ದೇಶ

ಸಹಜ ಸ್ಥಿತಿಗೆ ಬಂದ ನಂತರ ಜಮ್ಮು ಮತ್ತು ಕಾಶ್ಮೀರಕ್ಕೆ ಮತ್ತೆ ರಾಜ್ಯದ ಸ್ಥಾನಮಾನ: ರಾಜ್ಯಸಭೆಗೆ ಕೇಂದ್ರ ಮಾಹಿತಿ

Lingaraj Badiger

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಸಾಮಾನ್ಯ ಸ್ಥಿತಿ ಪುನಃಸ್ಥಾಪಿಸಿದ ನಂತರ "ಸೂಕ್ತ" ಸಮಯದಲ್ಲಿ ರಾಜ್ಯದ ಸ್ಥಾನಮಾನ ನೀಡಲಾಗುವುದು ಎಂದು ಕೇಂದ್ರ ಸರ್ಕಾರ ಬುಧವಾರ ಸಂಸತ್ತಿನಲ್ಲಿ ತಿಳಿಸಿದೆ.

ಜಮ್ಮು ಮತ್ತು ಕಾಶ್ಮೀರಕ್ಕೆ ಮತ್ತೆ ರಾಜ್ಯದ ಸ್ಥಾನ ನೀಡುವ ಬಗ್ಗೆ ಯಾವುದೇ ಪ್ರಸ್ತಾಪವಿದೆಯೇ ಮತ್ತು ವಿವಿಧ ಸಂವಹನ ವಿಧಾನಗಳ ಮೇಲಿನ ವರ್ಷವಿಡೀ ನಿಷೇಧವನ್ನು ಕೊನೆಗೊಳಿಸುವ ಪ್ರಯತ್ನ ನಡೆಯುತ್ತಿದೆಯೇ ಎಂಬ ಪ್ರಶ್ನೆಗೆ 
ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ್ ರೈ ಅವರು ರಾಜ್ಯಸಭೆಗೆ ಲಿಖಿತ ಉತ್ತ ನೀಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ಸಾಮಾನ್ಯ ಸ್ಥಿತಿಗೆ ಬಂದ ನಂತರ ಸೂಕ್ತ ಸಮಯದಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ನೀಡಲಾಗುವುದು ಎಂದು ರೈ ಹೇಳಿದರು.

ಸಂವಿಧಾನಾತ್ಮಕ ಬದಲಾವಣೆ ಹಿನ್ನೆಲೆಯಲ್ಲಿ "ಜಮ್ಮು ಮತ್ತು ಕಾಶ್ಮೀರದ ರಾಜ್ಯದ ಸ್ಥಾನಮಾನ ರದ್ದುಗೊಳಿಸಿ ಕೇಂದ್ರಾಡಳಿತ ಪ್ರದೇಶವಾಗಿ ಮಾಡಲಾಗಿದೆ. ರಾಷ್ಟ್ರೀಯ ಹಿತಾಸಕ್ತಿ ಮತ್ತು ಕಾಶ್ಮೀರದ ಭದ್ರತೆಯ ಹಿತದೃಷ್ಟಿಯಿಂದ, ವಿವಿಧ ಸಂವಹನ ಮಾರ್ಗಗಳಾದ ಅಂತರ್ಜಾಲ ಮತ್ತು ಮೊಬೈಲ್ ಸೇವೆಗಳ ಮೇಲೆ ತಾತ್ಕಾಲಿಕ ನಿರ್ಬಂಧಗಳನ್ನು ವಿಧಿಸಲಾಗಿದೆ" ಎಂದು ಸಚಿವರು ಹೇಳಿದರು.

ಈ ವಿಷಯವನ್ನು "ಕಾಲಕಾಲಕ್ಕೆ ಪರಿಶೀಲಿಸಲಾಗುತ್ತಿದೆ ಮತ್ತು ಹೇರಿದ ನಿರ್ಬಂಧಗಳನ್ನು ಹಂತಹಂತವಾಗಿ ಸಡಿಲಿಸಲಾಗುತ್ತಿದೆ. ಫೆಬ್ರವರಿ 5 ರಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ 4 ಜಿ ಇಂಟರ್ನೆಟ್ ಡೇಟಾ ಸೇವೆಗಳನ್ನು ಪುನಃಸ್ಥಾಪಿಸಲಾಗಿದೆ ಎಂದು ಅವರು ತಿಳಿಸಿದರು.

SCROLL FOR NEXT