ದೇಶ

ಅಸ್ಸಾಂ–ಮಿಜೋರಾಂ ಗಡಿ ಹಿಂಸಾಚಾರ: ಕೇಂದ್ರ ಗೃಹ ಸಚಿವ ಅಮಿತ್‌ ಶಾ ವಿರುದ್ಧ ರಾಹುಲ್‌ ವಾಗ್ದಾಳಿ

Manjula VN

ನವದೆಹಲಿ: ಅಸ್ಸಾಂ ಮತ್ತು ಮಿಜೋರಾಂ ನಡುವಿನ ಗಡಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್‌ ವಾಗ್ದಾಳಿ ಮಂಗಳವಾರ ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಜನರಲ್ಲಿ ದ್ವೇಷ ಮತ್ತು ಅಪನಂಬಿಕೆ ಬಿತ್ತುವ ಮೂಲಕ ದೇಶವನ್ನು ‘ವಿಫಲ’ಗೊಳಿಸಿದ್ದು ಈಗ ಇದರ ‍ಭಯಾನಕ ಪರಿಣಾಮಗಳನ್ನು ದೇಶ ಎದುರಿಸುತ್ತಿದೆ ಎಂದು ಆರೋಪ ಮಾಡಿದ್ದಾರೆ. 

‘ಅಸ್ಸಾಂ ಮತ್ತು ಮಿಜೋರಾಂ ನಡುವಿನ ಗಡಿ ಸಂಘರ್ಷದ ವೇಳೆ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಅಸ್ಸಾಂನ ಕನಿಷ್ಠ 5 ಪೊಲೀಸರು ಮತ‍ಪಟ್ಟಿದ್ದಾರೆ. ಅಲ್ಲದೆ, ಘಟನೆಯಲ್ಲಿ ಪೊಲೀಸ್‌ ವರಿಷ್ಠಾಧಿಕಾರಿ ಸೇರಿದಂತೆ 60ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ’ ಎಂದು ತಿಳಿದುಬಂದಿದೆ. 

SCROLL FOR NEXT