ದೇಶ

ಪ್ರತಿಪಕ್ಷಗಳ ವರ್ತನೆ ಬಹಿರಂಗಪಡಿಸಿ: ಬಿಜೆಪಿ ಸಂಸದರಿಗೆ ಪ್ರಧಾನಿ ಮೋದಿ ಸೂಚನೆ

Lingaraj Badiger

ನವದೆಹಲಿ: ಸಂಸತ್ ಚಳಿಗಾಲದ ಅಧಿವೇಶನಕ್ಕೆ ಅಡ್ಡಿಪಡಿಸುತ್ತಿರುವ ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಪ್ರತಿಪಕ್ಷ ಸದಸ್ಯರ ವರ್ತನೆಯನ್ನು ಸಾರ್ವಜನಿಕವಾಗಿ ಮತ್ತು ಮಾಧ್ಯಮಗಳ ಮೂಲಕ ಬಹಿರಂಗ ಪಡಿಸಬೇಕು ಎಂದು ಬಿಜೆಪಿ ಸಂಸದರಿಗೆ ಸೂಚನೆ ನೀಡಿದ್ದಾರೆ. 

ಈ ತಿಂಗಳ ೧೯ ರಿಂದ ಸಂಸತ್ತಿನ ಚಳಿಗಾಲ ಅಧಿವೇಶನ ಆರಂಭವಾಗಿದ್ದು, ಪೆಗಾಸಸ್ ಫೋನ್ ಕದ್ದಾಲಿಕೆ, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಕೃಷಿ ಕಾಯ್ದೆಗಳು ಸೇರಿದಂತೆ ಇನ್ನಿತರ ವಿಷಯಗಳನ್ನು ಪ್ರಸ್ತಾಪಿಸಿ ಸಂಸತ್ತಿನ ಉಭಯ ಸದನಗಳಲ್ಲಿ ಕೋಲಾಹಲ ಎಬ್ಬಿಸುತ್ತಿರುವ ಪ್ರತಿಪಕ್ಷಗಳನ್ನು ಪ್ರಧಾನಿ ಮೋದಿ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಸದನದ ಅಮೂಲ್ಯ ಸಮಯವನ್ನು ಹಾಳುಮಾಡುವುದು ಕಾಂಗ್ರೆಸ್ ಉದ್ದೇಶವಾಗಿದೆ. ಹೀಗಾಗಿ ಸದನದಲ್ಲಿ ಸುಗಮ ಕಲಾಪಕ್ಕೆ
ಅವಕಾಶ ಕೊಟ್ಟಿಲ್ಲ ಎಂದು ದೂರಿದರು. 

ದೇಶದಲ್ಲಿನ ಕೋವಿಡ್-೧೯ ಪರಿಸ್ಥಿತಿ ಕುರಿತು ಪರಾಮರ್ಶೆ ನಡೆಸಲು ಕರೆಯಲಾಗಿದ್ದ ಸರ್ವ ಪಕ್ಷಗಳ ಸಭೆಯನ್ನು ಕಾಂಗ್ರೆಸ್ ಬಹಿಷ್ಕರಿಸಿದೆ ಎಂದು ಆರೋಪಿಸಿದರು. ಸದನದಲ್ಲಿ ನೂತನ ಸಚಿವರನ್ನು ಪರಿಚಯ ಮಾಡಿಕೊಂಡ ಸಂದರ್ಭದಲ್ಲಿ ಕಾಂಗ್ರೆಸ್ ಮತ್ತು ಇತರ ಸದಸ್ಯರು ಅಡ್ಡಿಪಡಿಸಿದ್ದಾರೆ, ಇದು ದೇಶದ ಜನರು ಮತ್ತು ಮಾಧ್ಯಮಗಳ ಮಂದೆ ಪ್ರತಿಪಕ್ಷಗಳ ವರ್ತನೆ ಬಹಿರಂಗವಾಗಿದೆ ಎಂದು ಕಿಡಿಕಾರಿದರು.

SCROLL FOR NEXT