ದೇಶ

ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೆನೇಡ್ ದಾಳಿ, ಮೂವರು ಭದ್ರತಾ ಸಿಬ್ಬಂದಿಗೆ ಗಾಯ

Lingaraj Badiger

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಉಗ್ರರು ಶುಕ್ರವಾರ ನಡೆಸಿದ ಗ್ರೆನೇಡ್ ದಾಳಿಯಲ್ಲಿ ಭದ್ರತಾ ಪಡೆಯ ಮೂವರು ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉಗ್ರರು ಇಂದು ಮಧ್ಯಾಹ್ನ ಬಾರಾಮುಲ್ಲಾ ಪಟ್ಟಣದ ಖಾನ್ಪೋರಾ ಸೇತುವೆಯ ಬಳಿ ಭದ್ರತಾ ಪಡೆಗಳ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದಾರೆ. 

ಗಾಯಗೊಂಡ ಭದ್ರತಾ ಸಿಬ್ಬಂದಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಉಗ್ರರನ್ನು ಪತ್ತೆ ಹಚ್ಚಲು ಇಡೀ ಪ್ರದೇಶವನ್ನು ಸುತ್ತುವರೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

SCROLL FOR NEXT