ದೇಶ

ಪೆಗಾಸಸ್ ಮೂಲಕ ಪ್ರಧಾನಿ ಮೋದಿಯಿಂದ ಪ್ರಜಾಪ್ರಭುತ್ವದ ಆತ್ಮದ ಮೇಲೆ ದಾಳಿ: ರಾಹುಲ್ ಗಾಂಧಿ 

Srinivas Rao BV

ನವದೆಹಲಿ: ಪೆಗಾಸಸ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಪ್ರಜಾಪ್ರಭುತ್ವದ ಆತ್ಮದ ಮೇಲೆ ದಾಳಿ ಮಾಡಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. 

ಪೆಗಾಸಸ್ ಗೂಢಚರ್ಯೆ ವಿಷಯದ ಬಗ್ಗೆ ಸಂಸತ್ ನಲ್ಲಿ ಪ್ರಧಾನಿ ಅಥವಾ ಗೃಹ ಸಚಿವ ಅಮಿತ್ ಶಾ ಅವರ ಸಮ್ಮುಖದಲ್ಲಿ ಚರ್ಚೆ ನಡೆಸುವ ಆಗ್ರಹದಲ್ಲಿ ವಿಪಕ್ಷ ಒಗ್ಗಟ್ಟಿನಿಂದ ಇದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. 

ಸಂಸತ್ ಕಲಾಪಕ್ಕೆ ಪ್ರತಿಪಕ್ಷಗಳು ಅಡ್ಡಿಯುಂಟುಮಾಡುತ್ತಿವೆ ಎಂಬ ಸರ್ಕಾರದ ಆರೋಪವನ್ನು ರಾಹುಲ್ ಗಾಂಧಿ ತಳ್ಳಿಹಾಕಿದ್ದು, ತಮ್ಮ ಕರ್ತವ್ಯವನ್ನಷ್ಟೇ ಪ್ರತಿಪಕ್ಷಗಳು ನಿರ್ವಹಿಸುತ್ತಿವೆ ಎಂದು ಹೇಳಿದ್ದಾರೆ. 

ಸಂಸತ್ ನಲ್ಲಿ ವಿಪಕ್ಷಗಳ ಧ್ವನಿಯನ್ನು ಅಡಗಿಸಲಾಗುತ್ತಿದೆ. ಸರ್ಕಾರ ಪೆಗಾಸಸ್ ನ ತಂದು ಭಾರತೀಯರ ಮೇಲೆ ಗೂಢಚರ್ಯೆ ನಡೆಸುತ್ತಿದೆಯೇ? ಎಂದಷ್ಟೇ ಕೇಳುತ್ತಿದ್ದೆವೆ, ನಾವು ಸಂಸತ್ ಕಲಾಪಕ್ಕೆ ಅಡ್ಡಿ ಉಂಟುಮಾಡುತ್ತಿಲ್ಲ. ನಮ್ಮ ಕರ್ತವ್ಯವನ್ನಷ್ಟೇ ನಿಭಾಯಿಸುತ್ತಿದ್ದೇವೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. "ಪೆಗಾಸಸ್ ರಾಷ್ಟ್ರೀಯತೆಗೆ ಸಂಬಂಧಿಸಿದ ವಿಷಯವಾಗಿದೆ. ಇದು ಗೌಪ್ಯತೆಯ ವಿಷಯವಲ್ಲ, ರಾಷ್ಟ್ರವಿರೋಧಿ ಕೆಲಸ" ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. 

SCROLL FOR NEXT