ದೇಶ

12 ವಿಶ್ವವಿದ್ಯಾನಿಲಯಗಳಿಗೆ ಕುಲಪತಿಗಳ ನೇಮಕಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅನುಮತಿ

Shilpa D

ನವದೆಹಲಿ: ದೇಶದ 12 ವಿಶ್ವವಿದ್ಯಾನಿಲಯಗಳಿಗೆ ಉಪ ಕುಲಪತಿಗಳ ನೇಮಕಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅನುಮೋದನೆ ನೀಡಿದ್ದಾರೆ.

12 ವಿವಿಗಳಿಗೆ ಕುಲಪತಿಗಳ ನೇಮಕಕ್ಕೆ ರಾಷ್ಟ್ರಪತಿಗಳು ಅನಮೋದನೆ ನೀಡಿದ್ದಾರೆಂದು ಶಿಕ್ಷಣ ಇಲಾಖೆ ಸಚಿವಾಲಯ ತಿಳಿಸಿದೆ. ಹರಿಯಾಣ ಕೇಂದ್ರ ವಿಶ್ವವಿದ್ಯಾಲಯ, ಹಿಮಾಚಲ ಪ್ರದೇಶ, ಜಮ್ಮು, ಜಾರ್ಖಂಡ್, ಕರ್ನಾಟಕ, ತಮಿಳುನಾಡು ಮತ್ತು ಹೈದರಾಬಾದ್ ವಿಶ್ವ ವಿದ್ಯಾನಿಲಯಗಳು ಸೇರಿವೆ.

ದಕ್ಷಿಣ ಬಿಹಾರದ ಕೇಂದ್ರ ವಿಶ್ವವಿದ್ಯಾಲಯ (ಗಯಾ), ಮಣಿಪುರ ವಿಶ್ವವಿದ್ಯಾಲಯ, ಮೌಲಾನಾ ಆಜಾದ್ ರಾಷ್ಟ್ರೀಯ ಉರ್ದು ವಿಶ್ವವಿದ್ಯಾಲಯ (ಮಾನು), ಈಶಾನ್ಯ ಹಿಲ್ ವಿಶ್ವವಿದ್ಯಾಲಯ (ಎನ್‌ಇಎಚ್‌ಯು) ಮತ್ತು ಬಿಲಾಸ್ಪುರದ ಗುರು ಘಾಸಿದಾಸ್ ವಿಶ್ವವಿದ್ಯಾಲಯಗಳಿಗೆ ಹೊಸ ವಿಸಿಗಳನ್ನು ನೇಮಕ ಮಾಡಿರುವ ವಿಶ್ವವಿದ್ಯಾಲಯಗಳಲ್ಲಿ ಸೇರಿವೆ.

ಕೇಂದ್ರೀಯ ವಿಶ್ವವಿದ್ಯಾಲಯಗಳಲ್ಲಿ ಒಟ್ಟು 22 ಉಪಕುಲಪತಿಗಳ ಹುದ್ದೆಗಳು ಖಾಲಿ ಇವೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಗುರುವಾರ ರಾಜ್ಯಸಭೆಗೆ ಮಾಹಿತಿ ನೀಡಿದ್ದು, ಈ ಪೈಕಿ 12 ಹುದ್ದೆಗಳಿಗೆ ನೇಮಕಾತಿಗಳನ್ನು ಈಗಾಗಲೇ ಅಂತಿಮಗೊಳಿಸಲಾಗಿದೆ.

SCROLL FOR NEXT