ದೇಶ

'ಪಕ್ಷ ಮತ್ತು ಕರ್ನಾಟಕಕ್ಕೆ ನಿಮ್ಮ ಕೊಡುಗೆ ಸ್ಮರಣೀಯ': ಯಡಿಯೂರಪ್ಪರನ್ನು ಹಾಡಿ ಹೊಗಳಿದ ಪ್ರಧಾನಿ ಮೋದಿ 

Sumana Upadhyaya

ನವದೆಹಲಿ: ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕರ್ನಾಟಕದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಕೆಲವೇ ಹೊತ್ತಿನ ನಂತರ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದಾರೆ.

ಬಿ ಎಸ್ ಯಡಿಯೂರಪ್ಪನವರು ಪಕ್ಷಕ್ಕೆ ಮತ್ತು ಕರ್ನಾಟಕ ರಾಜ್ಯದ ಬೆಳವಣಿಗೆಗೆ ನೀಡಿರುವ ಅವಿಸ್ಮರಣೀಯ ಕೊಡುಗೆಗಳನ್ನು ಹೇಳಲು ಪದಗಳಿಂದ ಸಾಧ್ಯವಿಲ್ಲ. ದಶಕಗಳ ಕಾಲ ಅವರು ಅವಿರತವಾಗಿ ದುಡಿದು, ಕರ್ನಾಟಕದಾದ್ಯಂತ ಸಂಚಾರ ಮಾಡಿ ಜನರ ಆಶೋತ್ತರಗಳಿಗೆ ಸ್ಪಂದಿಸಿದ್ದಾರೆ ಮತ್ತು ಕೆಲಸ ಮಾಡಿದ್ದಾರೆ.

ಸಾಮಾಜಿಕ ನ್ಯಾಯ ಮತ್ತು ಅಭಿವೃದ್ಧಿಗೆ ಯಡಿಯೂರಪ್ಪನವರ ಬದ್ಧತೆ ಶ್ಲಾಘನೀಯ ಎಂದು ಪ್ರಧಾನಿ ಹೊಗಳಿದ್ದಾರೆ.

ಇದೇ ಸಂದರ್ಭದಲ್ಲಿ ನೂತನ ಸಿಎಂ ಬಸವರಾಜ ಬೊಮ್ಮಾಯಿಯವರಿಗೆ ಅಭಿನಂದನೆ ಸಲ್ಲಿಸಿರುವ ಪ್ರಧಾನಿ ಮೋದಿ, ಸಾಕಷ್ಟು ಶಾಸಕಾಂಗ ಮತ್ತು ಕಾರ್ಯಾಂಗ ಅನುಭವ ಹೊಂದಿರುವ ಬೊಮ್ಮಾಯಿಯವರು ಸರ್ಕಾರದ ಕೆಲಸ, ಯೋಜನೆಗಳನ್ನು ಜನತೆಗೆ ಸರಿಯಾಗಿ ಮುಟ್ಟಿಸುವಲ್ಲಿ ಯಶಸ್ವಿಯಾಗುತ್ತಾರೆ ಎಂಬ ವಿಶ್ವಾಸ ನನಗಿದೆ. ಅವರ ಭವಿಷ್ಯ ಉಜ್ವಲವಾಗಿರಲಿ ಎಂದು ಶುಭಾಶಯ ತಿಳಿಸಿದ್ದಾರೆ.

ನೂತನ ಮುಖ್ಯಮಂತ್ರಿಗೆ ಯಡಿಯೂರಪ್ಪ ಶುಭಾಶಯ: ತಮ್ಮ ಆಪ್ತ ಶಿಷ್ಯ ಬಸವರಾಜ ಬೊಮ್ಮಾಯಿ ಸಿಎಂ ಆಗಿರುವುದು ಬಿ ಎಸ್ ಯಡಿಯೂರಪ್ಪನವರಿಗೆ ದುಃಖದ ನಡುವೆ ಸಮಾಧಾನ ತಂದಿದೆ ಎನ್ನಬಹುದು.ನೂತನ ಸಿಎಂಗೆ ಅವರು ಶುಭ ಕೋರಿದ್ದಾರೆ. ಇನ್ನು ತಮ್ಮ ಬಗ್ಗೆ ಒಳ್ಳೆಯ ಮಾತುಗಳನ್ನಾಡಿದ ಪ್ರಧಾನಿ ಮೋದಿಯವರಿಗೆ ಯಡಿಯೂರಪ್ಪನವರು ಧನ್ಯವಾದ ಹೇಳಿದ್ದಾರೆ. 

SCROLL FOR NEXT