ಸಾಂದರ್ಭಿಕ ಚಿತ್ರ 
ದೇಶ

ಬಂಧನದಲ್ಲಿದ್ದ ಬಾಂಗ್ಲಾದೇಶಿ ಮಹಿಳೆ ಮೇಲೆ 'ಅತ್ಯಾಚಾರ': ಬಿಎಸ್‌ಎಫ್ ಸಬ್ ಇನ್ಸ್‌ಪೆಕ್ಟರ್‌ ಬಂಧನ

ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಅರೆಸೇನಾ ಪಡೆಯ ಶಿಬಿರದೊಳಗೆ ವಿಚಾರಣೆ ನಡೆಸುವ ನೆಪದಲ್ಲಿ ಬಾಂಗ್ಲಾದೇಶದ ಮಹಿಳೆಯನ್ನು ಕರೆತಂದು ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಿಎಸ್‌ಎಫ್ ಸಿಬ್ಬಂದಿ...

ಬೆಂಗಳೂರು: ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಅರೆಸೇನಾ ಪಡೆಯ ಶಿಬಿರದೊಳಗೆ ವಿಚಾರಣೆ ನಡೆಸುವ ನೆಪದಲ್ಲಿ ಬಾಂಗ್ಲಾದೇಶದ ಮಹಿಳೆಯನ್ನು ಕರೆತಂದು ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಿಎಸ್‌ಎಫ್ ಸಿಬ್ಬಂದಿಯೊಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಗೈಘಾಟಾ ಪೊಲೀಸ್ ಠಾಣೆಯಲ್ಲಿ ಸಂತ್ರಸ್ಥ ಮಹಿಳೆ ನೀಡಿದ ದೂರಿನ ಮೇರೆಗೆ ಆರೋಪಿ ಬಿಎಸ್ಎಫ್ ಸಬ್ ಇನ್ಸ್‌ಪೆಕ್ಟರ್‌ನನ್ನು ಗುರುವಾರ ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

"ಜುಲೈ 27 ರ ರಾತ್ರಿ ಈ ಘಟನೆ ನಡೆದಿದೆ. ಘಟನೆ ಬೆಳಕಿಗೆ ಬಂದ ನಂತರ, ಸ್ವತ ಬಿಎಸ್ಎಫ್, ಆರೋಪಿ ಸಿಬ್ಬಂದಿಯನ್ನು ಸ್ಥಳೀಯ ಪೊಲೀಸರಿಗೆ ಒಪ್ಪಿಸಿ ಅಮಾನತುಗೊಳಿಸಿದೆ ಎಂದು ಅರೆ ಸೇನಾ ಪಡೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಂತ್ರಸ್ಥೆ ಹಾಗೂ ಇನ್ನೊಬ್ಬ ಮಹಿಳೆ, ಬಾಂಗ್ಲಾದೇಶದ ಗೋಪಾಲ್ ಗಂಜ್ ಮೂಲದವರಾಗಿದ್ದು, ಅಕ್ರಮವಾಗಿ ಭಾರತಕ್ಕೆ ಪ್ರವೇಶಿಸುವಾಗ ಬಂಧಿಸಲಾಗಿದೆ. 

ಮಹಿಳೆ ಪೊಲೀಸರಿಗೆ ನೀಡಿರುವ ದೂರಿನ ಪ್ರಕಾರ, ಇಬ್ಬರು ಮಹಿಳೆಯರನ್ನು ಬಿಎಸ್‌ಎಫ್‌ನ 158 ನೇ ಬೆಟಾಲಿಯನ್ ಸಿಬ್ಬಂದಿ ಬಂಧಿಸಿದ್ದಾರೆ, ಅವರು ಕಾನೂನುಬಾಹಿರವಾಗಿ ಜೌಡಂಗಾ ಗಡಿಯ ಮೂಲಕ ಭಾರತ ಪ್ರವೇಶಿಸಿಸಿದ್ದಾರೆ.

"ಬಿಎಸ್ಎಫ್ ಸಿಬ್ಬಂದಿ ಇಬ್ಬರೂ ಮಹಿಳೆಯರನ್ನು ಅರೆಸೇನಾ ಪಡೆಯ ಖರೆರ್ ಮಠ ಶಿಬಿರಕ್ಕೆ ವಿಚಾರಣೆಗಾಗಿ ಕರೆದೊಯ್ದಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಯಾರೂ ಇಲ್ಲದಿದ್ದಾಗ, ಆರೋಪಿ ಬಿಎಸ್‌ಎಫ್ ಸಬ್ ಇನ್ಸ್‌ಪೆಕ್ಟರ್‌ ಮಹಿಳೆಯನ್ನು ವಿಚಾರಣೆ ಮಾಡುವ ನೆಪದಲ್ಲಿ ಅತ್ಯಾಚಾರ ಎಸಗಿದ್ದಾರೆ" ಎಂದು ಪೊಲೀಸ್ ಅಧಿಕಾರಿಯೊಬ್ಬರು ಎಫ್ಐಆರ್ ಉಲ್ಲೇಖಿಸಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!