ದೇಶ

ಮುಂಬೈ ಸೇರಿ ಮಹಾರಾಷ್ಟ್ರದ 25 ಜಿಲ್ಲೆಗಳಲ್ಲಿ ಕೊರೋನಾ ನಿರ್ಬಂಧ ಸಡಿಲಿಕೆ ಸಾಧ್ಯತೆ: ಮಹಾ ಆರೋಗ್ಯ ಸಚಿವ

Lingaraj Badiger

ಮುಂಬೈ: ಕೋವಿಡ್-19 ಪಾಸಿಟಿವ್ ಪ್ರಮಾಣ ರಾಜ್ಯದ ಸರಾಸರಿಗಿಂತ ಕಡಿಮೆ ವರದಿಯಾಗುತ್ತಿರುವ ಮುಂಬೈ ಮತ್ತು ಮಹಾರಾಷ್ಟ್ರದ ಇತರ 24 ಜಿಲ್ಲೆಗಳಲ್ಲಿ ಕೋವಿಡ್ ನಿರ್ಬಂಧಗಳನ್ನು ಸಡಿಲಗೊಳಿಸುವ ಸಾಧ್ಯತೆಯಿದೆ ಎಂದು ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ಟೋಪೆ ಅವರು ಗುರುವಾರ ಹೇಳಿದ್ದಾರೆ.

ಎರಡು ಡೋಸ್ ಕೋವಿಡ್ ಲಸಿಕೆ ಹಾಕಿಸಿಕೊಂಡವರು ಮುಂಬೈನ ಸ್ಥಳೀಯ ರೈಲುಗಳಲ್ಲಿ ಪ್ರಯಾಣಿಸಲು ಅವಕಾಶ ನೀಡುವ ಬಗ್ಗೆ ಸರ್ಕಾರ ಚಿಂತಿಸುತ್ತಿದೆ ಎಂದು ಅವರು ಹೇಳಿದರು.

ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯದ ಕೋವಿಡ್-19 ಕಾರ್ಯಪಡೆಯ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಟೋಪೆ ಅವರು, ಉಳಿದ 11 ಜಿಲ್ಲೆಗಳಲ್ಲಿ ಸೋಂಕಿನ ಪ್ರಮಾಣ ಹೆಚ್ಚಿರುವ ಹಿನ್ನೆಲೆಯಲ್ಲಿ ಹೆಚ್ಚಿನ ನಿರ್ಬಂಧಗಳನ್ನು ವಿಧಿಸಬಹುದು ಎಂದರು.

"ಮುಂಬೈ ಸೇರಿದಂತೆ 25 ಜಿಲ್ಲೆಗಳಲ್ಲಿ ಕೋವಿಡ್ ನಿರ್ಬಂಧ ಸಡಿಲಿಸುವ ಬಗ್ಗೆ ನಾವು ಚರ್ಚಿಸಿದ್ದೇವೆ. ಇಲ್ಲಿ ಪಾಸಿಟಿವ್ ಪ್ರಮಾಣವು ರಾಜ್ಯದ ಸರಾಸರಿಗಿಂತ ಕಡಿಮೆಯಾಗಿದೆ. ನಿರ್ಬಂಧ ಸಡಿಲಿಕೆ ಬಗ್ಗೆ ಒಂದೆರಡು ದಿನಗಳಲ್ಲಿ ಅಂತಿಮ ನಿರ್ಧಾರ ಹೊರಬರಲಿದೆ" ಎಂದು ಅವರು ಹೇಳಿದರು.

SCROLL FOR NEXT