ಶಿಲ್ಪಾ ಶೆಟ್ಟಿ ಮತ್ತು ರಾಜ್ ಕುಂದ್ರಾ 
ದೇಶ

ಅಶ್ಲೀಲ ಚಿತ್ರ ಪ್ರಕರಣ: ರಾಜ್ ಕುಂದ್ರಾಗೆ ಮತ್ತೆ 14 ದಿನಗಳ ನ್ಯಾಯಾಂಗ ಬಂಧನ

ಅಶ್ಲೀಲ ಚಿತ್ರ ತಯಾರಿಕೆ ಮತ್ತು ವಿತರಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಕೋರ್ಟ್ ಉದ್ಯಮಿ ಹಾಗೂ ನಟಿ ಶಿಲ್ಪಾಶೆಟ್ಟಿ ಪತಿ ರಾಜ್ ಕುಂದ್ರಾಗೆ ಮತ್ತೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.

ಮುಂಬೈ: ಅಶ್ಲೀಲ ಚಿತ್ರ ತಯಾರಿಕೆ ಮತ್ತು ವಿತರಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಕೋರ್ಟ್ ಉದ್ಯಮಿ ಹಾಗೂ ನಟಿ ಶಿಲ್ಪಾಶೆಟ್ಟಿ ಪತಿ ರಾಜ್ ಕುಂದ್ರಾಗೆ ಮತ್ತೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.

ಅಶ್ಲೀಲ ಚಿತ್ರ ಪ್ರಕರಣದಲ್ಲಿ ನಟಿ ಶಿಲ್ಪಾ ಶೆಟ್ಟಿಯ ಪತಿ ರಾಜ್ ಕುಂದ್ರಾ ಮತ್ತು ರಯಾನ್ ಥೋರ್ಪ್ ಅವರ ಬಂಧನ ಅವಧಿ ಮುಕ್ತಾಯವಾದ ಹಿನ್ನಲೆಯಲ್ಲಿ ಪೊಲೀಸರು ಅವರನ್ನು ಇಂದು ಮತ್ತೆ ನ್ಯಾಯಾಲಯದ ಮುಂದೆ ಹಾಜರುಪಡಿಸಿದರು. ಈ ವೇಳೆ ನಡೆದ ವಾದ-ಪ್ರತಿವಾದಗಳ ರಾಜ್ ಕುಂದ್ರಾಗೆ ಮತ್ತೆ 14  ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.

ಅಶ್ಲೀಲ ಚಿತ್ರ ತಯಾರಿಕೆ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ ಕುಂದ್ರಾ ಅವರನ್ನು ಕಳೆದ ವಾರ ಬಂಧಿಸಲಾಗಿದ್ದು, ಸದ್ಯ ಅವರು ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಹಾಟ್‌ಶಾಟ್‌ಗಳು ಎಂಬ ಆ್ಯಪ್ ಮೂಲಕ ಅಶ್ಲೀಲ ಚಿತ್ರಗಳನ್ನು ಸ್ಟ್ರೀಮಿಂಗ್‌ ಮಾಡುತ್ತಿದ್ದರು ಎನ್ನಲಾಗಿದೆ. ಇದೇ ಆರೋಪದ ಮೇರೆಗೆ ಭಾರತೀಯ  ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 420 (ಮೋಸ), 34 (ಸಾಮಾನ್ಯ ಉದ್ದೇಶ), 292 ಮತ್ತು 293 (ಅಶ್ಲೀಲ ಮತ್ತು ಅಸಭ್ಯ ಜಾಹೀರಾತುಗಳು ಮತ್ತು ಪ್ರದರ್ಶನಗಳಿಗೆ ಸಂಬಂಧಿಸಿದ) ಮತ್ತು ಐಟಿ ಕಾಯ್ದೆಯ ಸಂಬಂಧಿತ ವಿಭಾಗಗಳು, ಮಹಿಳಾ (ನಿಷೇಧ) ಕಾಯ್ದೆ ಮತ್ತು ಅಸಭ್ಯ ಪ್ರಾತಿನಿಧ್ಯದ ಅಡಿಯಲ್ಲಿ ರಾಜ್  ಕುಂದ್ರಾ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

SCROLL FOR NEXT