ದೇಶ

ವಿದೇಶಗಳಿಗೆ 6.4 ಕೋಟಿ ಡೋಸ್ ಕೊರೊನಾ ಲಸಿಕೆ ರವಾನೆ: ಕೇಂದ್ರ ಸರ್ಕಾರ

Srinivasamurthy VN

ನವದೆಹಲಿ: ಭಾರತ ಸರ್ಕಾರ ಈ ವರೆಗೂ ವಿದೇಶಗಳಿಗೆ 6.4 ಕೋಟಿ ಡೋಸ್ ಕೊರೊನಾ ಲಸಿಕೆ ರವಾನೆ ಮಾಡಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

ಈ ಕುರಿತಂತೆ ಕೇಂದ್ರ ಸರ್ಕಾರ ಗುರುವಾರ ಸಂಸತ್ತಿಗೆ ಮಾಹಿತಿ ನೀಡಿದ್ದು, ಈ ವರ್ಷದ ಜನವರಿ 12 ರಿಂದ ಜುಲೈ 22ರ ಅವಧಿಯಲ್ಲಿ ಒಟ್ಟು 6.4 ಕೋಟಿ ಕೋವಿಡ್ ಲಸಿಕೆಗಳನ್ನು ವಿದೇಶಗಳಿಗೆ ಕಳುಹಿಸಿಕೊಟ್ಟಿದೆ.

ಲೋಕಸಭೆಯಲ್ಲಿ ಈ ಕುರಿತು ಲಿಖಿತ ಉತ್ತರ ನೀಡಿದ ನಾಗರಿಕ ವಿಮಾನಯನ ಸಚಿವ ವಿ.ಕೆ.ಸಿಂಗ್‌ ಅವರು, ಈ ಅವಧಿಯಲ್ಲಿ ಒಟ್ಟಾಗಿ 42.2 ಕೋಟಿ ಡೋಸ್‌ ಲಸಿಕೆಗಳನ್ನು ವಿಮಾನಗಳ ಮೂಲಕ ರವಾನಿಸಲಾಗಿದೆ. ಈ ಪೈಕಿ 35.8 ಕೋಟಿ ಡೋಸ್‌ ಲಸಿಕೆಗಳನ್ನು ದೇಶೀಯ ವಿಮಾನಗಳ ಮೂಲಕ  ಕಳುಹಿಸಲಾಗಿದೆ. 

ಇದೇ ಅವಧಿಯಲ್ಲಿ ದೇಶದಾದ್ಯಂತ ನೀಡಲಾಗಿರುವ ಲಸಿಕೆಯ ಪ್ರಮಾಣ 45 ಕೋಟಿಗೂ ಅಧಿಕವಾಗಿದೆ. ಇವರಲ್ಲಿ 18–44 ವರ್ಷದವರಿಗೆ ನೀಡಿದ 15.38 ಕೋಟಿ ಡೋಸ್‌ ಲಸಿಕೆಗಳು ಸೇರಿವೆ ಎಂದು ತಿಳಿಸಿದ್ದಾರೆ. 
 

SCROLL FOR NEXT