ನಿರ್ಮಲಾ ಸೀತಾರಾಮನ್ 
ದೇಶ

ಆರ್ಥಿಕ ಬಿಕ್ಕಟ್ಟಿನಿಂದ ಪಾರಾಗಲು ಕರೆನ್ಸಿ ನೋಟುಗಳ ಮುದ್ರಣದ ಯೋಜನೆ ಇಲ್ಲ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

ಕೋವಿಡ್-19 ಸಾಂಕ್ರಾಮಿಕದಿಂದ ಉಂಟಾಗಿರುವ ಆರ್ಥಿಕ ಬಿಕ್ಕಟ್ಟಿನ ಪರಿಸ್ಥಿತಿಯಿಂದ ಹೊರಬರಲು ಕರೆನ್ಸಿ ನೋಟುಗಳ ಮುದ್ರಣ ಯೋಜನೆ ಪ್ರಸ್ತಾವನೆ ಇಲ್ಲ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಗೆ ತಿಳಿಸಿದ್ದಾರೆ. 

ನವದೆಹಲಿ: ಕೋವಿಡ್-19 ಸಾಂಕ್ರಾಮಿಕದಿಂದ ಉಂಟಾಗಿರುವ ಆರ್ಥಿಕ ಬಿಕ್ಕಟ್ಟಿನ ಪರಿಸ್ಥಿತಿಯಿಂದ ಹೊರಬರಲು ಕರೆನ್ಸಿ ನೋಟುಗಳ ಮುದ್ರಣ ಯೋಜನೆ ಪ್ರಸ್ತಾವನೆ ಇಲ್ಲ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಗೆ ತಿಳಿಸಿದ್ದಾರೆ. 

ಕರೆನ್ಸಿ ನೋಟು ಮುದ್ರಣದ ಕುರಿತ ಪ್ರಶ್ನೆಗೆ ನಿರ್ಮಲಾ ಸೀತಾರಾಮನ್ ಉತ್ತರಿಸುತ್ತಿದ್ದರು. ಕೋವಿಡ್-19 ನಿಂದ ಉಂಟಾಗಿರುವ ಉದ್ಯೋಗ ನಷ್ಟವನ್ನು ತಪ್ಪಿಸಲು ಹಾಗೂ ಆರ್ಥಿಕತೆಗೆ ಚೇತರಿಕೆ ನೀಡಲು ಕರೆನ್ಸಿ ನೋಟುಗಳ ಮುದ್ರಣದ ಆಯ್ಕೆಯನ್ನು ಪರಿಗಣಿಸುವಂತೆ ಹಲವು ಅರ್ಥಶಾಸ್ತ್ರಜ್ಞರು ಮತ್ತು ತಜ್ಞರು ಸಲಹೆ ನೀಡಿದ್ದರು. 

ಭಾರತದ ರಿಯಲ್ ಜಿಡಿಪಿ 2020-21 ರ ಅವಧಿಯಲ್ಲಿ ಶೇ.7.3 ರಷ್ಟು ಕುಸಿತ ಕಂಡಿರುವ ಅಂದಾಜಿದೆ ಎಂದು ಲೋಕಸಭೆಗೆ ವಿತ್ತ ಸಚಿವರು ಲಿಖಿತ ಉತ್ತರ ನೀಡಿದ್ದಾರೆ. ಈ ಕುಸಿತ ಸಾಂಕ್ರಾಮಿಕದ ಪರಿಣಾಮ ಹಾಗೂ ಸಾಂಕ್ರಾಮಿಕವನ್ನು ತಡೆಗಟ್ಟುವುದಕ್ಕೆ ಕೈಗೊಂಡ ಕ್ರಮಗಳನ್ನು ಸೂಚಿಸುತ್ತವೆ ಎಂದೂ ಸಚಿವರು ಹೇಳಿದ್ದಾರೆ. 

"ಆದರೆ ಭಾರತದ ಆರ್ಥಿಕತೆಯ ಮೂಲಭೂತ ಅಂಶಗಳು ಬಲಿಷ್ಠವಾಗಿದೆ. ಆತ್ಮ ನಿರ್ಭರ ಭಾರತ ಮಿಷನ್ 2020-21 ರ ಉತ್ತರಾರ್ಧದಲ್ಲಿ ಆರ್ಥಿಕತೆಯನ್ನು ಚೇತರಿಕೆಯ ಹಾದಿಯಲ್ಲಿಟ್ಟಿದೆ." ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. 

ಸಾಂಕ್ರಾಮಿಕದ ಪರಿಣಾಮವನ್ನು ತಡೆಗಟ್ಟಲು, 2020-21 ರ ಅವಧಿಯಲ್ಲಿ ಆರ್ಥಿಕ ಬೆಳವಣಿಗೆಗೆ ಪುನರುಜ್ಜೀವನ ನೀಡುವುದಕ್ಕಾಗಿ ಹಾಗೂ ಉದ್ಯೋಗಾವಕಾಶಗಳ ಹೆಚ್ಚಳಕ್ಕೆ ಸರ್ಕಾರ 29.87 ಲಕ್ಷ ಕೋಟಿಯ ಸಮಗ್ರ ಪ್ಯಾಕೇಜ್ ನ್ನು ಘೋಷಿಸಿತ್ತು ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT