ದೇಶ

ರಾಜ್ ಕುಂದ್ರಾ ಅಶ್ಲೀಲ ಚಿತ್ರ ಪ್ರಕರಣ: ನಟಿ ಶೆರ್ಲಿನ್ ಚೋಪ್ರಾ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ರಾಜ್ ಕುಂದ್ರಾ ಅಶ್ಲೀಲ ಚಿತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನ ಖ್ಯಾತ ನಟಿ ಶೆರ್ಲಿನ್ ಚೋಪ್ರಾ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಮುಂಬೈ ಸೆಷನ್ ಕೋರ್ಟ್ ವಜಾಗೊಳಿಸಿದೆ.

ಮುಂಬೈ: ರಾಜ್ ಕುಂದ್ರಾ ಅಶ್ಲೀಲ ಚಿತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನ ಖ್ಯಾತ ನಟಿ ಶೆರ್ಲಿನ್ ಚೋಪ್ರಾ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಮುಂಬೈ ಸೆಷನ್ ಕೋರ್ಟ್ ವಜಾಗೊಳಿಸಿದೆ.

ಈಗಾಗಲೇ ಇದೇ ಅಶ್ಲೀಲ ಚಿತ್ರ ಪ್ರಕರಣದಲ್ಲಿ ಉದ್ಯಮಿ ರಾಜ್ ಕುಂದ್ರಾ ಅವರ ನ್ಯಾಯಾಂಗ ಬಂಧನವನ್ನು ಸೆಷನ್ ಕೋರ್ಟ್ 14 ದಿನಗಳ ವಿಸ್ತರಿಸಿದ್ದು, ಇದರ ಬೆನ್ನಲ್ಲೇ ನಟಿ ಶೆರ್ಲಿನ್ ಚೋಪ್ರಾ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸುವ ಮೂಲಕ ನಟಿಗೆ ಶಾಕ್ ನೀಡಿದೆ.

ಮೂಲಗಳ ಪ್ರಕಾರ ಉದ್ಯಮಿ ರಾಜ್ ಕುಂದ್ರಾ ಅವರ ಅಶ್ಲೀಲ ಚಿತ್ರ ಉದ್ಯಮದಲ್ಲಿ ನಟಿ ಶೆರ್ಲಿನ್ ಚೋಪ್ರಾ ಅವರದ್ದೂ ಕೂಡ ಪಾಲಿದ್ದು, ಇದೇ ಕಾರಣಕ್ಕೆ ಈ ಪ್ರಕರಣದಲ್ಲಿ ಅವರ ವಿಚಾರಣೆ ನಡೆಸಲು ತನಿಖಾಧಿಕಾರಿಗಳು ಮುಂದಾಗಿದ್ದಾರೆ ಎಂಬ ಮಾತುಗಳು ಕೇಳಿ ಬಂದಿತ್ತು, ಇದರ ಬೆನ್ನಲ್ಲೇ ಬಂಧನದ  ಭಯದಿಂದಾಗಿ ನಟಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು.

ಇದೇ ವಿಚಾರವಾಗಿ ಮಾತನಾಡಿದ್ದ ನಟಿ ಶೆರ್ಲಿನ್ ಚೋಪ್ರಾ ರಾಜ್​ ಕುಂದ್ರಾ ಅವರ ಬಗ್ಗೆ ಮೊದಲು ಮುಂಬೈ ಪೊಲೀಸರಿಗೆ ಮಾಹಿತಿ ನೀಡಿದ್ದು ತಾವೇ ಎಂದು ಶೆರ್ಲಿನ್​ ಚೋಪ್ರಾ ಹೇಳುತ್ತಿದ್ದಾರೆ. ಈ ನಿಟ್ಟಿನಲ್ಲಿ ಹಲವು ಆಯಾಮಗಳಿಂದ ತನಿಖೆ ಮುಂದುವರಿದಿದ್ದು, ಅನೇಕ ನಟಿಯರ ಹೆಸರುಗಳು ಹೊರಬರುತ್ತಿವೆ.  ಶಿಲ್ಪಾ ಶೆಟ್ಟಿಗೆ ಪೊಲೀಸರು ಇನ್ನೂ ಕ್ಲೀನ್ ಚಿಟ್ ಕೊಟ್ಟಿಲ್ಲ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!