ಇಂದು ಬೆಳಗ್ಗೆ ದೆಹಲಿ ತಲುಪಿದ ಬಳಿಕ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ 
ದೇಶ

ದೆಹಲಿ ತಲುಪಿದ ಸಿಎಂ ಬಸವರಾಜ ಬೊಮ್ಮಾಯಿ: ಇಂದು ಮಧ್ಯಾಹ್ನ ಪ್ರಧಾನಿ ಮೋದಿ ಭೇಟಿ 

ರಾಜ್ಯ ಸರ್ಕಾರದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಬಸವರಾಜ ಬೊಮ್ಮಾಯಿಯವರು ಮೊದಲ ದೆಹಲಿ ಪ್ರವಾಸ ಕೈಗೊಂಡಿದ್ದು ಈಗಾಗಲೇ ರಾಜಧಾನಿ ತಲುಪಿದ್ದಾರೆ. ಅವರನ್ನು ದೆಹಲಿ. ಇಂದಿರಾ ಗಾಂಧಿ ವಿಮಾನ ನಿಲ್ದಾಣದ ಬಳಿ ಹಲವರು ಬರಮಾಡಿಕೊಂಡಿದ್ದಾರೆ.

ನವದೆಹಲಿ: ರಾಜ್ಯ ಸರ್ಕಾರದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಬಸವರಾಜ ಬೊಮ್ಮಾಯಿಯವರು ಮೊದಲ ದೆಹಲಿ ಪ್ರವಾಸ ಕೈಗೊಂಡಿದ್ದು ಈಗಾಗಲೇ ರಾಜಧಾನಿ ತಲುಪಿದ್ದಾರೆ. ಅವರನ್ನು ದೆಹಲಿ. ಇಂದಿರಾ ಗಾಂಧಿ ವಿಮಾನ ನಿಲ್ದಾಣದ ಬಳಿ ಹಲವರು ಬರಮಾಡಿಕೊಂಡಿದ್ದಾರೆ.

ಇಂದು ಮಧ್ಯಾಹ್ನ 1 ಗಂಟೆಗೆ ಪ್ರದಾನಿ ಮೋದಿ ಅವರನ್ನು ಭೇಟಿ ಮಾಡಲಿರುವ ಸಿಎಂ ಬಸವರಾಜ ಬೊಮ್ಮಾಯಿ ನಂತರ ಅಮಿತ್ ಶಾ, ಅಧ್ಯಕ್ಷ ಜೆ ಪಿ ನಡ್ಡಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಅವರನ್ನು ಸಹ ಭೇಟಿ ಮಾಡಲಿದ್ದಾರೆ.

ಇಂದು ದೆಹಲಿಯಲ್ಲಿ ವರಿಷ್ಠರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಸಚಿವ ಸಂಪುಟ ರಚನೆ ಬಗ್ಗೆ ಚರ್ಚಿಸಲಿದ್ದಾರೆಯೇ, ನೂತನ ಸಚಿವರ ಪಟ್ಟಿ ಸಿದ್ದ ಮಾಡಿಕೊಂಡೇ ಇಂದು ಹೋಗಿದ್ದಾರೆಯೇ ಎಂಬ ಕುತೂಹಲ ಮನೆಮಾಡಿದೆ.

ಇಂದಿನ ದೆಹಲಿ ಭೇಟಿ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಹಿನ್ನೆಲೆಯಲ್ಲಿ ಕೇವಲ ಧನ್ಯವಾದ ಹೇಳಲು ಬಂದಿರುವ ಭೇಟಿ, ಸಂಪುಟ ರಚನೆ ಬಗ್ಗೆ ಚರ್ಚಿಸುವುದಿಲ್ಲ ಎಂದು ಸಿಎಂ ಬೊಮ್ಮಾಯಿಯವರು ಹೇಳಿದರೂ ಕೂಡ ಹಲವು ಸಚಿವಾಕಾಂಕ್ಷಿ ಶಾಸಕರು ಈಗ ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ.

ದೆಹಲಿಯಲ್ಲಿಂದು ಎಎನ್ ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಸಿಎಂ, ಕೇರಳದಲ್ಲಿ ಕೋವಿಡ್-19 ಸೋಂಕು ಹೆಚ್ಚಾಗುತ್ತಿದ್ದು ನೆರೆ ರಾಜ್ಯಗಳಿಗೆ ಹೊಂದಿಕೊಂಡಿರುವ ಮೂರು ಗಡಿ ಜಿಲ್ಲೆಗಳು ನಮ್ಮ ರಾಜ್ಯದಲ್ಲಿವೆ. ಈ ನಿಟ್ಟಿನಲ್ಲಿ ಆ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಜಾಗೃತರಾಗಿರುವಂತೆ ಮತ್ತು ಕೋವಿಡ್ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇವೆ ಎಂದರು.

ಗಡಿ ಜಿಲ್ಲೆಗಳಲ್ಲಿ ಸೂಕ್ತ ವೈದ್ಯಕೀಯ ಸೌಲಭ್ಯಕ್ಕೆ ಸಿದ್ದತೆ ಮಾಡಿಕೊಳ್ಳುವಂತೆ ಕೂಡ ಸೂಚಿಸಲಾಗಿದೆ. ಬೆಂಗಳೂರಿಗೆ ಹೋದ ನಂತರ ಈ ನಿಟ್ಟಿನಲ್ಲಿ ವಿಸ್ತೃತ ಸಭೆ ನಡೆಸುತ್ತೇನೆ ಎಂದು ಸಿಎಂ ಹೇಳಿದ್ದಾರೆ.  
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಬಲಿತ ದಲಿತ'ನೇ, ನಿಮಗೆ, ನಿಮ್ಮಪ್ಪನಿಗೆ ಇನ್ನೆಷ್ಟು ವರ್ಷ ಮೀಸಲು ಕ್ಷೇತ್ರಗಳು ಬೇಕು?: ಖರ್ಗೆ ವಿರುದ್ಧ ಕುಮಾರಸ್ವಾಮಿ ಕೆಂಡಾಮಂಡಲ

ದೆಹಲಿಯ ಕನ್ನಾಟ್ ಪ್ಲೇಸ್‌ನಲ್ಲಿ ಅ.16ರ CJPಯ ಪ್ರತಿಭಟನೆಗೆ ತಡೆ ನೀಡಲು ಹೈಕೋರ್ಟ್ ನಕಾರ!

ಕಾಕ್ರೋಚ್ ಜನತಾ ಪಾರ್ಟಿ, ಕಾಂಗ್ರೆಸ್ ಎರಡೂ ಒಂದೇ; ಇಲ್ಲಿ ನಿಮ್ಮನ್ನು ಯಾರೂ ಬಂಧಿಸಲ್ಲ: ಪ್ರಿಯಾಂಕ್ ಖರ್ಗೆ ಸ್ಫೋಟಕ ಹೇಳಿಕೆ!

ಪೊಲೀಸ್ ಕಮಿಷನರ್ ಕಚೇರಿ ಮುಂದೆ HDK ಧರಣಿ: ಸ್ಟಿಂಗ್‌ ರೂವಾರಿಯ ಬಂಧನಕ್ಕೆ ಆಗ್ರಹ; ಎರಡು ದಿನಗಳ ಡೆಡ್‌ಲೈನ್‌!

Indian Stock Market: ಕೊನೆಗೂ ಪುಟಿದಿದ್ದ ಭಾರತೀಯ ಷೇರು ಮಾರುಕಟ್ಟೆ, ಸೆನ್ಸೆಕ್ಸ್ ದಾಖಲೆಯ ಏರಿಕೆ