ಷೆಗಳು ಸೆಪ್ಟೆಂಬರ್ 11 ಹಾಗೂ 12 ರಂದು ಅನುಕ್ರಮವಾಗಿ ನಡೆಯಲಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ. ಕೋವಿಡ್-19 ಗೆ ಸೂಕ್ತ ನಡಾವಳಿ ಹಾಗೂ ನಿರ್ದಿಷ್ಟ ಶಿಷ್ಟಾಚಾರಗಳನ್ನು ಪಾಲನೆ ಮಾಡಿ ಪರೀಕ್ಷೆ ನಡೆಸಲಾಗುತ್ತದೆ ಎಂದು ಪವಾರ್ ಮಾಹಿತಿ ನೀಡಿದ್ದಾರೆ. 

ಅಭ್ಯರ್ಥಿಗಳು ಹಾಗೂ ಪರೀಕ್ಷಾ ಸಿಬ್ಬಂದಿಗಳಿಗೆ ರಕ್ಷಣಾತ್ಮಕ ಕ್ರಮಗಳನ್ನೂ ಕೈಗೊಳ್ಳಲಾಗಿದೆ. ದಟ್ಟಣೆಯನ್ನು ತಪ್ಪಿಸುವುದಕ್ಕಾಗಿ ಪರೀಕ್ಷಾ ಕೇಂದ್ರಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದೆ. ಪರೀಕ್ಷಾ ಕೇಂದ್ರಗಳಿಗೆ ತೆರಳಲು ನೀಡಲಾಗುವ ಕಾರ್ಡ್ ಗಳಲ್ಲಿ ಕೋವಿಡ್ ಇ ಪಾಸ್ ಗಳನ್ನೂ ನೀಡಲಾಗಿರುತ್ತದೆ ಈ ಮೂಲಕ ಅಭ್ಯರ್ಥಿಗಳ ಸಂಚಾರ ಸುಗಮವಾಗಲಿದೆ ಎಂದು ಸಚಿವರು ಲೋಕಸಭೆಗೆ ಮಾಹಿತಿ ನೀಡಿದ್ದಾರೆ. 

ಪ್ರವೇಶ ದ್ವಾರದಲ್ಲಿ ಅಭ್ಯರ್ಥಿಗಳಿಗೆ ತಾಪಮಾನ ಪರೀಕ್ಷೆ ಇರಲಿದ್ದು, ಸಾಮಾನ್ಯ ತಾಪಮಾನಕ್ಕಿಂತ ಹೆಚ್ಚು ತಾಪಮಾನ ಹೊಂದಿದ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಐಸೊಲೇಷನ್ ಲ್ಯಾಬ್ ನಲ್ಲಿ ಪರೀಕ್ಷೆ ಬರೆಯುವುದಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಮಾಸ್ಕ್ ಕಡ್ಡಾಯದ ಜೊತೆಗೆ ಶೀಲ್ಡ್, ಹ್ಯಾಂಡ್ ಸ್ಯಾನಿಟೈಸರ್ ಗಳನ್ನೂ ಅಭ್ಯರ್ಥಿಗಳಿಗೆ ಒದಗಿಸಲಾಗುತ್ತದೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CJP protest: ಮಮತಾ ಬ್ಯಾನರ್ಜಿ, ನೇಹಾ ಬೋರಾ, ಯೋಗೇಂದ್ರ ಯಾದವ್ ವಶಕ್ಕೆ ಪಡೆದ ಪೊಲೀಸರು

'ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ಲು..' 'ವಿಡಿಯೋ ಕೋರ್ಟ್ ಗೆ ಕೊಟ್ಟಿದ್ದೆ'; ಐಶ್ವರ್ಯಾ ರೈ ಬಗ್ಗೆ ಲಾಲು ಪುತ್ರ ಸ್ಫೋಟಕ ಹೇಳಿಕೆ-Video

ಮತಗಳ್ಳತನದ ಆರೋಪದ ಬಗ್ಗೆ ಮೌನಕ್ಕೆ ಯಾಕೆ? ಮೋಹನ್ ಭಾಗವತ್ ಜೀ ಈಗ ಎಲ್ಲಿದ್ದಾರೆ?: ಪ್ರಿಯಾಂಕ್ ಖರ್ಗೆ ಪ್ರಶ್ನೆ

'ದೆಹಲಿ ಪೊಲೀಸರು ಟಾಸ್ ಗೆದ್ದು, ಮೊದಲು ಬ್ಯಾಟಿಂಗ್ ಮಾಡಲಿ': ಪಾಕಿಸ್ತಾನ ಮಾಜಿ ಕ್ರಿಕೆಟಿಗನ ಪೋಸ್ಟ್ ವೈರಲ್​!

ಹೊಸ ಇನ್ನಿಂಗ್ಸ್ ಆರಂಭಿಸಿದ RCB ಮಾಜಿ ಆಟಗಾರ; ತಮ್ಮ ಬಹುಕಾಲದ ಗೆಳತಿ ಕೈ ಹಿಡಿದ ಸ್ಫೋಟಕ ಬ್ಯಾಟರ್!