ದೇಶ

ಅಶಿಸ್ತಿನ ವರ್ತನೆ: ಟಿಎಂಸಿ ಸಂಸದ ಸಂತನು ಸೇನ್ ಸಂಸತ್ ಮುಂಗಾರು ಅಧಿವೇಶನದಿಂದ ಅಮಾನತು

Manjula VN

ನವದೆಹಲಿ: ರಾಜ್ಯಸಭೆಯಲ್ಲಿ ಕೇಂದ್ರ ಸಚಿವ ಅಶ್ಚಿನಿ ವೈಷ್ಣವ್ ಅವರೊಂದಿಗೆ ಅಶಿಸ್ತಿನ ವರ್ತನೆ ತೋರಿದ ಹಿನ್ನೆಲೆಯಲ್ಲಿ ರಾಜ್ಯಸಭೆಯ ತೃಣಮೂಲ ಕಾಂಗ್ರೆಸ್ ಪಕ್ಷದ ಸದಸ್ಯ ಸಂತನು ಸೇನ್ ಅವರನ್ನು ಸಂಸತ್ತಿನ ಮುಂಗಾರು ಅಧಿವೇಶನದ ಉಳಿದ ಅವಧಿಗೆ ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿದೆ.

ಗುರುವಾರ ಪ್ರತಿಪಕ್ಷದ ಸಂಸದರು ಪೆಗಾಸಸ್ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲಾಹಲವನ್ನು ಸೃಷ್ಟಿಸಿತ್ತು. 

ಈ ಸಂದರ್ಭದಲ್ಲಿ ರಾಜ್ಯಸಭೆಯಲ್ಲಿ ಐಟಿ ಸಚಿವ ಅಶ್ವಿನಿ ವೈಷ್ಣವ್ ಅವರು ಸ್ನೂಪಿಂಗ್ ವಿಷಯದ ಬಗ್ಗೆ ಹೇಳಿಕೆ ನೀಡಲು ಮುಂದಾಗಿದ್ದರು. ಆಗ ಸೇನ್ ಅವರು ವೈಷ್ಣವ್ ಅವರ ಕೈಯಲ್ಲಿದ್ದ ಹೇಳಿಕೆಯ ಕಾಗದ ಗಳನ್ನು ಕಸಿದುಕೊಂಡು ಹರಿದು ಹಾಕಿದ್ದರು.

ಸಂತನು ಸೇನ್ ಅವರು ಅಶಿಸ್ತಿನ ವರ್ತನೆ ಪ್ರದರ್ಶಿಸಿದ ಹಿನ್ನೆಲೆಯಲ್ಲಿ ಆಗಸ್ಟ್ 13ರವರೆಗೂ ನಡೆಯಲಿರುವ ಮುಂಗಾರು ಅಧಿವೇಶನದಿಂದ ದೂರ ಇರುವಂತೆ ರಾಜ್ಯಸಭೆ ಸಭಾಪತಿ ವೆಂಕಯ್ಯ ನಾಯ್ಡು ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ. 

SCROLL FOR NEXT