ಓಂ ಪ್ರಕಾಶ್ ಶರ್ಮಾ 
ದೇಶ

ಎಎಪಿ ಶಾಸಕ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಧಾನಸಭೆಯಿಂದ ಬಿಜೆಪಿ ಶಾಸಕ ಓಂ ಪ್ರಕಾಶ್ ಶರ್ಮಾ ಅಮಾನತು

ಮುಂಗಾರು ಅಧಿವೇಶನದ ಮೊದಲ ದಿನದಂದು ಎಎಪಿ ಶಾಸಕರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಬಿಜೆಪಿ ಶಾಸಕ ಓಂ ಪ್ರಕಾಶ್ ಶರ್ಮಾ ರನ್ನು ದೆಹಲಿ ವಿಧಾನಸಭಾ ಸ್ಪೀಕರ್ ರಾಮ್ ನಿವಾಸ್ ಗೋಯೆಲ್ ಸದನದಿಂದ ಅಮಾನತುಗೊಳಿಸಿದ್ದಾರೆ. 

ನವದೆಹಲಿ: ಮುಂಗಾರು ಅಧಿವೇಶನದ ಮೊದಲ ದಿನದಂದು ಎಎಪಿ ಶಾಸಕರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಬಿಜೆಪಿ ಶಾಸಕ ಓಂ ಪ್ರಕಾಶ್ ಶರ್ಮಾ ರನ್ನು ದೆಹಲಿ ವಿಧಾನಸಭಾ ಸ್ಪೀಕರ್ ರಾಮ್ ನಿವಾಸ್ ಗೋಯೆಲ್ ಸದನದಿಂದ ಅಮಾನತುಗೊಳಿಸಿದ್ದಾರೆ. 

ಸ್ಪೀಕರ್ ನೀಡಿದ ನಿರ್ದೇಶನಗಳನ್ನು ಧಿಕ್ಕರಿಸಿ, ಸದನದ ಕಾರ್ಯಚಟುವಟಿಕೆಗೆ ಅವಕಾಶ ನೀಡದ ಕಾರಣಕ್ಕಾಗಿ ಮಾರ್ಷಲ್ ರಿಂದ ಬಿಜೆಪಿ ಶಾಸಕರಾದ ವಿಜೇಂದರ್ ಗುಪ್ತಾ ಮತ್ತು ಅನಿಲ್ ಬಾಜ್ಪೈ  ಹೊರಗೆ ಕಳುಹಿಸಲಾಯಿತು. ಕೇಂದ್ರವು ತಮ್ಮ ಅಧಿಕಾರಗಳ ಕಸಿದುಕೊಳ್ಳುತ್ತಿದೆ ಎಂದು ಗೋಯೆಲ್ ತಮ್ಮ ದುಃಖ ಮತ್ತು ಆಳವಾದ ನೋವವನ್ನು ವ್ಯಕ್ತಪಡಿಸಿದರು.

ತಮಗೆ ಮಾತನಾಡಲು ಹೆಚ್ಚು ಅವಕಾಶ ನೀಡುತ್ತಿಲ್ಲ ಎಂದು ಆರೋಪಿಸಿ ಬಿಜೆಪಿ ಶಾಸಕರು ಗದ್ದಲ ಎಬ್ಬಿಸಿದ್ದರು. ಸದನದ ನಿಯಮಗಳ ಪ್ರಕಾರ ಪ್ರತಿಪಕ್ಷದ ಶಾಸಕರು 20 ನಿಮಿಷಗಳಿಗಿಂತ ಒಂದು ಸೆಕೆಂಡ್ ಹೆಚ್ಚುವರಿ ಮಾತನಾಡಲು ನಾನು ಅನುಮತಿಸುವುದಿಲ್ಲ ಎಂದು ಗೋಯೆಲ್ ಹೇಳಿದರು.

ವಿಧಾನಸಭೆಯ ಮುಂಗಾರು ಅಧಿವೇಶನದ ಮೊದಲ ದಿನದ ಪ್ರಕ್ರಿಯೆಗಳು ಪ್ರಾರಂಭವಾದ ತಕ್ಷಣ, ಬಿಜೆಪಿ ಶಾಸಕರು ಪ್ರಶ್ನೆ ಗಂಟೆಯ ಸಮಯದಲ್ಲಿ ವಿಚಾರಣೆ ನಡೆಸಬೇಕೆಂದು ಒತ್ತಾಯಿಸಿದರು. ಅಲ್ಲದೆ ಸದನದ ಬಾವಿಗಿಳಿದು ಗದ್ದಲ ಎಬ್ಬಿಸಿದರು. 

ಇದಕ್ಕೆ ಪ್ರತಿಯಾಗಿ ಆಡಳಿತಾರೂಢ ಎಎಪಿಯ ಕೆಲ ಶಾಸಕರು ಸಹ ಬಾವಿಗೆ ಪ್ರವೇಶಿಸಿದರು. ಇದರಿಂದ ಪರಿಸ್ಥಿತಿ ಉಲ್ಬಣಗೊಂಡಿತು. ಕೂಡಲೇ ಸ್ಪೀಕರ್ ಸದಸ್ಯರನ್ನು ತಮ್ಮ ಸ್ಥಾನಗಳಿಗೆ ಮರಳಬೇಕು. ಸದನ ನಡೆಸಲು ಅವಕಾಶ ನೀಡಬೇಕು ಎಂದು ಮನವಿ ಮಾಡಿದರು. ಯಾರೂ ಸ್ಪೀಕರ್ ಮಾತಿಗೆ ಬೆಲೆ ಕೊಡದೆ ಪ್ರತಿಭಟನೆ ನಡೆಸಿದರು. 

ಈ ವೇಳೆ ಶಾಸಕ ಓಂ ಪ್ರಕಾಶ್ ಶರ್ಮಾ ಎಎಪಿ ಶಾಸಕರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

SCROLL FOR NEXT