ಅರವಿಂದ್ ಕೇಜ್ರಿವಾಲ್ 
ದೇಶ

ಪದ್ಮ ಪ್ರಶಸ್ತಿಗೆ ವೈದ್ಯರು, ಆರೋಗ್ಯ ಕಾರ್ಯಕರ್ತರ ಹೆಸರು ಶಿಫಾರಸು: ಸಿಎಂ ಕೇಜ್ರಿವಾಲ್

ಈ ವರ್ಷದ ಪದ್ಮ ಪ್ರಶಸ್ತಿಗಳಿಗಾಗಿ ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರ ಹೆಸರನ್ನು ಶಿಫಾರಸು ಮಾಡಲು ದೆಹಲಿ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮಂಗಳವಾರ ಹೇಳಿದ್ದಾರೆ.

ನವದೆಹಲಿ: ಈ ವರ್ಷದ ಪದ್ಮ ಪ್ರಶಸ್ತಿಗಳಿಗಾಗಿ ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರ ಹೆಸರನ್ನು ಶಿಫಾರಸು ಮಾಡಲು ದೆಹಲಿ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮಂಗಳವಾರ ಹೇಳಿದ್ದಾರೆ.

ಇಂದು ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಕೇಜ್ರಿವಾಲ್, "ಈ ವರ್ಷದ ಪದ್ಮ ಪ್ರಶಸ್ತಿಗಳಿಗೆ ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರ ಹೆಸರನ್ನು ಕಳುಹಿಸಲು ದೆಹಲಿ ಸರ್ಕಾರ ನಿರ್ಧರಿಸಿದೆ. ನಾವು ಅವರಿಗೆ ಕೃತಜ್ಞರಾಗಿರುತ್ತೇವೆ ಮತ್ತು ನಾವು ಅವರನ್ನು ಗೌರವಿಸಲು ಬಯಸುತ್ತೇವೆ" ಎಂದು ಹೇಳಿದರು.

"ಸಾರ್ವಜನಿಕರು ವೈದ್ಯರ ಮತ್ತು ಆರೋಗ್ಯ ಕಾರ್ಯಕರ್ತರ ಹೆಸರುಗಳನ್ನು ನಮಗೆ ತಿಳಿಸುತ್ತಾರೆ. ಜನರು ಆಗಸ್ಟ್ 15 ರೊಳಗೆ ತಮ್ಮ ಮೇಲ್‌ಗಳನ್ನು padmaawards.delhi@gmail.com ಗೆ ಕಳುಹಿಸಬಹುದು" ಎಂದು ದೆಹಲಿ ಮುಖ್ಯಮಂತ್ರಿ ಹೇಳಿದರು.

ಈ ಸಂಬಂಧ ದೆಹಲಿ ಸರ್ಕಾರವು ಸ್ಕ್ರೀನಿಂಗ್ ಕಮಿಟಿಯನ್ನು ರಚಿಸಿದ್ದು, ಮುಂದಿನ 15 ದಿನಗಳಲ್ಲಿ ಈ ಹೆಸರುಗಳನ್ನು ಪರಿಶೀಲಿಸುತ್ತದೆ ಮತ್ತು ದೆಹಲಿ ಸರ್ಕಾರಕ್ಕೆ ಶಿಫಾರಸು ಮಾಡುತ್ತದೆ. ಅಂತಿಮಗೊಂಡ ಹೆಸರುಗಳನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗುವುದು ಎಂದು ಅರವಿಂದ್ ಕೇಜ್ರಿವಾಲ್ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

ಮುಖ್ಯಮಂತ್ರಿ ಬದಲಾವಣೆ: ದೆಹಲಿಯಲ್ಲಿ ಕಾಂಗ್ರೆಸ್‌ ಮ್ಯಾರಥಾನ್‌ ಮೀಟಿಂಗ್ ಬಳಿಕ ಕೆ.ಸಿ ವೇಣುಗೋಪಾಲ್ ಹೇಳಿದ್ದೇನು? Video

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

ಬಕ್ರೀದ್ ಮೇಕೆ ವಿಷಯವಾಗಿ ಮುಂಬೈ ಸೊಸೈಟಿಯಲ್ಲಿ ಭಾರಿ ವಿವಾದ; VHP ಕಾರ್ಯಕರ್ತರ ಮೇಲೆ ಬ್ಲೇಡ್ ನಿಂದ ಹಲ್ಲೆ!

SCROLL FOR NEXT